ಪಪಂ ಬಿಎಸ್‌ಆರ್ ಸದಸ್ಯರು ಕಾಂಗ್ರೆಸ್‌ಗೆ
ಸಿರುಗುಪ್ಪ: ತೆಕ್ಕಲಕೋಟೆ ಪಪಂ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮಾ. 24ರಂದು ಚುನಾವಣೆ ನಡೆಯಲಿದೆ. 20 ಸದಸ್ಯ ಬಲ ಹೊಂದಿರುವ ಪಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿದ್ದು, ಉಪಾಧ್ಯಕ್ಷ ಸ್ಥಾನ 3ಬಿ ಮಹಿಳಾ ಮೀಸಲಾತಿ ಹೊಂದಿದೆ. ಮಹತ್ವದ ಬೆಳವಣಿಗೆಯಲ್ಲಿ ಬಿಎಸ್‌ಆರ್‌ನಿಂದ ಚುನಾಯಿತರಾದ 8 ಸದಸ್ಯರು ಕಾಂಗ್ರೆಸ್ ಸೇರಿದ್ದಾರೆ. ಸದಸ್ಯರಾದ ಭೀಮಲಿಂಗಪ್ಪ, ಎಂ.ಡಿ. ಹುಸೇನ್ ಪೀರ್, ದೊಡ್ಡ ಪರಮೇಶ್ವರ್, ಎಂ. ಖಾದಿರಮ್ಮ, ನಾಗರತ್ನಮ್ಮ, ನರೇಗಲ್ ರಾಜ, ಪಿ. ರುದ್ರಪ್ಪ, ಜಯಲಕ್ಷ್ಮೀ ಶನಿವಾರ ಸಿರುಗುಪ್ಪ ಶಾಸಕ ಬಿ.ಎಂ. ನಾಗರಾಜ ನಿವಾಸಕ್ಕೆ ತೆರಳಿ ಕಾಂಗ್ರೆಸ್‌ಗೆ ಅಧಿಕೃತವಾಗಿ ಸೇರ್ಪಡೆಗೊಂಡು ಸಂಚಲನ ಮೂಡಿಸಿದ್ದಾರೆ.
ಚುನಾವಣಾ ವೆಚ್ಚ ವೀಕ್ಷಕರ ನೇಮಕ
ಬಳ್ಳಾರಿ: ಲೋಕಸಭಾ ಕ್ಷೇತ್ರಕ್ಕೆ ಇಬ್ಬರು ಅಧಿಕಾರಿಗಳನ್ನು ಚುನಾವಣಾ ವೆಚ್ಚ ವೀಕ್ಷಕರನ್ನಾಗಿ ನೇಮಿಸಿದೆ ಎಂದು ಡಿಸಿ, ಜಿಲ್ಲಾ ಚುನಾವಣಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ತಿಳಿಸಿದ್ದಾರೆ. ಹಡಗಲಿ, ಎಚ್.ಬಿ. ಹಳ್ಳಿ, ಸಂಡೂರು, ಕೂಡ್ಲಿಗಿ ವಿಧಾನಸಭಾ ಕ್ಷೇತ್ರಗಳಿಗೆ ಮನೋಹರ್ ಮೊ. 9481301259, ವಿಜಯನಗರ, ಕಂಪ್ಲಿ, ಬಳ್ಳಾರಿ ಗ್ರಾಮಾಂತರ, ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರಗಳಿಗೆ ಸುಂದರರಾಜ್ ಮೊ. 9481301258 ಅವರನ್ನು ನೇಮಿಸಲಾಗಿದೆ. ಚುನಾವಣಾ ವೀಕ್ಷಕರು ಸರ್ಕಾರಿ ಅತಿಥಿ ಗೃಹದಲ್ಲಿ ವಾಸ್ತವ್ಯ ಹೂಡಿದ್ದು, ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದಂತೆ ಯಾವುದೇ ತರಹದ ದೂರುಗಳನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಸಲ್ಲಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

