ಬಳ್ಳಾರಿ

ಹೊಲಿಗೆ ತರಬೇತಿಗೆ ಅರ್ಜಿ

Published On :

ಬಳ್ಳಾರಿ:  ಕೈಮಗ್ಗ ಮತ್ತು ಜವಳಿ ಇಲಾಖೆಯು ನೂತನ ಜವಳಿ ನೀತಿ 2013- 18 ಯೋಜನೆಯಡಿ 45 ದಿನಗಳ ಜೀನ್ಸ್ ಬಟ್ಟೆ ಹೊಲಿಗೆ (ಸೀವಿಂಗ್ ಮಷಿನ್ ಆಪರೇಟರ್) ತರಬೇತಿ ನೀಡಲು ಅರ್ಹ ನಿರುದ್ಯೋಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕನಿಷ್ಠ 5ನೇ ತರಗತಿವರೆಗೆ ವ್ಯಾಸಂಗ ಮಾಡಿರಬೇಕು. ತರಬೇತಿ ಅವಧಿಯಲ್ಲಿ ಶಿಷ್ಯವೇತನ ನೀಡಲಾಗುವುದು. ತರಬೇತಿ ನಂತರ ತಮ್ಮ ಸ್ವ-ಇಚ್ಛಾಶಕ್ತಿಯಿಂದ ಸ್ವಯಂ ಉದ್ಯೋಗ ಕೈಗೊಳ್ಳಲು, ವೇತನ ಉದ್ಯೋಗ ಪಡೆಯಲು ಬದ್ಧರಾಗಿರಬೇಕು. ಆಯಾ ತಾಲೂಕು ಪಂಚಾಯ್ತಿ ಕಚೇರಿ, ಕೌಶಲ್ಯ ಅಭಿವೃದ್ಧಿ ತರಬೇತಿ ಕೇಂದ್ರ, ನೇಕಾರರ ಸಹಕಾರ ಸಂಘಗಳಿಂದ ಅರ್ಜಿ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ವಿದ್ಯಾರ್ಹತೆ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಇತ್ತೀಚಿನ ಭಾವಚಿತ್ರ ಮತ್ತಿತರ ಅಗತ್ಯ ದಾಖಲೆಗಳೊಂದಿಗೆ ಜೂ. 30ರೊಳಗಾಗಿ ಜಂಟಿ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್ ಬಳ್ಳಾರಿ ಇವರಿಗೆ ಸಲ್ಲಿಸಬೇಕು. ಇಲಾಖೆಯಿಂದ ಈಗಾಗಲೇ ತರಬೇತಿ ಪಡೆದವರು ಅರ್ಜಿ ಸಲ್ಲಿಸುವಂತಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.