ಬಳ್ಳಾರಿ

ಸಹಕಾರಿ ಸಂಘಕ್ಕೆ ಅವಿರೋಧ ಆಯ್ಕೆ

Published On :

ಹೂವಿನಹಡಗಲಿ: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ನಾಗತಿಬಸಾಪುರ ಗ್ರಾಮದ ರೇವಣಸಿದ್ದನಗೌಡ ಪಾಟೀಲ್ ಆಯ್ಕೆಯಾಗಿದ್ದಾರೆ. ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ರೇವಣಸಿದ್ದನಗೌಡ ಪಾಟೀಲ್ ಅವಿರೋಧವಾಗಿ ಆಯ್ಕೆಯಾದರು. ಸರ್ಕಾರದ ಸಾಲ ಸೌಲಭ್ಯ ಯೋಜನೆಗಳನ್ನು ಅರ್ಹ ರೈತರಿಗೆ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಅವರು ತಿಳಿಸಿದರು. ಈ ಸಂದರ್ಭದಲ್ಲಿ ನಿರ್ದೇಶಕರಾದ ಪಿ. ವೀರಪ್ಪ, ಕಪಾಲಿ ರಾಜಪೀರ್ಸಾಬ್, ಮೀರಾಬಾಯಿ, ಪಂಪಾಪತೆಪ್ಪ, ಕೆ. ಪ್ರಕಾಶ್ ಹಾಗೂ ಬಿಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಕೊಟ್ರೇಶ್ ಹಾಜರಿದ್ದರು.
ವಿಕಲಚೇತನರ ಹೋರಾಟ ಸಮಿತಿಗೆ ಆಯ್ಕೆ
ಹೂವಿನಹಡಗಲಿ: ಹೈದರಾಬಾದ್ ಕರ್ನಾಟಕ ವಿಕಲಚೇತನರ ಹೋರಾಟ ಸಮಿತಿಯ ಬಳ್ಳಾರಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಎಸ್. ಚಂದ್ರಪ್ಪ ಆಯ್ಕೆಯಾಗಿದ್ದಾರೆ. ಹೊಸಪೇಟೆಯಲ್ಲಿ ನಡೆದ ಜಿಲ್ಲಾ ವಿಕಲಚೇತನರ ಸಭೆಯಲ್ಲಿ 371(ಜೆ) ಅನುಷ್ಠಾನದಿಂದ ವಿಕಲಚೇತನರಿಗೆ ಸೌಲಭ್ಯ ದೊರಕಿಸಿಕೊಡುವ ಕುರಿತು ಚರ್ಚಿಸಿ, ಹೋರಾಟ ಸಮಿತಿ ರಚಿಸಲಾಗಿದೆ. ಸಮಿತಿಯ ಉಪಾಧ್ಯಕ್ಷರಾಗಿ ಈರಮ್ಮ ಮುದ್ದಟನೂರು (ಸಿರುಗುಪ್ಪ), ಕಾರ್ಯದರ್ಶಿಯಾಗಿ ಕರಿಬಸಜ್ಜ (ಸಂಡೂರು), ಸಹ ಕಾರ್ಯದರ್ಶಿಯಾಗಿ ಮಹಾಂಕಾಳಿ ಕುಡಿತಿನಿ (ಬಳ್ಳಾರಿ), ಖಜಾಂಚಿಯಾಗಿ ಸುಜಾತಾ (ಬಳ್ಳಾರಿ) ಪ್ರಧಾನ ಸಂಚಾಲಕರಾಗಿ ಪಿ.ಎಂ.  ಅಂಜಿನಪ್ಪ (ಕೂಡ್ಲಿಗಿ), ಜಿ. ರುದ್ರಗೌಡ (ಬಳ್ಳಾರಿ) ಆಯ್ಕೆಯಾಗಿದ್ದಾರೆ ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.
ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ
ಹೂವಿನಹಡಗಲಿ: ವಿದ್ಯಾರ್ಥಿಗಳ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ ಎಂದು ನಿವೃತ್ತ ಶಿಕ್ಷಣಾಧಿಕಾರಿ ಎಚ್.ಎಂ. ಬೆಟ್ಟಯ್ಯ ಹೇಳಿದರು. ಪಟ್ಟಣದ ಮಲ್ಲಿಗೆ ಹಿರಿಯ ಪ್ರಾಥಮಿಕ ಶಾಲೆಯ 14ನೇ ವಾರ್ಷಿಕೋತ್ಸವ ಉದ್ಘಾಟಿಸಿ ಮಾತನಾಡಿ, ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಶಿಕ್ಷಕರ ಶ್ರಮದ ಜತೆಗೆ ಪೋಷಕರು ಸಹಕರಿಸಿದರೆ ಮಕ್ಕಳ ಸರ್ವಾಂಗೀಣ ಬೆಳವಣಿಗೆ ಸಾಧ್ಯ ಎಂದರು. ಸಾಹಿತಿ ಎಚ್. ಶೇಷಗಿರಿರಾವ್ ಮಾತನಾಡಿ, ಗುಣಾತ್ಮಕ ಶಿಕ್ಷಣ ನೀಡುತ್ತಿರುವ ಮಲ್ಲಿಗೆ ಶಾಲೆ ಮಲ್ಲಿಗೆ ನಾಡಿನಲ್ಲಿ ಕಡಿಮೆ ಅವಧಿಯಲ್ಲಿ ಸಾಧನೆ ಮಾಡಿದೆ ಎಂದು ಪ್ರಶಂಸಿಸಿದರು. ಎಪಿಎಂಸಿ ಅಧ್ಯಕ್ಷ ವಾರದ ಗೌಸ್ ಮೊಹಿದ್ದೀನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಪರಮೇಶ್ವರಪ್ಪ, ಜಾನಪದ ಸಾಹಿತ್ಯ ಪರಿಷತ್ ಅಧ್ಯಕ್ಷ ಎಲ್. ಖಾದರ ಬಾಷಾ ಮಾತನಾಡಿದರು. ಸಂಸ್ಥೆಯ ಅಧ್ಯಕ್ಷ ಮೆಹಬೂಬ್ ಸುಬಾನ್ಸಾಬ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಎ. ಅಕ್ಬರ್, ಉಪಾಧ್ಯಕ್ಷ ಡಿ. ಚಾಂದಬಾಷಾ, ದೈಹಿಕ ಶಿಕ್ಷಣ ಶಿಕ್ಷಕ ಖವಾಸ್ ರಫಿ ಇದ್ದರು. ಶೇಕ್ ಮಹ್ಮದ್ ವರದಿ ವಾಚಿಸಿದರು. ಮುಖ್ಯ ಶಿಕ್ಷಕಿ ಮೀನಾಕ್ಷಿ ಸ್ವಾಗತಿಸಿದರು. ಶಾಬೀನಾ, ಯಶೋದಾ ಪಾಟೀಲ್ ನಿರೂಪಿಸಿದರು. ಭರತೇಶ್ ವಂದಿಸಿದರು. ವಾರ್ಷಿಕೋತ್ಸವ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.