ನಾಮಪತ್ರ ಸಲ್ಲಿಸಲು ರಾಹುಕಾಲ ಅಡ್ಡಿ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಮಾ. 26
ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಬುಧವಾರ ಅಭ್ಯರ್ಥಿಗಳು 'ರಾಹುಕಾಲ ಬರುತ್ತಿದೆ' ಎಂಬ ಆತಂಕದಿಂದ ಡಿಸಿ ಕಚೇರಿ ಮುಂದೆ ಓಟದ ಸ್ಪರ್ಧೆ ನಡೆಸಿದರು.
ಬುಧವಾರ ಬಿಜೆಪಿ ಅಭ್ಯರ್ಥಿ ಬಿ. ಶ್ರೀರಾಮುಲು, ಕಾಂಗ್ರೆಸ್ನ ಎನ್.ವೈ. ಹನುಮಂತಪ್ಪ, ಜೆಡಿಎಸ್ನ ರವಿನಾಯ್ಕ, ಆಮ್ ಆದ್ಮಿಯ ಶಿವಕುಮಾರ್ ಮಾಳಗಿ, ಬಿಎಸ್ಪಿ ಬಿ. ರಾಮುಡು ತಮ್ಮ ಬೆಂಬಲಿಗರೊಂದಿಗೆ ತೆರಳಿ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಸಹಾಯಕ ಚುನಾವಣಾಧಿಕಾರಿ ವೆಂಕಟೇಶ್ಗೆ ನಾಮಪತ್ರ ಸಲ್ಲಿಸಿದರು.
ಜಿಲ್ಲಾ ಸಚಿವರ ಓಟ: ಜಿಲ್ಲಾಧಿಕಾರಿ ಕಚೇರಿ ಪ್ರವೇಶಿಸುವಾಗ 12 ಗಂಟೆ ಸಮೀಪಿಸಿತ್ತು. ಜಿಲ್ಲಾಧಿಕಾರಿ ಕಚೇರಿ ಒಳಗೆ ಎನ್.ವೈ. ಹನುಮಂತಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯಕ್ ಪ್ರವೇಶಿಸಿದರು. ರಾಹುಕಾಲ ಸಮೀಪಿಸುತ್ತಿರುವುದನ್ನು ಅರಿತ ಶ್ರೀರಾಮುಲು, ಕಾಂಗ್ರೆಸ್ ಅಭ್ಯರ್ಥಿಗಿಂತ ಮೊದಲೇ ನಾಮಪತ್ರ ಸಲ್ಲಿಸಲು ಓಡಿದರು. ಇದನ್ನರಿತ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ ನಾಯಕ್, ಮೊದಲು ನಾಮಪತ್ರ ಸಲ್ಲಿಸಬೇಕೆಂದು ಡಿಸಿ ಕಚೇರಿಯೊಳಗೆ ಓಡಿದರು.
ಡಿಸಿ ಎದುರೇ ನಾಮಪತ್ರ ಗೊಂದಲ: ನಾಮಪತ್ರ ಸಲ್ಲಿಸಲು ಜಿಲ್ಲಾಧಿಕಾರಿ ಕಚೇರಿ ಚೇಂಬರ್ಗೆ ಹೋದಾಗ, ಶ್ರೀರಾಮುಲು ಪರ ನ್ಯಾಯವಾದಿ ಸಿದ್ಧಾರೆಡ್ಡಿ, ಬಿಜೆಪಿ ಅಭ್ಯರ್ಥಿ ಮೊದಲು ಬಂದಿದ್ದಾರೆ, ಅವರ ನಾಮಪತ್ರ ಸ್ವೀಕರಿಸಬೇಕೆಂದರು. ಸಚಿವ ಪರಮೇಶ್ವರ ನಾಯಕ್, ತಾವು ಮೊದಲು ಬಂದಿದ್ದು. ನಾವೇ ಮೊದಲಿಗೆ ನಾಮಪತ್ರ ಸಲ್ಲಿಸುತ್ತೇವೆ. ಐದು ನಿಮಿಷ ನಿಲ್ಲಿ ಎಂದರು. ಕಡೆಗೆ ಜಿಲ್ಲಾಧಿಕಾರಿ ಆದಿತ್ಯ ಬಿಸ್ವಾಸ್ ಅವರೇ ಎಲ್ಲಾ ಗೊಂದಲಗಳಿಗೆ ತೆರೆ ಎಳೆದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

