ಬಳ್ಳಾರಿ

ಮೂಢನಂಬಿಕೆ ವಿರುದ್ಧ ಜಾಗೃತಿ ಅಗತ್ಯ

Published On :

ಕನ್ನಡಪ್ರಭ ವಾರ್ತೆ, ಹೊಸಪೇಟೆ, ಮೇ 1
ಮೂಢನಂಬಿಕೆ ವಿರುದ್ಧ ದಲಿತರಲ್ಲಿ ಜಾಗೃತಿ ಮೂಡಿಸಬೇಕೆಂದು ಡಾ.ಬಿ.ಆರ್. ಅಂಬೇಡ್ಕರ್ ಸಂಘದ ತಾಲೂಕು ಅಧ್ಯಕ್ಷ ಎಂ.ಸಿ. ವೀರಸ್ವಾಮಿ ಹೇಳಿದರು.
ನಗರದ ಸಿದ್ಧಲಿಂಗಪ್ಪ ಚೌಕಿಯಲ್ಲಿ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 123ನೇ ಜನ್ಮದಿನಾಚರಣೆ ಹಾಗೂ ಬಾಬು ಜಗಜೀವನರಾಂ ಅವರ 107ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅಂಬೇಡ್ಕರ್ ತತ್ವಗಳನ್ನು ಅಳವಡಿಸಿಕೊಂಡು ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಬೇಕು. ಪ್ರತಿಯೊಬ್ಬರೂ ವಿದ್ಯಾವಂತರಾದಾಗ ಮಾತ್ರ ದೇಶ ಮತ್ತು ಸಮಾಜ ಅಭಿವೃದ್ಧಿ ಹೊಂದಲು ಸಾಧ್ಯ. ತಂದೆ-ತಾಯಿಗಳು ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡಿ ಪ್ರತಿಭಾವಂತರನ್ನಾಗಿ ರೂಪಿಸಬೇಕು ಎಂದರು.
ಯುವಕ ಸಂಘದ ಅಧ್ಯಕ್ಷ ರಾಮಣ್ಣ ಬಾಳಿಕಾಯಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಂಘದ ಗೌರವಾಧ್ಯಕ್ಷ ಎಚ್. ವೆಂಕಟೇಶ್, ಡಾ. ಬಾಬು ಜಗಜೀವನರಾಂ ಸಂಘದ ತಾಲೂಕು ಅಧ್ಯಕ್ಷ ಎಚ್.ಎಸ್. ವೆಂಕಪ್ಪ, ಸ್ಲಂ ಜನಜಾಗೃತಿ ಸಂಘದ ತಾಲೂಕು ಸಂಚಾಲಕ ಎಚ್. ಶೇಷು, ಅಂಬೇಡ್ಕರ್ ಸಂಘದ ತಾಲೂಕು ಕಾರ್ಯದರ್ಶಿ ಎನ್. ವೆಂಕಟೇಶಲು, ಸಾಂಸ್ಕೃತಿಕ ಕಾರ್ಯದರ್ಶಿ ಬಿ. ಮಾರೆಣ್ಣ, ವಕೀಲ ವೆಂಕಟೇಶ್, ನಗರಸಭೆ ಸದಸ್ಯೆ ನೂರ್‌ಜಹಾನ್, ಜೆ.ಬಿ. ತಿಮ್ಮಪ್ಪ ಯಾದವ್, ಕೊಲಮಿ ದುರುಗಪ್ಪ, ಮಲ್ಲಿಕಾರ್ಜುನ, ಶರೀಫ್‌ಸಾಬ್ ಸೇರಿದಂತೆ ಇತರರು ಭಾಗವಹಿಸಿದ್ದರು.
ಎಚ್. ವೆಂಕಟೇಶ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಬಂಡಿಹಟ್ಟಿ ಚಂದ್ರಶೇಖರ್ ಕಾರ್ಯಕ್ರಮ ನಿರೂಪಿಸಿದರು. ವಾದಿರಾಜ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.