ಬಳ್ಳಾರಿ

ಪೌರಕಾರ್ಮಿಕರ ಮತದಾನ ಜಾಗೃತಿ

Published On :

ಬಳ್ಳಾರಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಹಾನಗರಪಾಲಿಕೆ ಹಾಗೂ ಜಿಲ್ಲಾ ಸ್ವೀಪ್ ಸಮಿತಿಯು ಜಂಟಿಯಾಗಿ  ಪೌರ ಕಾರ್ಮಿಕರಿಂದ ಮತದಾನ ಜಾಗೃತಿ ಕಾರ್ಯಕ್ರಮ ಏರ್ಪಡಿಸಿತ್ತು.  
ಕಾರ್ಯಕ್ರಮದಲ್ಲಿ ಪೌರ ಕಾರ್ಮಿಕರು ಹಿಂದಿನ ಚುನಾವಣೆಯಲ್ಲಿ ಕಡಿಮೆ ಪ್ರಮಾಣದಲ್ಲಿ ಮತದಾನವಾದ ಮತಗಟ್ಟೆಗಳಿಗೆ ತೆರಳಿ ವಿವಿಧ ಘೋಷವಾಕ್ಯಗಳನ್ನು ಕೂಗುತ್ತಾ, ಕರಪತ್ರಗಳನ್ನು ವಿತರಿಸಿ ಮತದಾನ ಜಾಗೃತಿ ಮೂಡಿಸಿದರೆ, ಕಸ ಸಂಗ್ರಹಣಾ ವಾಹನಗಳು ಸಂಗೀತ ಸಂಯೋಜನೆ ಮಾಡಿದ ಸಿಡಿಯನ್ನು ಧ್ವನಿವರ್ಧಕಗಳ ಮೂಲಕ ಮುಕ್ತವಾಗಿ ಮತದಾನ ಮಾಡುವಂತೆ ಎಲ್ಲ ಬಡಾವಣೆಗಳಲ್ಲಿ ಜಾಗೃತಿ ಮೂಡಿಸಿದ್ದು ವಿಶೇಷವಾಗಿತ್ತು.  ನಗರದ ದುರ್ಗಮ್ಮ ದೇವಸ್ಥಾನ, ಗಾಂಧಿನಗರ, ಸತ್ಯನಾರಾಯಣ ಪೇಟೆ, ಬಸವೇಶ್ವರ ನಗರ ಹಾಗೂ ಮತ್ತಿತರ ಬಡಾವಣೆಗಳಲ್ಲಿ ಸಂಚರಿಸಿ ಮುಕ್ತವಾಗಿ ಮತದಾನ ಮಾಡುವಂತೆ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮದ್ ಸಲಾವುದ್ದೀನ್ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಮತದಾನ ಮಾಡುವಂತೆ ಮನವಿ ಮಾಡಿದರು.  
ಪಾಲಿಕೆ ಆಯುಕ್ತ ಚಿಕ್ಕಣ್ಣ ಮಾತನಾಡಿ, ಎಲ್ಲ ಪೌರಕಾರ್ಮಿಕರು ಕಸ ಸಂಗ್ರಹಣೆ ಮಾಡುವ ಸಂದರ್ಭದಲ್ಲಿ  ಮತದಾರರಿಗೆ ಜಾಗೃತಿ ಮೂಡಿಸಬೇಕೆಂದರು.
ನಿತೀಶ್ ಪಾಟೀಲ್, ಚಂದ್ರಶೇಖರಗುಡಿ, ಎಚ್. ಶ್ರೀನಿವಾಸ, ನಾರಾಯಣ ರಾವ್, ಲಿಂಗರಾಜು, ಪಾಲಿಕೆ ಸಿಬ್ಬಂದಿ, ಪೌರ ಕಾರ್ಮಿಕರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.