ಬಳ್ಳಾರಿ

ಬಾಲಕಿ ಅತ್ಯಾಚಾರ ಪ್ರಕರಣ ಸಿಒಡಿಗೆ ಒಪ್ಪಿಸಿ: ಧರಣಿ

Published On :

ಕನ್ನಡಪ್ರಭ ವಾರ್ತೆ, ಹಗರಿಬೊಮ್ಮನಹಳ್ಳಿ, ಜೂ. 25
ತಾಲೂಕಿನ ನಕ್ರಾಳ ತಾಂಡಾದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿದ ಆರೋಪಿಗಳನ್ನು ಪತ್ತೆ ಹಚ್ಚದೇ ಇರುವ ಪೊಲೀಸರ ವೈಫಲ್ಯ ಖಂಡಿಸಿ, ಪ್ರಕರಣವನ್ನು ಸಿಒಡಿ ತನಿಖೆಗೆ ಆಗ್ರಹಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಕಾರ್ಯಕರ್ತೆಯರು ಹಗರಿಬೊಮ್ಮನಹಳ್ಳಿ ತಾಲೂಕು ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸಿದರು.
ಸಂಘಟನೆಯ ಕರೆ ಮೇರೆಗೆ ತಾಲೂಕಿನ ವಿವಿಧ ಭಾಗಗಳಿಂದ ಆಗಮಿಸಿದ್ದ ಕಾರ್ಯಕರ್ತೆಯರು ಪಟ್ಟಣದ ಸಿಪಿಐಎಂ ಕಚೇರಿಯಿಂದ ಆರೋಪಿಗಳನ್ನು ಬಂಧಿಸಿ, ಮೀನಮೇಷ ಎಣಿಸುತ್ತಿರುವ ಪೊಲೀಸ್ ಇಲಾಖೆಯ ವಿಳಂಬಕ್ಕೆ ಧಿಕ್ಕಾರ ಎಂಬಿತ್ಯಾದಿ ಘೋಷಣೆ ಕೂಗುತ್ತಾ ಪ್ರತಿಭಟನಾ ಮೆರವಣಿಗೆಯಲ್ಲಿ ಬಂದು ಧರಣಿಕುಳಿತರು. ರಾಜ್ಯ ದೇವದಾಸಿ ಮಹಿಳಾ ವಿಮೋಚನಾ ಸಂಘಟನೆಯ ರಾಜ್ಯಾಧ್ಯಕ್ಷೆ ಬಿ. ಮಾಳಮ್ಮ ಮಾತನಾಡಿ, 9 ತಿಂಗಳ ಹಿಂದೆಯೇ ತಾಲೂಕಿನ ನಕ್ರಾಳತಾಂಡಾದಲ್ಲಿ ಹೊಲಕ್ಕೆ ಹೋಗುತ್ತಿದ್ದ 15ರ ಪ್ರಾಯದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ದುಷ್ಕರ್ಮಿಗಳು ನಂತರ ಆ ಬಾಲಕಿ ಕೊಲೆ ಮಾಡಿದ್ದಾರೆ. ಘಟನೆ ಜರುಗಿ ಇಷ್ಟು ದಿನವಾದರೂ ಆರೋಪಿಗಳು ಪತ್ತೆಯಾಗಿಲ್ಲ.  ದುಷ್ಕರ್ಮಿಗಳು ಪತ್ತೆಯಾಗದಿರುವುದಕ್ಕೆ ಇಲ್ಲಿನ ಪೊಲೀಸ್ ಇಲಾಖೆ ಆಡಳಿತ ವೈಫಲ್ಯವೇ ಕಾರಣ ಎಂದು ಆರೋಪಿಸಿದರು.
ಸಿಒಡಿ ತನಿಖೆಗೆ ಆಗ್ರಹ: ಪ್ರಕರಣ ಪತ್ತೆಗೆ ವಿಳಂಬ ನೀತಿ ಅನುಸರಿಸುತ್ತಿರುವುದರ ಹಿಂದೆ ಹಲವು ಪ್ರಭಾವಿ ವ್ಯಕ್ತಿಗಳ ಕೈವಾಡವಿದೆ ಎಂದು ಆರೋಪಿಸಿದ ಮಾಳಮ್ಮ ಕೂಡಲೇ ರಾಜ್ಯ ಸರ್ಕಾರ ಈ ಪ್ರಕರಣವನ್ನು ಸಿಒಡಿ ತನಿಖೆಗೆ ಒಪ್ಪಿಸಬೇಕೆಂದರು.
ಪ್ರಕರಣದ ವಿಚಾರದಲ್ಲಿ ಇಲಾಖೆ ನಡೆದುಕೊಳ್ಳುತ್ತಿರುವ ನಿರ್ಧಾರ ಆಡಳಿತ ಯಂತ್ರದ ಮೇಲೆ ಜನತೆ ವಿಶ್ವಾಸ ಕಳೆದುಕೊಳ್ಳುವಂತೆ ಮಾಡಿದೆ. ಹೀಗಾಗಿ ಸಿಓಡಿ ತನಿಖೆಯಿಂದ ಮಾತ್ರ ಸತ್ಯಾಂಶ ಹೊರಬರಲಿದ್ದು, ಕೂಡಲೇ ಪ್ರಕರಣವನ್ನು ಸಿಒಡಿಗೆ ಒಪ್ಪಿಸಬೇಕೆಂದು ಒತ್ತಾಯಿಸಿದರು. ಮದುವೆಯಾಗುವುದಾಗಿ ನಂಬಿಸಿ, ಬಾಲಕಿಯನ್ನು ಗರ್ಭಿಣಿ ಮಾಡಿ ಈಗ ಕೈಕೊಟ್ಟಿರುವ ತಾಲೂಕಿನ ಬಾಚಿಗೊಂಡನಹಳ್ಳಿ ಗ್ರಾಮದ ಒಂಟಿ ಮೇಘರಾಜ ಮತ್ತು ಆತನಿಗೆ ಬೆಂಬಲ ನೀಡುತ್ತಿರುವವರನ್ನು ತಕ್ಷಣವೇ ಬಂಧಿಸಬೇಕು ಎಂದು ಮಾಳಮ್ಮ ಧರಣಿ ಸತ್ಯಾಗ್ರಹದ ಮೂಲಕ ಆಗ್ರಹಿಸಿದರು.  ಪ್ರಾಂತ ರೈತ ಸಂಘದ ಅಧ್ಯಕ್ಷ ಕೊಟಗಿಮಲ್ಲಿಕಾರ್ಜುನ ಧರಣಿ ಸತ್ಯಾಗ್ರಹಕ್ಕೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದರು. ಜನವಾದಿ ಮಹಿಳಾ ಸಂಘಟನೆಯ ಕಾರ್ಯದರ್ಶಿ ಜಿ.ಆರ್. ಮಲ್ಲಮ್ಮ, ಖಜಾಂಚಿ ಪಿ. ಚಾಂದಬೀ, ಮುಖಂಡರಾದ ಬಸಮ್ಮ, ಎಂ. ತಟ್ನಮ್ಮ, ಎ. ಹನುಮಕ್ಕ, ಎನ್. ನಾಗರತ್ನಾ, ಜ್ಯೋತಿ,  ಗೀತಾ ಸೇರಿದಂತೆ ಹಲವರು ಧರಣಿ ಸತ್ಯಾಗ್ರಹದಲ್ಲಿ  ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.