ಬಿಜೆಪಿಗೆ ಹೆಚ್ಚು ಸ್ಥಾನ
ಹೊಸಪೇಟೆ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ ಸ್ಥಾನ ಗೆದ್ದು ಮೋದಿಯನ್ನು ಪ್ರಧಾನಮಂತ್ರಿಯನ್ನಾಗಿಸುವುದೇ ಬಿಜೆಪಿ ಕಾರ್ಯಕರ್ತರ ಮುಖ್ಯಗುರಿಎಂದು ಪಕ್ಷದ ಜಿಲ್ಲಾ ಉಪಾಧ್ಯಕ್ಷ ಪಂತರ್ ಜಯಂತ್ ಹೇಳಿದರು. ತಾಲೂಕಿನ ಗಾದಿಗನೂರಲ್ಲಿ ಮನೆ ಮನೆಗೆ ಬಿಜೆಪಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಈ ಬಾರಿ ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೇರಿಸುವುದು ಎಲ್ಲರ ಆಸೆ. ಬಿಜೆಪಿ ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿಯನ್ನು ಕ್ಷೇತ್ರದಲ್ಲಿ ಗೆಲ್ಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚಾಯ್ ಪೆ ಚರ್ಚಾ ವೀಕ್ಷಣೆ
ಸಿರುಗುಪ್ಪ: ದೇಶದ ರೈತರೊಂದಿಗೆ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ನಡೆಸಿದ ವಿಡಿಯೋ ಕಾನ್ಫರೆನ್ಸ್ನ ಹಲವು ಝಲಕ್ಗಳ ಪಟ್ಟಣದ ನರಸಿಂಹಮೂರ್ತಿ ಆವರಣದಲ್ಲಿ ಗುರುವಾರ ಸಂಜೆ ಬಿಜೆಪಿ ನಗರ ಘಟಕ ಆಯೋಜಿಸಿದ್ದ ಚಾಯ್ ಪೆ ಚರ್ಚಾ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ ಚಾಲನೆ ನೀಡಿದರು. ಎಚ್.ಎಂ. ಶಾಂತಮೂರ್ತಿಸ್ವಾಮಿ, ಕುಂಟ್ನಾಳ್ ಮಲ್ಲಿಕಾರ್ಜುನ, ಕೊಡ್ಲೆ ಮಲ್ಲಿಕಾರ್ಜುನ, ಅಶೋಕ್ ಜೈನ್, ಪಿ. ಮಾರೆಪ್ಪ, ವೈ. ವೆಂಕಟೇಶ ಇತರರಿದ್ದರು.
ಮತದಾನ ಜಾಗೃತಿ...
ಸಿರುಗುಪ್ಪ: ಚುನಾವಣಾ ಆಯೋಗ ಹಾಗೂ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಮಕ್ಕಳ ಮೂಲಕ ಪಾಲಕರಿಗೆ ಮತದಾನದ ಬಗ್ಗೆ ಜಾಗೃತಿ ಮೂಡಿಸಲು ವಿದ್ಯಾರ್ಥಿಗಳಿಗಾಗಿ ರಂಗೋಲಿ ಹಾಗೂ ಚಿತ್ರಕಲಾ ಸ್ಪರ್ಧೆಯನ್ನು ಪಟ್ಟಣದಲ್ಲಿ ಗುರುವಾರ ಏರ್ಪಡಿಸಲಾಗಿತ್ತು. ವಿದ್ಯಾರ್ಥಿನಿ ಪುಶ್ವಿತಾ, ಪವಿತ್ರಾ, ನಾಗವೇಣಿ ಮತದಾನದ ಕುರಿತು ರಂಗೋಲಿ ಬಿಡಿಸಿ ಎಲ್ಲರ ಗಮನ ಸೆಳೆದರು. ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಫಿಲೋಮಿನಾ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

