ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯುವುದು ಶತಸಿದ್ಧ
ಹೊಸಪೇಟೆ: ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯನ್ನು ಪಕ್ಷದ ವರಿಷ್ಠರು ಕಣಕ್ಕಿಳಿಸುವುದು ಶತಸಿದ್ಧ, ಜೆಡಿಎಸ್ ಕಾರ್ಯಕರ್ತರು ಯಾವುದೇ ಅನುಮಾನ ಪಡುವುದು ಬೇಡ. ವರಿಷ್ಠರು ಯಾವುದೇ ತೀರ್ಮಾನ ತೆಗೆದುಕೊಂಡರೂ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಹಗರಿಬೊಮ್ಮನಹಳ್ಳಿ ಶಾಸಕ ಎಸ್. ಭೀಮಾನಾಯ್ಕ ಹೇಳಿದರು.
ತಾಲೂಕಿನ ಹನುಮನಹಳ್ಳಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಬಳ್ಳಾರಿ ಜಿಲ್ಲೆಯಲ್ಲಿ ಸೂಕ್ತ ಅಭ್ಯರ್ಥಿಯನ್ನು ಗುರುತಿಸಿ ಚುನಾವಣೆಗೆ ನಿಲ್ಲಿಸಲಾಗುವುದು. ಜೆಡಿಎಸ್ ಜಾತ್ಯತೀತ ಪಕ್ಷವಾಗಿರುವುದರಿಂದ ಯಾವುದೇ ಪಕ್ಷಕ್ಕೆ ಬೆಂಬಲಿಸುವ ಅಗತ್ಯವಿಲ್ಲ. ಪಕ್ಷದಲ್ಲಿ ಉತ್ತಮ ಅಭ್ಯರ್ಥಿಗಳಿದ್ದಾರೆ. ಅಭ್ಯರ್ಥಿಗಳ ಕೊರತೆ ಖಂಡಿತಾ ಇಲ್ಲ. ಡಾ. ಶ್ರೀನಿವಾಸ್, ಮೀನಳ್ಳಿ ತಾಯಣ್ಣ, ವೀರೇಶ್ ಕಗ್ಗಲ್, ಡಾ. ಸತ್ಯನಾರಾಯಣ ಸೇರಿದಂತೆ ಅನೇಕ ಅಕಾಂಕ್ಷಿಗಳಿದ್ದಾರೆ. ಪಕ್ಷದ ವರಿಷ್ಠರು ಯಾರಿಗೆ ಸ್ಪರ್ಧಿಸಲು ಅವಕಾಶ ಕೊಡುತ್ತಾರೊ ಅವರ ಗೆಲವಿಗಾಗಿ ಶ್ರಮಿಸುತ್ತೇವೆ. ಈಗಾಗಲೆ ಜೆಡಿಎಸ್ ಗ್ರಾಮ ಮಟ್ಟದಿಂದ ಸಂಘಟಿಸಲಾಗುತ್ತಿದೆ. ಜಿಲ್ಲಾದ್ಯಂತ ಪಕ್ಷ ಸಂಘಟಿಸುವ ಮೂಲಕ ಅಭ್ಯರ್ಥಿ ಗೆಲವಿಗೆ ಶ್ರಮಿಸಲಾಗುತ್ತದೆ ಎಂದು ಹೇಳಿದರು.
ವರಿಷ್ಠರು ಅಭ್ಯರ್ಥಿಯನ್ನು ಕಣಕ್ಕಿಳಿಸದಿದ್ದರೆ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕಾರ್ಯಕರ್ತರು ಮತ್ತು ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಯಾರನ್ನು ಬೆಂಬಲಿಸಬೇಕು ಎಂದು ಸೂಚಿಸುತ್ತಾರೋ ಅವರನ್ನು ನಾವು ಬೆಂಬಲಿಸಲು ಸೂಕ್ತ ನಿರ್ಣಯ ಕೈಗೊಳ್ಳುತ್ತೇವೆ. ಕ್ಷೇತ್ರದ ಯಾವುದೇ ಪಕ್ಷದ ಅಭ್ಯರ್ಥಿಯ ಗೆಲುವಿನಲ್ಲಿ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಮತದಾರರು ನಿರ್ಣಾಯಕರಾಗುತ್ತಾರೆ ಎಂದು ಶಾಸಕ ಭೀಮನಾಯ್ಕ ಮಾರ್ಮಿಕವಾಗಿ ಹೇಳಿದರು.
ಹಗರಿಬೊಮ್ಮನಹಳ್ಳಿ ತಾಲೂಕು ಜೆಡಿಎಸ್ ಅಧ್ಯಕ್ಷ ವೈ. ಮಲ್ಲಿಕಾರ್ಜುನ, ಕುರಿ ಶಿವಮೂರ್ತಿ, ಕೆ. ಕುಮಾರ್, ಈ. ಶ್ರೀನಿವಾಸ್, ಎರ್ರಿಸ್ವಾಮಿ, ನಾಗಪ್ಪ ಸೇರಿದಂತೆ ಇತರರು ಇದ್ದರು.
ತಪ್ಪದೆ ಮತ ಹಾಕಿ: ಬಸವರಾಜ
ಹೂವಿನಹಡಗಲಿ: ಮತದಾನ ಪ್ರಜಾಪ್ರಭುತ್ವದ ಹಕ್ಕು, ನಾಗರಿಕರು ತಪ್ಪದೇ ಮತದಾನದಲ್ಲಿ ಭಾಗವಹಿಸಿ ಎಂದು ಸಿಆರ್‌ಪಿ ಗುಜ್ಜಲ ಬಸವರಾಜ ಹೇಳಿದರು. ಪಟ್ಟಣದ ತುಂಗಭದ್ರಾ ಪ್ರೌಢಶಾಲೆ, ಸಿಡಬ್ಲ್ಯುಸಿ ಆಶ್ರಯದಲ್ಲಿ ಶನಿವಾರ ಜರುಗಿದ ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು. ಶಾಲಾ ಮುಖ್ಯಗುರು ಸುರೇಶ ಅಂಗಡಿ, ಸಿಡಬ್ಲ್ಯುಸಿಯ ಅಬ್ದುಲ್ ಘನಿ, ಕೊಟ್ರೇಶ್, ಶಿಕ್ಷಕ ದ್ವಾರಕೀಶ ರೆಡ್ಡಿ, ಸ್ವಾಮಿನಾಥ, ಜಯಮ್ಮ, ಗೀತಾ, ರೇಖಾ, ಆನಂದ, ಗಿಡ್ಡಾನಾಯ್ಕ, ಸೊಪ್ಪಿನ ಸಂತೋಷ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

