ಡೊನೇಶನ್ ಹಾವಳಿ ತಡೆಗೆ ಪ್ರತಿಭಟನೆ
ಕನ್ನಡಪ್ರಭ ವಾರ್ತೆ, ಹೊಸಪೇಟೆ, ಮೇ 3
ಡೊನೇಶನ್ ಹಾವಳಿ ತಡೆಗಟ್ಟಬೇಕೆಂದು ಆಗ್ರಹಿಸಿ ಎಸ್ಎಫ್ಐ ತಾಲೂಕು ಸಮಿತಿ ಹಾಗೂ ಡಿವೈಎಫ್ಐ ತಾಲೂಕು ಸಮಿತಿಯ ಪದಾಧಿಕಾರಿಗಳು ಶನಿವಾರ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಮಹೇಶ್ ಮಾತನಾಡಿ, ತಾಲೂಕಿನಲ್ಲಿರುವ ಖಾಸಗಿ ಮತ್ತು ಅನುದಾನಿತ ಶಾಲೆಗಳು ದಾಖಲಾತಿ ಮಾಡಿಕೊಳ್ಳುವ ಸಮಯದಲ್ಲಿ ಸರ್ಕಾರ ನಿಗದಿ ಮಾಡಿರುವ ಶುಲ್ಕಕ್ಕೆ ಸಂಬಂಧಿಸಿದ ನೀತಿ-ನಿರೂಪಣೆಯ ಪ್ರಕಾರ ಮಾಡಿಕೊಳ್ಳುತ್ತಿಲ್ಲ. ಇಲ್ಲಿ ಯಾರು ಹೆಚ್ಚು ಹಣವನ್ನು ಕೊಡುತ್ತಾರೋ ಅವರ ಮಕ್ಕಳಿಗೆ ಶಾಲೆಯಲ್ಲಿ ದಾಖಲಾತಿ ಮಾಡಿಕೊಳ್ಳಲಾಗುತ್ತಿದೆ. ತಕ್ಷಣವೇ ಇದನ್ನು ನಿಯಂತ್ರಿಸಬೇಕು ಎಂದು ಒತ್ತಾಯಿಸಿದರು.
ಪ್ಲೇ ಕ್ಲಾಸ್, ಎಲ್ಕೆಜಿ, ಯುಕೆಜಿ ಮತ್ತು ಒಂದನೇ ತರಗತಿಗಳಿಗೆ ಮಕ್ಕಳನ್ನು ಸೇರಿಸಿಕೊಳ್ಳಲು ಕನಿಷ್ಠ 5 ಸಾವಿರಗಳಿಂದ ರು. 30 ಸಾವಿರವರೆಗೆ ಯಾವುದೇ ರಸೀದಿಯನ್ನು ಕೊಡದೆ ಶಾಲೆಗಳು ಸಂಗ್ರಹಿಸುತ್ತಿವೆ. ನಂತರ ಬೋಧನಾ ಶುಲ್ಕವನ್ನು, ಬಸ್ಗೆ, ಮಕ್ಕಳ ಬಟ್ಟೆ, ಪುಸ್ತಕ, ಇತರೆ ಎಲ್ಲಾ ರೀತಿಯಾಗಿ ಹಣವನ್ನು ತೆಗೆದುಕೊಳ್ಳುತ್ತಿದ್ದಾರೆ. ಹಗಲು ದರೋಡೆಗೆ ಇಳಿದಿರುವ ಖಾಸಗಿ-ಅನುದಾನಿತ ಶಾಲೆಗಳನ್ನು ಸರ್ಕಾರದ ಶಿಕ್ಷಣ ಇಲಾಖೆ ನಿಯಂತ್ರಿಸದೆ ಇರುವುದನ್ನು ನೋಡಿದರೆ ಇಲಾಖೆಯು ಇದರಲ್ಲಿ ಪಾಲುದಾರರೆ ಎಂಬ ಸಂಶಯ ಮೂಡುತ್ತದೆ ಎಂದು ಅವರು ಹೇಳಿದರು.
ಶಿಕ್ಷಣ ಇಲಾಖೆಯಿಂದ ಸಾರ್ವಜನಿಕರಿಗೆ ಸರ್ಕಾರದ ನೀತಿ ನಿರೂಪಣೆಗಳಿಗೆ ಸಂಬಂಧಿಸಿದಂತೆ ಜಾಗೃತಿಯನ್ನು ಮಾಡುವ ಕೆಲಸವನ್ನು ಮಾಡಬೇಕಾಗಿತ್ತು. ಆದರೆ ಅದನ್ನು ಮಾಡಿಲ್ಲ. ತಕ್ಷಣವೇ ಬಿಇಓ ಮಧ್ಯೆ ಪ್ರವೇಶಿಸಿ ಡೊನೇಶ್ ನಿಯಂತ್ರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಡಿವೈಎಫ್ಐನ ಎನ್. ಯಲ್ಲಾಲಿಂಗ, ಉಪಾಧ್ಯಕ್ಷ ಕಲ್ಯಾಣಯ್ಯ, ಸಾಂಸ್ಕೃತಿಕ ಕಾರ್ಯದರ್ಶಿ ಕೆ. ರಮೇಶ್, ಮುಖಂಡರಾದ ಬಂಡೆ ತಿರುಕಪ್ಪ, ಇ. ಮಂಜುನಾಥ, ಎಸ್ಎಫ್ಐ ತಾಲೂಕು ಅಧ್ಯಕ್ಷ ಪಂಪಾನಂದ, ಕಾರ್ಯದರ್ಶಿ ವಸಂತ ಕಲಾಲ್, ಜಿಲ್ಲಾ ಮುಖಂಡ ಶರತ್ ಕುಮಾರ್ ಮತ್ತಿತರರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

