ಬಳ್ಳಾರಿ

ಮನೋಬಲ ವೃದ್ಧಿಸುವ ಆಟಗಳು ಅಳಿವಿನಂಚಿಗೆ: ಕಳವಳ

Published On :

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಜೂ. 23
ಯುವ ತಲೆಮಾರಿಗೆ ಧೈರ್ಯ, ಆತ್ಮವಿಶ್ವಾಸ ತುಂಬುವ ಆಟಗಳು ಅಳವಿನಂಚಿನಲ್ಲಿವೆ ಎಂದು ವೀರಶೈವ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಅಲ್ಲಂ ಗುರುಬಸವರಾಜ್ ಕಳವಳ ವ್ಯಕ್ತಪಡಿಸಿದರು.
ಕರ್ನಾಟಕ ಯುವಕ ಸಂಘ, ಶೆಟ್ರು ಗುರುಶಾಂತಪ್ಪ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗಳನ್ನು ಉದ್ಘಾಟಿಸಿ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ. ನಾಗರಾಜ್ ಮಾತನಾಡಿ, ಕ್ರೀಡೆ, ಕಲೆ ಮತ್ತು ಸಾಹಿತ್ಯ ಮನುಷ್ಯನ ಬದುಕಿನ ಅವಿಭಾಜ್ಯ ಅಂಗಗಳಾಗಿದ್ದು, ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಇವುಗಳಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ಆಧುನಿಕತೆಯ ನೆಪದಲ್ಲಿ ಗ್ರಾಮೀಣ ಕಲೆ, ಕ್ರೀಡೆಗಳು ಮರೆಯಾಗುತ್ತಿವೆ ಎಂದರು.  
ಅಂತಾರಾಷ್ಟ್ರೀಯ ಕಬಡ್ಡಿ ತರಬೇತುದಾರ ಮಹಮ್ಮದ್ ಇಸ್ಮಾಯಿಲ್ ಮಾತನಾಡಿ, 40 ದೇಶಗಳು ಕಬಡ್ಡಿ ಆಟವನ್ನು ಆಡುತ್ತಿವೆ. ಭಾರತ ಕಬಡ್ಡಿಯ ತವರು ನೆಲವಾದರೂ ಆಟಗಾರರಿಗೆ ಪ್ರೋತ್ಸಾಹ, ಶಿಸ್ತಿನ ಕೊರತೆಯಿಂದಾಗಿ ಮುಂಚೂಣಿಗೆ ಬರುತ್ತಿಲ್ಲ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ವೀ.ವಿ. ಸಂಘದ ಕಾರ್ಯದರ್ಶಿ ಎಚ್.ಎಂ. ಗುರುಸಿದ್ದಸ್ವಾಮಿ, ಸಂಘದ ಕೋಶಾಧಿಕಾರಿ ಎಸ್. ಹಿಮಂತರಾಜ್, ಕರ್ನಾಟಕ ಯುವಕ ಸಂಘದ ಗೌರವಾಧ್ಯಕ್ಷ ಎಸ್. ಪನ್ನರಾಜ್, ಅಧ್ಯಕ್ಷ ವಿ.ಎಸ್. ಬಸವರಾಜ್, ಬಿಡಿಸಿಸಿ ಬ್ಯಾಂಕಿನ ಉಪಾಧ್ಯಕ್ಷ ಕೋಳೂರು ಮಲ್ಲಿಕಾರ್ಜುನಗೌಡ, ಅಂತಾರಾಷ್ಟ್ರೀಯ ಕಬಡ್ಡಿ ತೀರ್ಪುಗಾರ ಶಾಮಣ್ಣಗೌಡ ಉಪಸ್ಥಿತರಿದ್ದರು. ಟಿ. ಶಿವಶೇಖರ ಪ್ರಾರ್ಥಿಸಿದರು. ಸಿದ್ದರಾಮ ಕಲ್ಮಠ ಸ್ವಾಗತಿಸಿ, ನಿರೂಪಿಸಿದರು. ಕೆ.ಎಂ. ಸಿದ್ದಲಿಂಗಯ್ಯ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.