ಅಧಿಕಾರಿ ಅಮಾನತು ರದ್ದುಗೊಳಿಸಿ
ಬಳ್ಳಾರಿ: ಆಹಾರ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಮಾಂಟೆಸ್ವಾಮಿಯವರ ಅಮಾನತು ಆದೇಶ ರದ್ದುಗೊಳಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಬಣ) ಜಿಲ್ಲಾ ಘಟಕದ ಕಾರ್ಯಕರ್ತರು ಗುರುವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ದಕ್ಷ ಅಧಿಕಾರಿಯನ್ನು ಕರ್ತವ್ಯಲೋಪ ಹಾಗೂ ದುರ್ನಡತೆಗಾಗಿ ಸೇವೆಯಿಂದ ಅಮಾನತುಗೊಳಿಸುವುದು ಖಂಡನೀಯವಾಗಿದೆ. ಇದರ ಹಿಂದೆ ರಾಜಕೀಯ ಪಿತೂರಿ ಅಡಗಿದೆ. ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ್ ನಾಯ್ಕ್ ಸಭೆಯಲ್ಲಿ ವಿನಾಕಾರಣ ಮಂಟೆಸ್ವಾಮಿಯವರ ವಿರುದ್ಧ ಆರೋಪ ಮಾಡಿದ್ದಾರೆ. ಇದನ್ನು ನಿರಾಕರಿಸಿ, ತಮ್ಮ ಅಧಿಕಾರವಧಿಯಲ್ಲಿ ಕೈಗೊಂಡ ಕ್ರಮಗಳ ಕುರಿತು ವಿವರಿಸುತ್ತಿದ್ದಾಗ ಇದನ್ನೇ ಉದ್ಧಟತನ ಎಂದು ಬಿಂಬಿಸಿ ಅಮಾನತಿಗೆ ಆದೇಶಿದ್ದಾರೆ. ಆದ್ದರಿಂದ ಕೂಡಲೇ ಹಿಂಪಡೆಯಬೇಕು ಎಂದು ಕಾರ್ಯಕರ್ತರು ಮನವಿಯಲ್ಲಿ ಆಗ್ರಹಿಸಿದ್ದಾರೆ.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಎಸ್. ವಿಘ್ನೇಶ್, ಮುಖಂಡರಾದ ಗೋವರ್ಧನ, ಫೋಟ ರಾಜ, ನಟರಾಜ, ಕುಬೇರ, ಮುರುಳಿ, ಕುಡತಿನಿ ವೆಂಕಟೇಶ, ಶಿವಣ್ಣ, ಗುರು, ಗಾಳೆಪ್ಪ, ಕ್ರಿಷ್ಟೋಪರ್ ಜಾನ್, ಪ್ರಕಾಶ್ ಸೇರಿದಂತೆ ಅನೇಕ ಕಾರ್ಯಕರ್ತರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

