ಬಳ್ಳಾರಿ

24ರ ಬಿಜೆಪಿ ಸಭೆಯಲ್ಲಿ ಶ್ರೀರಾಮುಲು ಭಾಗಿ: ಅನಂತ ಪದ್ಮನಾಭ

Published On :

ಹೊಸಪೇಟೆ: ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು ಮಾ. 24ರಂದು ಹೊಸಪೇಟೆಯಲ್ಲಿ ನಡೆಯುವ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಂತ ಪದ್ಮನಾಭ ಹೇಳಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಶುಕತ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ವಿಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಬಿ.ಎಸ್. ಆನಂದ್‌ಸಿಂಗ್ ಕೈಗೊಂಡ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ಶ್ರೀರಾಮುಲುಗೆ ಪರ ಮತ ಯಾಚನೆ ಮಾಡುವ ಮೂಲಕ ಅತ್ಯಧಿಕ ಮತಗಳ ಅಂತರದಿಂದ ಗೆಲವು ತಂದುಕೊಡಲಾಗುತ್ತದೆ. ಶಾಸಕ ಆನಂದ್‌ಸಿಂಗ್ ತಾಂತ್ರಿಕವಾಗಿ ಕ್ಷೇತ್ರದಲ್ಲಿ ಗೈರು ಹಾಜರಿ ಇದ್ದಾರೆ. ಆದರೆ ಕ್ಷೇತ್ರದ ಪ್ರತಿಯೊಬ್ಬ ಮುಖಂಡ ಹಾಗೂ ಕಾರ್ಯಕರ್ತರಲ್ಲಿ ಆನಂದ್‌ಸಿಂಗ್ ಇದ್ದಾರೆ. ಕ್ಷೇತ್ರದಲ್ಲಿ 50 ವರ್ಷಗಳಿಂದ ಆಗದಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೇವಲ ಐದು ವರ್ಷಗಳಲ್ಲಿ ಸಾಧನೆ ಮಾಡಿ ತೋರಿಸಿದ್ದಾರೆ. ಅವರ ಅಭಿವೃದ್ಧಿ ಕಾರ್ಯಗಳನ್ನು ಮತ್ತು ಬಿ. ಶ್ರೀರಾಮುಲು ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದಾಗ ಮಾಡಿದ ಕೆಲಸ ಕಾರ್ಯಗಳನ್ನು ಮುಂದಿಟ್ಟುಕೊಂಡು ಈ ಚುನಾವಣೆಯಲ್ಲಿ ಮತ ಯಾಚಿಸಲಾಗುತ್ತದೆ ಎಂದರು.
ದೇಶದಲ್ಲಿ ಮೋದಿ ಅಲೆ, ಅಭಿವೃದ್ಧಿ ಪರ ಕೆಲಸ ಕಾರ್ಯಗಳಿಂದ ಶ್ರೀರಾಮುಲು ಈ ಚುನಾವಣೆಯಲ್ಲಿ ಅತ್ಯಧಿಕ ಮತಗಳ ಅಂತರದಿಂದ ಆಯ್ಕೆಯಾಗುತ್ತಾರೆ. ಶಾಸಕ ಆನಂದ್‌ಸಿಂಗ್ ಶ್ರೀರಾಮುಲು ಪರ ಕಾರ್ಯಕರ್ತರು, ಮುಖಂಡರು ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವಂತೆ ಸಂದೇಶ ನೀಡಿದ್ದಾರೆ ಎಂದರು.
ಅಶೋಕ್ ಜೀರೆ, ಬಾಬುಲಾಲ್ ಜೈನ್, ಪೃಥ್ವಿರಾಜ್ ಸಿಂಗ್, ಭೂಪಾಲ್ ರಾಘವೇಂದ್ರಶೆಟ್ಟಿ, ವ್ಯಾಸನಕೆರೆ ಶ್ರೀನಿವಾಸ, ಗುಜ್ಜಲ್ ಹನುಮೇಶ್, ಜಂಬಾನಹಳ್ಳಿ ಸತ್ಯನಾರಾಯಣ, ಡಾ. ಅಬೀಬುಲ್ಲಾ, ಮಾಂಗಿಲಾಲ್, ಮಧುಕರ್ ರಾವ್, ಅನಿಲ್ ಜೋಷಿ, ತಾಪಂ ಸದಸ್ಯ ಭೀಮಾನಾಯ್ಕ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.