ಶುದ್ಧ ಕುಡಿವ ನೀರಿಗೆ ಒತ್ತಾಯಿಸಿ ಮನವಿ
ಬಳ್ಳಾರಿ: ಜಿಲ್ಲೆಯ ತೋರಣಗಲ್ಲು 6ನೇ ವಾರ್ಡ್ ವ್ಯಾಪ್ತಿಯ ಬಿ.ಆರ್. ಕ್ಯಾಂಪ್ಗೆ ಶುದ್ಧ ಕುಡಿಯುವ ನೀರು ಒದಗಿಸುವಂತೆ ಸಂಡೂರು ತಾಲೂಕು ಕಟ್ಟಡ ನಿರ್ಮಾಣ ಹಾಗೂ ಇತರೆ ನಿರ್ಮಾಣ ಕೆಲಸಗಾರರ ಸಂಘ ಜಿಲ್ಲಾ ಪರಿವೀಕ್ಷಣಾ ಅಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಈ ಪ್ರದೇಶಕ್ಕೆ ಪೂರೈಕೆಯಾಗುವ ಕುಡಿಯುವ ನೀರಿನಲ್ಲಿ ಜಿಂದಾಲ್ನಿಂದ ಹೊರಬರುವ ರಾಸಾಯನಿಕ ಬಳಸಿದ ಕಲುಷಿತ ಹಾಗೂ ಚರಂಡಿ ನೀರು ಮಿಶ್ರಣಗೊಳ್ಳುತ್ತಿದ್ದು, ದುರ್ವಾಸನೆಯಿಂದ ಕೂಡಿರುತ್ತವೆ. ಹೀಗಾಗಿ ಇಲ್ಲಿನ ಜನರು ಇದರಿಂದ ತೊಂದರೆ ಅನುಭವಿಸುತ್ತಿದ್ದಾರೆ. ಕುಡಿಯುವ ನೀರು ಶುದ್ಧಗೊಳಿಸುವಂತೆ ಈಗಾಗಲೆ ಸ್ಥಳೀಯ ಗ್ರಾಪಂಗೆ ಮನವಿ ಸಲ್ಲಿಸಿ ಎರಡು ವರ್ಷಗಳು ಕಳೆದಿವೆ. ಈವರೆಗೂ ಯಾವುದೆ ಕ್ರಮಕೈಗೊಂಡಿಲ್ಲ. ಆದ್ದರಿಂದ ಕೂಡಲೆ ಎಚ್ಚೆತ್ತುಕೊಂಡು ಮುಂದಾಗುವ ಅನಾಹುತವನ್ನು ತಪ್ಪಿಸಬೇಕೆಂದು ಟಿ. ರಾಮಾಂಜನೆಯಲು ಕೋರಿದ್ದಾರೆ.
ಇಂದು ಗಾಯನ
ಬಳ್ಳಾರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಜಾನಪದ ಹಾಗೂ ಸಂಪ್ರದಾಯ ಕಲೆಗಳನ್ನು ಪ್ರೋತ್ಸಾಹಿಸುವ ವಿನೂತನ ಯೋಜನೆಯಡಿ ಹಾಡಿರೆ ರಾಗಗಳ- ತೂಗಿರೆ ದೀಪಗಳ ಕಾರ್ಯಕ್ರಮದಡಿ ಮಾ. 8ರಂದು ಹಗರಿಬೊಮ್ಮನಹಳ್ಳಿ ಜಿವಿಪಿಪಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಬೆಳಗ್ಗೆ 11.30ಕ್ಕೆ ಸಂಪ್ರದಾಯ ಪದಗಳ ಗಾಯನ ಕಾರ್ಯಕ್ರಮ ಆಯೋಜಿಸಿದೆ. ಈ ಕಾರ್ಯಕ್ರಮವನ್ನು ಹಗರಿಬೊಮ್ಮನಹಳ್ಳಿ ತಾ. ಮೊರಗೇರಿಯ ಗಿರಿಜಮ್ಮ ಮತ್ತು ತಂಡದವರು ನಡೆಸಿಕೊಡಲಿದ್ದಾರೆ. ಅದೆರೀತಿ ಅಂದು ಸಂಜೆ 6.30ಕ್ಕೆ ಸಿರುಗುಪ್ಪದ ಅಭಯಾಂಜನೇಯ ದೇವಸ್ಥಾನದ ಆವರಣದಲ್ಲಿ ಯುವ ಸೌರಭ ಕಾರ್ಯಕ್ರಮ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸಿರುಗುಪ್ಪದ ರೇಣುಕಾ ಅಭಿಲಾಷ್ ಅವರು ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಮಾಡಲಿದ್ದಾರೆ. ಇದಲ್ಲದೆ ಸಂಡೂರು ತಾಲೂಕಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಲಾವಣಿ ಮತ್ತು ಗೀಗೀ ಪದಗಳ ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಂಡೂರಿನ ಎಚ್. ಕುಮಾರಸ್ವಾಮಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ್ ತಿಳಿಸಿದ್ದಾರೆ.
