ನೀರಾವರಿ ಯೋಜನೆಯಿಂದ ಅಭಿವೃದ್ಧಿ: ಭೀಮಾನಾಯ್ಕ
ಹಗರಿಬೊಮ್ಮನಹಳ್ಳಿ: ನೀರಾವರಿ ಯೋಜನೆಗಳ ಸಮರ್ಪಕ ಜಾರಿಯಿಂದ ಮಾತ್ರ ಬಯಲುಸೀಮೆಯಲ್ಲಿ ಅಭಿವೃದ್ಧಿಯ ಮುನ್ನೋಟ ಕಾಣಲು ಸಾಧ್ಯ. ಈ ಹಿನ್ನೆಲ್ಲೆಯಲ್ಲಿ ಕ್ಷೇತ್ರದ ವ್ಯಾಪ್ತಿಯ ಎಲ್ಲ ಏತನೀರಾವರಿ ಯೋಜನೆಗಳಿಗೆ ನಿರಂತರ ವಿದ್ಯುತ್ ಪೂರೈಕೆ ಸೌಲಭ್ಯ ಕಲ್ಪಿಸುವ ಮೂಲಕ ನಮ್ಮ ಪಾಲಿನ ತುಂಗಭದ್ರಾ ನದಿ ನೀರನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡು ನೀರಾವರಿ ಕ್ಷೇತ್ರದ ಪ್ರಗತಿಗೆ ಶ್ರಮಿಸುತ್ತೇನೆ ಎಂದು ಶಾಸಕ ಎಸ್. ಭೀಮಾನಾಯ್ಕ ಹೇಳಿದರು.
ಬುಧವಾರ ತಾಲೂಕಿನ ತಂಬ್ರಹಳ್ಳಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯ ಅಂದಾಜು ರು. 65 ಲಕ್ಷ ವೆಚ್ಚದ ನಿರಂತರ ವಿದ್ಯುತ್ ಪೂರೈಕೆಯ ನೂತನ ಕಾಮಗಾರಿಗೆ ಭೂಮಿಪೂಜೆ ನೇರವೇರಿಸಿ ಮಾತನಾಡಿ, ವಿದ್ಯುತ್ ಸಮಸ್ಯೆಯಿಂದಾಗಿ ಕ್ಷೇತ್ರದಲ್ಲಿನ ಏತನೀರಾವರಿ ಯೋಜನೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಅಚ್ಚುಕಟ್ಟು ರೈತರ ಹೊಲ, ಗದ್ದೆಗಳು ನದಿ ನೀರಿನಿಂದ ಪ್ರತಿವರ್ಷ ವಂಚಿತವಾಗುತ್ತಿವೆ. ಇದನ್ನು ತಪ್ಪಿಸುವ ಸಲುವಾಗಿ ಈಗ ದಿನದ 24 ಗಂಟೆ ವಿದ್ಯುತ್ ಪೂರೈಕೆ ಕಲ್ಪಿಸಲು ಈ ಎಕ್ಸ್ ಸ್ಪೀಡರ್ ಕಾಮಗಾರಿ ಜಾರಿಗೊಳಿಸಲಾಗುತ್ತಿದೆ ಎಂದರು.
ಕ್ಷೇತ್ರದ ಪಶ್ಚಿಮ ಭಾಗದಲ್ಲಿನ ಬಸರಕೋಡು ಗ್ರಾಮದಿಂದ ಹೊಸಪೇಟೆ ತಾಲೂಕಿನ ಡಣಾಪುರದವರೆಗೂ ತುಂಗಭದ್ರಾ ಜಲಾಶಯದ ಹಿನ್ನೀರು ಸತತ ಆರೇಳು ತಿಂಗಳು ಕಾಲ ನಿಲ್ಲುತ್ತದೆ. ಹೀಗೆ ನಿಲ್ಲುವ ಹಿನ್ನೀರಿನಲ್ಲಿ ನಮ್ಮ ಪಾಲಿಗೆ ಬರುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವುದು ತೀರಾ ಅಗತ್ಯವಿದೆ ಎಂದು ಹೇಳಿದರು.
