ಬಳ್ಳಾರಿ

ಮಾನವ ಹಕ್ಕು ಉಲ್ಲಂಘನೆಯ ಅವಲೋಕನ ಅಗತ್ಯ: ಬಾಲಸುಬ್ರಹ್ಮಣ್ಯ

Published On :

ಹೊಸಪೇಟೆ: ಲೈಂಗಿಕ ವೃತ್ತಿನಿರತ ಮಹಿಳೆಯರ ಮೇಲಿನ ದೌರ್ಜನ್ಯ ಮತ್ತು ದೈಹಿಕ ಹಿಂಸೆಯಿಂದ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿರುವುದನ್ನು ವಿಮರ್ಶಾತ್ಮಕ ಪ್ರಜ್ಞೆಯಿಂದ ಅವಲೋಕನ ಮಾಡಿಕೊಳ್ಳಬೇಕಾಗಿದೆ ಎಂದು ಸಂವೇದನಾ ಯೋಜನೆ ಹಿರಿಯ ವ್ಯವಸ್ಥಾಪಕ ಬಾಲಸುಬ್ರಹ್ಮಣ್ಯ ಹೇಳಿದರು.
ನಗರದ ಸೈನೋಸರ್ ಸಭಾಂಗಣದಲ್ಲಿ ಬಳ್ಳಾರಿಯ ಸೌಖ್ಯ ಬೆಳಕು ಸಮುದಾಯ ಸೇವಾ ಸಂಸ್ಥೆಯಿಂದ ಬುಧವಾರ ನಡೆದ ಮಾಧ್ಯಮ ಕಾರ್ಯಾಗಾರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪ್ರಾಂತೀಯ ವ್ಯವಸ್ಥಾಪಕ ಪೀರ್ ಮಹಮ್ಮದ್ ಮಾತನಾಡಿ, ರಾಜ್ಯದಲ್ಲಿರುವ ಸುಮಾರು 30 ಸಾವಿರ ಲೈಂಗಿಕ ಕಾರ್ಯಕರ್ತೆಯರಲ್ಲಿ ವಿಮರ್ಶಾತ್ಮಕ ಪ್ರಜ್ಞೆ ಮೂಡಿಸಿ ದೌರ್ಜನ್ಯ ತಡೆಯುವುದಕ್ಕಾಗಿ ಸ್ಥಳೀಯ ಪೊಲೀಸರ ಮತ್ತು ನ್ಯಾಯಾಂಗ ವ್ಯವಸ್ಥೆಯಿಂದ ಸಕರಾತ್ಮಕ ಸಹಾಯ ದೊರೆಯಬೇಕಾಗಿದೆ. ಕರ್ನಾಟಕದಲ್ಲಿ ಈಗಾಗಲೇ ಇರುವ 1 ಲಕ್ಷಕ್ಕೂ ಹೆಚ್ಚು ಲೈಂಗಿಕ ವೃತ್ತಿಪರ ಮಹಿಳೆಯರನ್ನು ಕಾಡುವ ಎಚ್‌ಐವಿ ನಿಯಂತ್ರಣಕ್ಕೆ ಹಲವಾರು ಯೋಜನೆಗಳನ್ನು ಕರ್ನಾಟಕ ಆರೋಗ್ಯ ಸಂವರ್ಧನಾ ಪ್ರತಿಷ್ಠಾನವು ಹಮ್ಮಿಕೊಂಡಿದೆ ಎಂದರು. ಪರಶುರಾಮ್ ಕಲಾಲ್, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರಾದ ಲಕ್ಷ್ಮೀ ನರಸಮ್ಮನವರು ಮಾತನಾಡಿದರು. ಗೀತಾ, ರಾಧಾ ಮತ್ತು ಪ್ರಿಯಾ ಅನುಭವ ಹಂಚಿಕೊಂಡರು. ಗೌರಮ್ಮ ಮತ್ತು ತಂಡ ಪ್ರಾರ್ಥಿಸಿದರು. ಸುಮಿತ್ರಾ ಸ್ವಾಗತಿಸಿದರು. ವ್ಯವಸ್ಥಾಪಕ ಮಂಜುನಾಥ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.