ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಇಂದು
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಜೂ. 20
ಕರ್ನಾಟಕ ಯುವಕ ಸಂಘದ ವತಿಯಿಂದ ದಿ. ಸಿರಿಗೇರಿ ಬಸವರಾಜ್ ಹಾಗೂ ದಿ. ಯಜಮಾನ್ ಶಾಂತಮೂರ್ತಿ ಇವರ ಸ್ಮರಣಾರ್ಥವಾಗಿ ಜಿಲ್ಲಾ ಮಟ್ಟದ ಹೊನಲು-ಬೆಳಕಿನ ಕಬಡ್ಡಿ ಪಂದ್ಯಾವಳಿ ಉದ್ಘಾಟನಾ ಸಮಾರಂಭ ಜೂ. 21ರಂದು ಸಂಜೆ 5 ಗಂಟೆಗೆ ನಗರದ ಶೆಟ್ರು ಗುರುಶಾಂತಪ್ಪ ಕಾಲೇಜು ಆವರಣದಲ್ಲಿ ನಡೆಯಲಿದೆ.
ಹರಪನಹಳ್ಳಿ ಶಾಸಕ, ಬಿಡಿಸಿಸಿ ಬ್ಯಾಂಕ್‌ನ ಅಧ್ಯಕ್ಷ ಎಂ.ಪಿ. ರವೀಂದ್ರ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಕರ್ನಾಟಕ ಯುವಕ ಸಂಘದ ಅಧ್ಯಕ್ಷ ವಿ.ಎಸ್. ಬಸವರಾಜ್ ಅಧ್ಯಕ್ಷತೆ ವಹಿಸಲಿದ್ದಾರೆ. ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜೂ. 22ರಂದು ಸಂಜೆ 7 ಗಂಟೆಗೆ ಬಹುಮಾನ ವಿತರಣೆ ಹಾಗೂ ಸಮಾರೋಪ ಸಮಾರಂಭ ನಡೆಯಲಿದೆ. ಲೆಕ್ಕ ಪರಿಶೋಧಕ ಸಿರಿಗೇರಿ ಪನ್ನರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಎಚ್.ಎಂ. ಗುರುಸಿದ್ದಸ್ವಾಮಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ ಅವರು ಬಹುಮಾನ ವಿತರಣೆ ಮಾಡಲಿದ್ದಾರೆ ಎಂದು ಸಂಘದ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