ಜಿಪಂ ಉಪಾಧ್ಯಕ್ಷೆ ಮಮತಾ ಸುರೇಶ, ತಾಪಂ ಸದಸ್ಯೆ ಕ್ಯಾದಿಗಿಹಳ್ಳಿ ಲಕ್ಷ್ಮವ್ವ, ತಾಪಂ ಸದಸ್ಯ ಉಪ್ಪಾರ ಬಾಲಪ್ಪ, ಜಿಪಂ ಮಾಜಿ ಸದಸ್ಯ ಅಕ್ಕಿ ತೋಟೇಶ, ತಾಪಂ ಮಾಜಿ ಅಧ್ಯಕ್ಷ ಹನುಮಂತಪ್ಪ, ಕೃಷಿಕ ಸಮಾಜದ ಜಿಲ್ಲಾ ಉಪಾಧ್ಯಕ್ಷ ಸಿನಿಮಾ ಮಂಜಣ್ಣ, ಜೆಡಿಎಸ್ ರಾಜ್ಯ ಕಾರ್ಯಕಾರಿ ನಿರ್ದೇಶಕ ಬನ್ನಿಗೋಳ ವೆಂಕಣ್ಣ, ಮುಖಂಡ ಎಚ್.ಎಂ. ಚೋಳರಾಜ, ಬಣಕಾರ ಕೊಟ್ರೇಶ್, ಗೌರಜ್ಜನವರ ಬಸವರಾಜಪ್ಪ, ಎಂ.ಪಿ. ಪರಮೇಶ, ಹಂಚಿನಮನಿ ಹನುಮಂತಪ್ಪ, ಗೌರಜ್ಜನವರ ಗಿರಿ, ಮಂಜುನಾಥಪಾಟೀಲ್, ಚಿದಾನಂದ, ತ್ಯಾವಣಿಗಿ ಕೊಟ್ರೇಶ, ಮರಳುಸಿದ್ದಪ್ಪ, ಸೋಗಿ ಕೊಟ್ರೇಶ, ಯಮುನನಾಯ್ಕ, ಪಂರಾಇ ಎಇಇ ಆರ್. ಪ್ರಭು ಇದ್ದರು.
ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯನ್ನು ನಿಲ್ಲಿಸುವ ವಿಚಾರ ಪಕ್ಷದ ವರಿಷ್ಠರಿಗೆ ಬಿಡಲಾಗಿದೆ. ಅಭ್ಯರ್ಥಿ ನಿಲ್ಲಿಸುವ ಇಲ್ಲವೆ ಮೈತ್ರಿ ಮಾಡಿಕೊಳ್ಳುವುದು ಸೇರಿದಂತೆ ಚುನಾವಣೆಗೆ ಸಂಬಂಧಿಸಿದಂತೆ ಯಾವುದೆ ನಿರ್ಧಾರವನ್ನು ಪಕ್ಷದ ಹಿರಿಯರು ತೆಗೆದುಕೊಳ್ಳುವ ತೀರ್ಮಾನಕ್ಕೆ ನಾನು ಬದ್ಧನಾಗಿರುವೆ. ಇಲ್ಲಿಯವರೆಗೂ ಬಳ್ಳಾರಿ ಕ್ಷೇತ್ರದಲ್ಲಿ ಅಭ್ಯರ್ಥಿ ನಿಲ್ಲಿಸುವ ವಿಚಾರವಾಗಿ ಪಕ್ಷದ ಮಟ್ಟದಲ್ಲಿ ಇನ್ನೂ ಅಂತಿಮವಾಗಿಲ್ಲ. ಮಾಜಿ ಪ್ರಧಾನಿ ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ ಅವರು ಈ ವಿಚಾರವಾಗಿ ಚರ್ಚಿಸುತ್ತಿದ್ದಾರೆ. ನಾಳೆ ಬೆಂಗಳೂರಿಗೆ ಹೋಗಿ ವರಿಷ್ಠರನ್ನು ಭೇಟಿಯಾಗುತ್ತೇನೆ.
- ಎಸ್. ಭೀಮಾನಾಯ್ಕ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

