ಬಳ್ಳಾರಿ

ಕೂಡ್ಲಿಗಿ ತಾಲೂಕಿಗೆ ಸಚಿವ ಆಂಜನೇಯ ಭೇಟಿ

Published On :

ಕೂಡ್ಲಿಗಿ:  ತಾಲೂಕಿನ ಎಂ.ಬಿ. ಅಯ್ಯನಹಳ್ಳಿಯಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ವಸತಿ ನಿಲಯಕ್ಕೆ ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಶುಕ್ರವಾರ ರಾತ್ರಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಚಿವ ಆಂಜನೇಯ, ವಸತಿ ನಿಲಯದಲ್ಲಿರುವರುವ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಅಲ್ಲದೇ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದ ಸಚಿವರು, ವಸತಿ ನಿಲಯಗಳಲ್ಲಿ ಸ್ವಚ್ಛತೆ ಹಾಗೂ ಮೂಲ ಸೌಕರ್ಯಗಳನ್ನು ಒದಗಿಸುವಲ್ಲಿ ಸದಾ ಎಚ್ಚರಿಕೆಯಿಂದಿರಬೇಕು. ಅಧಿಕಾರಿಗಳು ಬೇಜವಾಬ್ದಾರಿ ವಹಿಸಿದರೆ ತಕ್ಷಣವೇ ಕ್ರಮಕೈಗೊಳ್ಳಲಾಗುವುದೆಂದು ಎಚ್ಚರಿಸಿದರು. ನಂತರ ಅಡುಗೆ ಕೋಣೆ, ದಾಸ್ತಾನು ಕೋಣೆಗಳ ಪರಿಶೀಲನೆ ನಡೆಸಿದರು. ಪರಿಶಿಷ್ಟ ವರ್ಗಗಳ ಜಿಲ್ಲಾ ಅಧಿಕಾರಿ ಸಿ. ಪೋಲಯ್ಯ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ರಾಜಪ್ಪ, ತಾಲೂಕು ಅಧಿಕಾರಿ ಎಂ.ಎಲ್.ಎನ್. ಮೂರ್ತಿ, ವಸತಿ ನಿಲಯ ಮೇಲ್ವಿಚಾರಕ ಸುಬ್ಬರಾಯ ಇತರರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.