ಬಳ್ಳಾರಿ

ವಾಲ್ಮೀಕಿ ನಾಯಕ ಸಮಾಜಕ್ಕೆ ಆದ್ಯತೆ ನೀಡಿ: ಪ್ರಸನ್ನಾನಂದ ಶ್ರೀ

Published On :

ಹೊಸಪೇಟೆ: ವಾಲ್ಮೀಕಿ ನಾಯಕ ಸಮಾಜಕ್ಕೆ ಉದ್ಯೋಗವಕಾಶಕ್ಕೆ ಶೇ.7.5ರಷ್ಟು ಮೀಸಲಾತಿ ನೀಡಬೇಕು. ಈ ಕುರಿತು ರಾಜ್ಯ ಸರ್ಕಾರ ತಕ್ಷಣ ಈ ಕ್ರಮ ಕೈಗೊಳ್ಳಬೇಕೆಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ಆಗ್ರಹಿಸಿದರು.
ತಾಲೂಕಿನ ಕಮಲಾಪುರದ ಮಾಲ್ಯವಂತ ಬೆಟ್ಟದಲ್ಲಿ ಭಾನುವಾರ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾ ನಿರ್ದೇಶಕರ ಮಹಾಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಈಗಾಗಲೇ ಕೇಂದ್ರ ಸರ್ಕಾರವು ಪ.ಜಾತಿಗೆ ಶೇ. 7.5ರಷ್ಟು ಮೀಸಲಾತಿ ನೀಡುತ್ತಿರುವಾಗ ರಾಜ್ಯ ಸರ್ಕಾರ ಮೀನಮೇಷ ಎಣಿಸದೇ ಅದನ್ನು ಜಾರಿಗೆ ತರುವ ಇಚ್ಚಾಶಕ್ತಿ ಪ್ರದರ್ಶಿಸಬೇಕು. ವಾಲ್ಮೀಕಿ ನಾಯಕ ಸಮಾಜದ ಜನಸಂಖ್ಯೆ ಆಧರಿಸಿ ಮೀಸಲಾತಿ ನೀಡುವಂತಿದ್ದರೆ ಶೇ.8.5ರಷ್ಟು ಮೀಸಲಾತಿ ನೀಡಬೇಕಾಗುತ್ತದೆ. ಇಷ್ಟಿದ್ದರೂ ಈ ಬಗ್ಗೆ ಯಾಕೆ ಸರ್ಕಾರ ಕ್ರಮ ಕೈಗೊಳ್ಳುತ್ತಿಲ್ಲ. ತಕ್ಷಣವೇ ಪ.ಪಂಗಡಕ್ಕೆ ಶೇ. 7.5ರಷ್ಟು ಮೀಸಲಾತಿ ನೀಡಬೇಕು ಎಂದು ಅವರು ಒತ್ತಾಯಿಸಿದರು.
ರಾಜನಹಳ್ಳಿ ಗುರುಪೀಠದ ಜಿಲ್ಲಾ ಧರ್ಮದರ್ಶಿ ಬಿ.ಎಸ್. ಜಂಬಯ್ಯ ನಾಯಕ ಮಾತನಾಡಿ, ಪ.ಜಾತಿಗೆ ಶೇ.7.5ರ ಮೀಸಲಾತಿಗಾಗಿ ರಾಜ್ಯಾದ್ಯಾಂತ ಹೋರಾಟ ನಡೆಸಬೇಕಾದ ಪರಿಸ್ಥಿತಿ ಬಂದಿದೆ. ಇದಕ್ಕೆ ಮಹಾಸಭಾ ಸಜ್ಜಾಗಿರಬೇಕು ಎಂದರು.
ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾಧ್ಯಕ್ಷ ಜನಾರ್ಧನ ನಾಯಕ್, ಪ್ರಧಾನ ಕಾರ್ಯದರ್ಶಿ ಡಾ. ತಾರಿಹಳ್ಳಿ ವೆಂಕಟೇಶ್, ಉಪಾಧ್ಯಕ್ಷ ಕೃಷ್ಣ ಇವರನ್ನು ಇದೇ ಸಂದರ್ಭ ಆಯ್ಕೆ ಮಾಡಲಾಯಿತು.
ನೂತನ ಪದಾಧಿಕಾರಿಗಳನ್ನು ಸ್ವಾಮೀಜಿ ಅಭಿನಂದಿಸಿ, ಸಮಾಜದ ಐಕ್ಯತೆ ಹಾಗೂ ಸಮಾಜಮುಖಿ ಕೆಲಸ ಕಾರ್ಯ ಮಾಡುವಂತೆ ಸಲಹೆ ನೀಡಿದರು. ವಾಲ್ಮೀಕಿ ನಾಯಕ ಸಮಾಜದ ಮುಖಂಡರು ಈ ಸಭೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.