ಬಳ್ಳಾರಿ

11 ಕೇಂದ್ರಗಳಲ್ಲಿ ಸಿಇಟಿ ಬರೆದ ವಿದ್ಯಾರ್ಥಿಗಳು

Published On :

ಬಳ್ಳಾರಿ: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕೆ ಸಾಮಾನ್ಯ ಪ್ರವೇಶಾತಿ ಪರೀಕ್ಷೆ ಗುರುವಾರ ನಗರದ ವಿವಿಧ ಕಾಲೇಜುಗಳಲ್ಲಿ ಪ್ರಾರಂಭವಾಯಿತು.
ಎಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ, ಆಯುರ್ವೇದ ಮುಂತಾದ ಕೋರ್ಸ್‌ಗಳಿಗೆ ಪ್ರವೇಶ ಬಯಸುವ ಪಿಯು ವಿಜ್ಞಾನ ಪರೀಕ್ಷೆ ಬರೆದ ನೂರಾರು ವಿದ್ಯಾರ್ಥಿಗಳು ತಮ್ಮ ಭವಿಷ್ಯ ರೂಪಿಸಿಕೊಳ್ಳುವ ನಿಟ್ಟಿನಲ್ಲಿ ಪ್ರವೇಶ ಪರೀಕ್ಷೆಗೆ ಹಾಜರಾಗಿದ್ದು, ತುಂಬಾ ಉತ್ಸಾಹದಿಂದ ಪರೀಕ್ಷೆ ಬರೆದರು.
ನಗರದಲ್ಲಿ 8, ಹೊಸಪೇಟೆ 3 ಸೇರಿ ಒಟ್ಟು ಜಿಲ್ಲೆಯ 11 ಪರೀಕ್ಷಾ ಕೇಂದ್ರಗಳಲ್ಲಿ ಗುರುವಾರ, ಶುಕ್ರವಾರ ಪರೀಕ್ಷೆಗಳು ನಡೆಯಲಿವೆ.
ಸ್ಥಳೀಯ ವೀರಶೈವ ಕಾಲೇಜು, ವಾರ್ಡ್ಲಾ ಕಾಲೇಜು, ಮುನಿಸಿಪಲ್ ಕಾಲೇಜು, ಎಸ್.ಜಿ. ಕಾಲೇಜು, ಎ.ಎಸ್.ಎಂ. ಮಹಿಳಾ ಕಾಲೇಜು, ಸರ್ಕಾರಿ ಬಾಲಕಿಯರ ಪಿಯು ಕಾಲೇಜು, ಸಂತ ಜಾನ್ ಪಿಯು ಕಾಲೇಜು, ಸಂತ ಫಿಲೋಮಿನಾ ಕಾಲೇಜು, ಹೊಸಪೇಟೆ ವಿಜಯನಗರ ಕಾಲೇಜು, ಚಿತ್ತವಾಡಗಿ ಸರ್ಕಾರಿ ಪಿಯು ಕಾಲೇಜು, ಬಾಲಕಿಯರ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಪರೀಕ್ಷೆಗಳು ಜರುಗಲಿವೆ. ಜಿಲ್ಲಾಡಳಿತ ಮುಂಜಾಗ್ರತೆ ಕ್ರಮಕ್ಕಾಗಿ ಕೇಂದ್ರಗಳ ಸುತ್ತಮುತ್ತ ಪೊಲೀಸ್ ಭದ್ರತೆ ಕಲ್ಪಿಸಿದೆ.
--
ಸಂಡೂರು: ಶಿವಾಜಿ ಜಯಂತಿ ಆಚರಣೆ
ಸಂಡೂರು: ಪಟ್ಟಣದಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ 387ನೇ ಜಯಂತಿಯನ್ನು ಸಂಭ್ರಮದಿಂದ  ಆಚರಿಸಲಾಯಿತು. ಮರಾಠ ಸಮಾಜದಿಂದ ಶಿವಾಜಿ ಮೂರ್ತಿಯನ್ನು ವಾಹನದಲ್ಲಿರಿಸಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಡೆಸಲಾಯಿತು. ಬೆಳಗ್ಗೆ 13ನೇ ವರ್ಷದ ಅಂಬಾಭವಾನಿ ವರ್ಧಂತೋತ್ಸವ ಆಚರಿಸಲಾಯಿತು, ನೀರೆಯರಿಂದ ದೇವಿಗೆ ಅಭಿಷೇಕ, ಪುನ್ಯಾವಾಚನ, ಮಲ್ಹಾರಿ ಹೋಮ, ಕುಂಕುಮ ಅರ್ಚನೆ, ಹೋಮ ಕಾರ್ಯಕ್ರಮಗಳು ಜರುಗಿದವು. ಮಧ್ಯಾಹ್ನ ಜರುಗಿದ ಕಾರ್ಯಕ್ರಮದಲ್ಲಿ ವಿರಕ್ತ ಮಠದ ಪ್ರಭುಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಮರಾಠ ಸಮಾಜದ ಅಧ್ಯಕ್ಷ ಕೆ. ರಘುನಾಥ್ ರಾವ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಿಪಿಐ ರಮೇಶ್ ರಾವ್, ಪ್ರಧಾನ ಕಾರ್ಯದರ್ಶಿ ನಾರಾಯಣ ನಿಂಬಾಳ್ಕರ್ ಉಪಸ್ಥಿತರಿದ್ದರು. ಮರಾಠ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಬದರೀನಾಥ್ ಸ್ವಾಗತಿಸಿದರು. ಹನುಮಂತರಾವ್ ಬೋಯಿಟೆ ಕಾರ್ಯಕ್ರಮ ನಿರೂಪಿಸಿದರು. ವೆಂಕಟರಾವ್ ಘೋರ್ಪಡೆ ವಂದನಾರ್ಪಣೆ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.