ಬಳ್ಳಾರಿ

ಬಸವ ಜಯಂತಿ ಸರಳ ಆಚರಣೆ

Published On :

ಕನ್ನಡಪ್ರಭ ವಾರ್ತೆ, ಬಳ್ಳಾರಿ, ಮೇ 2
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮಹಾ ಮಾನವತಾವಾದಿ ಶ್ರೀ ಬಸವೇಶ್ವರರ ಜನ್ಮದಿನ ಕಾರ್ಯಕ್ರಮವನ್ನು ಬಸವಣ್ಣನವರ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಪೂಜೆ ಸಲ್ಲಿಸುವುದರ ಮೂಲಕ ಶುಕ್ರವಾರ ಸರಳವಾಗಿ ಆಚರಿಸಲಾಯಿತು.   
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ, ನಗರದ ಡಾ. ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ನಂದೀಶ್, ಡಿವೈಎಸ್‌ಪಿ  ಮುರುಗಣ್ಣನವರ್, ಮಹಾನಗರ ಪಾಲಿಕೆ ಆಯುಕ್ತ ಚಿಕ್ಕಣ್ಣ, ಬಸವ ಸಮಿತಿ ಅಧ್ಯಕ್ಷ ಗೋನಾಳ್ ವಿರೂಪಾಕ್ಷಗೌಡ, ಶಾರದ ಮಾತೆ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಶ್ರೀ ಬಸವೇಶ್ವರರ  ಭಾವಚಿತ್ರಕ್ಕೆ ಪೂಜೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಗಾಯಕ ದೊಡ್ಡಬಸವ ಗವಾಯಿ ಮತ್ತು ತಂಡದವರು ನಾಡಗೀತೆ ಮತ್ತು ವಿವಿಧ ವಚನಗಳನ್ನು ಗಾಯನ ಮಾಡಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕ ನಾಗರಾಜ್ ನಿರೂಪಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಮೋತಿ ವೃತ್ತದ ಬಳಿ ಇರುವ ಶ್ರೀ ಬಸವೇಶ್ವರರ ಪುತ್ಥಳಿಗೆ ಜಿಲ್ಲಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್, ವಿವಿಧ ಅಧಿಕಾರಿಗಳು ಹಾಗೂ ಬಸವ ಸಮಿತಿಯ ಪದಾಧಿಕಾರಿಗಳು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.