ಬಳ್ಳಾರಿ

ಜೂನ್ ಮೊದಲ ವಾರ ಜನಸಂಪರ್ಕ ಸಭೆ

Published On :

ಬಳ್ಳಾರಿ:  ಜನರ ಸಮಸ್ಯೆಗಳ ಕುರಿತು ನೇರವಾಗಿ ಅರಿಯಲು ಜೂನ್ ಮೊದಲ ವಾರದಿಂದ ಪಂಚಾಯತ್ ಮಟ್ಟದಲ್ಲಿ ಜನಸಂಪರ್ಕ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ.ಪರಮೇಶ್ವರ್ ನಾಯ್ಕ್ ತಿಳಿಸಿದರು.
 ನಗರದ ಜಿಪಂ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಜನಸಂಪರ್ಕ ಸಭೆಯಿಂದ ವಿಧವಾ ವೇತನ, ವೃದ್ಧಾಪ್ಯ ವೇತನ ಸೇರಿದಂತೆ ಇನ್ನಿತರೆ ಹಲವಾರು ಸಮಸ್ಯೆಗಳಿಂದ ಬಳಲುತ್ತಿರುವ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸಲಾಗುವುದು. ಜಿಲ್ಲೆಯ ಎಲ್ಲ ಗ್ರಾಪಂ ಮಟ್ಟದಲ್ಲೂ ಈ ಸಭೆಗಳನ್ನು ನಡೆಸಲಾಗುವುದು ಎಂದರು. ಅಧಿಕಾರಿಗಳ ಮಾಹಿತಿಯ ಮೇರೆಗೆ ಬಳ್ಳಾರಿ ಗ್ರಾಮೀಣ ಭಾಗದಲ್ಲಿ 3, ಸಂಡೂರು ತಾಲೂಕು 1, ಹ.ಬೊ. ಹಳ್ಳಿ, ಹಡಗಲಿ ತಾಲೂಕುಗಳ ಕೆಲ ಗ್ರಾಮಗಳಲ್ಲಿ ಕುಡಿವ ನೀರಿನ ಸಮಸ್ಯೆ ಕಂಡುಬಂದಿದ್ದು, ನಿರ್ಲಕ್ಷ್ಯ ವಹಿಸಿದಲ್ಲಿ ತಾಪಂ ಇಒ, ಎಇಇಗಳ ಮೇಲೆ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದರು.
ಕಾಂಗ್ರೆಸ್ ಗೆಲುವು ನಿಶ್ಚಿತ: ಪಿಟಿಪಿ ವಿಶ್ವಾಸ
ಬಳ್ಳಾರಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ. ಜಿಲ್ಲೆಯ ಜನತೆ ಬದಲಾವಣೆ ಬಯಸಿದ್ದು, ಕಾಂಗ್ರೆಸ್ ಬೆಂಬಲಿಸಲಿದ್ದಾರೆ ಎಂದು ಸಚಿವರು ತಿಳಿಸಿದರು. ಲೋಕಸಭಾ ಚುನಾವಣೆಯಲ್ಲಿ ಜನರ ತೀರ್ಪು ಏನೇ ಇರಲಿ. ಸೋಲು-ಗೆಲುವಿನ ಜವಬ್ದಾರಿಯನ್ನು ಜಿಲ್ಲಾ ಉಸ್ತುವಾರಿ ಸಚಿವರಾಗಿ ನೀವು ಹೊತ್ತುಕೊಳ್ಳುವಿರಾ. ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಅದಕ್ಕೆ ಪಕ್ಷದ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು. ಅವರು ನೀಡುವ ತೀರ್ಪೇ ಅಂತಿಮ. ಮತದಾರರ ತೀರ್ಪು ನಮ್ಮ ಪಕ್ಷದ ಪರವಾಗಿರುತ್ತದೆ ಎಂಬ ವಿಶ್ವಾಸ ನನಗಿದೆ. ವಿರುದ್ಧವಾಗಿ ಬಂದರೂ ಜನರ ನಿರ್ಧಾರಕ್ಕೆ ತಲೆಬಾಗುತ್ತೇವೆ ಎಂದರು. ಸಭೆಯಲ್ಲಿ ಜಿಪಂ ಸಿಇಒ ಮಹಮ್ಮದ್ ಸಲಾವುದ್ದೀನ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.