ಬಳ್ಳಾರಿ

ಅತ್ಯಾಚಾರ ನಿಯಂತ್ರಿಸಿ: ಮನವಿ

Published On :

ಬಳ್ಳಾರಿ:  ಮಹಿಳೆಯರ ಮೇಲೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು ಹಾಗೂ ಅಪರಾಧಗಳನ್ನು ನಿಯಂತ್ರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯ (ಎಐಎಂಎಸ್‌ಎಸ್) ಕಾರ್ಯಕರ್ತರು ಇಲ್ಲಿನ ಡಿಸಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ಎಐಎಂಎಸ್‌ಎಸ್ ಜಿಲ್ಲಾಧ್ಯಕ್ಷೆ ಎಂ.ಎನ್. ಮಂಜುಳಾ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ, ಆಸಿಡ್ ದಾಳಿ, ಅತ್ಯಾಚಾರ ನಿಯಂತ್ರಣಕ್ಕೆ ಮುಂದಾಗದ ಕೇಂದ್ರ-ರಾಜ್ಯ ಸರ್ಕಾರಗಳು ಮಹಿಳೆಯರಿಗೆ ರಕ್ಷಣೆ ನೀಡದೇ ನಿರ್ಲಕ್ಷ್ಯ ತಾಳುತ್ತಿವೆ ಎಂದು ದೂರಿದರು. ಮಹಿಳೆಯರ ಮೇಲಿನ ಅಪರಾಧಗಳನ್ನು ನಿಯಂತ್ರಿಸಲು ನ್ಯಾಯಮೂರ್ತಿ ವರ್ಮಾ ಆಯೋಗದ ಶಿಫಾರಸುಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಅಶ್ಲೀಲ ಸಿನಿಮಾ, ಜಾಹೀರಾತುಗಳ ನಿಯಂತ್ರಣಕ್ಕೆ ಕ್ರಮಕೈಗೊಳ್ಳಬೇಕು ಎಂದು  ಒತ್ತಾಯಿಸಿದರು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.