ಇಂದು ಮಹಿಳಾ ದಿನಾಚರಣೆ
ಹೊಸಪೇಟೆ: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ತಾಲೂಕು ಘಟಕದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಇಲ್ಲಿನ ಸಿದ್ದಲಿಂಗಪ್ಪ ಚೌಕಿಯ ಭಾವೈಕ್ಯತಾ ವೇದಿಕೆಯಲ್ಲಿ ಮಾ. 8ರಂದು ಸಂಜೆ 5.30ಕ್ಕೆ ನಡೆಯಲಿದೆ. ಸಮಿತಿಯ ರಾಜ್ಯ ಜಂಟಿ ಕಾರ್ಯದರ್ಶಿ ಎಸ್.ಎಂ. ಶಶಿಧರ್ ಅಧ್ಯಕ್ಷತೆ ವಹಿಸುವರು. ಮಹಿಳೆ ಮತ್ತು ಶಿಕ್ಷಣ ಕುರಿತು ನಗರದ ಚಿತ್ತವಾಡ್ಗಿಯ ವಿನೋಬಾಭಾವೆ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕಿ ಡಾ.ಎಸ್.ಎಂ. ಸಾವಿತ್ರಿ ಉಪನ್ಯಾಸ ನೀಡುವರು. ಪ್ರಿಯದರ್ಶಿನಿ ಮಹಿಳಾ ಸಂಘದ ಅಧ್ಯಕ್ಷೆ ಡಾ. ಎಸ್.ಡಿ. ಸುಲೋಚನಾ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ತಾಲೂಕು ಅಧ್ಯಕ್ಷ ಡಾ.ಎಸ್.ಎಂ. ನಾಗಭೂಷಣ, ಬೆಂಗಳೂರಿನ ಗಿರೀಶ್, ಹೊಸಪೇಟೆಯ ಭಾವೈಕ್ಯತಾ ವೇದಿಕೆ ಸಂಚಾಲಕ ಪಿ. ಅಬ್ದುಲ್ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
ಪ್ರೊ. ನಾಗರಾಜಗೆ ಡಾಕ್ಟರೇಟ್
ಬಳ್ಳಾರಿ: ಸ್ಥಳೀಯ ರಾವ್ ಬಹದ್ದೂರ್ ವೈ ಮಹಾಬಲೇಶ್ವರಪ್ಪ ತಾಂತ್ರಿಕ ಮಹಾವಿದ್ಯಾಲಯದ ಯಾಂತ್ರಿಕ ವಿಭಾಗದ ಪ್ರಾಧ್ಯಾಪಕ ನಾಗರಾಜ ಕೋರಿ ಅವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಯಾಂತ್ರಿಕ ವಿಭಾಗದಲ್ಲಿ ಡಾಕ್ಟರೇಟ್ ಪದವಿ ದೊರೆತಿದೆ. ಬೆಂಗಳೂರಿನ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ.ಯು.ಎನ್. ಕೆಂಪಯ್ಯ ಇವರ ಮಾರ್ಗದರ್ಶನದಲ್ಲಿ ಸ್ಟಡಿ ಆನ್ ಫೆಟೀಕ್ ಬಿಹೆವಿಯರ್ ಆಫ್ ವೆಲ್ಡೆಡ್ ಡುಯೆಲ್ ಸ್ಟೀಲ್ ಫಾರ್ ಸ್ಟ್ರಕ್ಚರಲ್ ಅಪ್ಲಿಕೇಶನ್ ಯೂಸಿಂಗ್ ಎಫ್.ಇ.ಎಂ ಟೆಕ್ನಿಕ್ ಎಂಬ ವಿಷಯದ ಮೇಲೆ ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ವಿಟಿಯು ನಾಗರಾಜ ಕೋರಿ ಅವರಿಗೆ ಡಾಕ್ಟರೇಟ್ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

