ದೇವದಾಸಿ ಪದ್ಧತಿ ನಿರ್ಮೂಲನೆಗೆ ಕಾನೂನು ಅಗತ್ಯ: ಯು. ಬಸವರಾಜ
ಹಗರಿಬೊಮ್ಮನಹಳ್ಳಿ: ಪ.ಜಾತಿ-ಪಂಗಡದ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ನೀಡುವಂತಹ ಕಾನೂನು ಪರಿಣಾಕಾರಿಯಾಗಿ ಜಾರಿಗೊಳಿಸುವ ಮೂಲಕ ದೇವದಾಸಿ ಕುಟುಂಬಗಳಿಗೆ ಅರ್ಥಿಕ ಸ್ವಾವಲಂಬನೆ ಕಲ್ಪಿಸಬೇಕೆಂದು ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ರಾಜ್ಯ ಗೌರವಾಧ್ಯಕ್ಷ ಯು. ಬಸವರಾಜ ಆಗ್ರಹಿಸಿದ್ದಾರೆ.
ಶನಿವಾರ ಪಟ್ಟಣದ ರಾಮನಗರದಲ್ಲಿನ ಈಶ್ವರ ದೇವಸ್ಥಾನದ ಪಕ್ಕದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಹಾಗೂ ಬಸವ ಜಯಂತಿ ಅಂಗವಾಗಿ ದೇವದಾಸಿ ವಿಮೋಚನಾ ಸಂಘದ ತಾಲೂಕು ಘಟಕ ಆಯೋಜಿಸಿದ್ದ ದೇವದಾಸಿ ಪದ್ಧತಿ ತಡೆಗೆ ಜಾಗೃತಿ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ಎಂಟು ವರ್ಷಗಳ ಹಿಂದೆ ದೇವದಾಸಿ ಪದ್ಧತಿಗೆ ಒಳಗಾಗಿದ್ದ ತಾಲೂಕಿನ ಮಾಲ್ವಿ ಗ್ರಾಮದ ಎಚ್. ಸುಮಂಗಳಾ ಅವರು ಬಳ್ಳಾರಿಯ ವೇಣು ಅವರೊಂದಿಗೆ ವಿವಾಹ ಬಂಧನಕ್ಕೆ ಒಳಪಟ್ಟರು.
ಸಮಾವೇಶದ ಅಧ್ಯಕ್ಷತೆ ವಹಿಸಿದ್ದ ಸಂಘದ ರಾಜ್ಯಾಧ್ಯಕ್ಷೆ ಬಿ.ಮಾಳಮ್ಮ ಮಾತನಾಡಿದರು.
ಸಂಘದ ತಾಲೂಕು ಅಧ್ಯಕ್ಷೆ ಹೆಚ್.ಬಿ. ಮೈಲಮ್ಮ, ಜಿಲ್ಲಾಧ್ಯಕ್ಷ ಬಿ. ಅಡಿವೆಪ್ಪ, ಸಂಘದ ರಾಜ್ಯ ಕಾರ್ಯದರ್ಶಿ ಟಿ.ರೇಣುಕಾ, ಕಾರ್ಮಿಕ ಮುಖಂಡ ಈ. ಕೃಷ್ಣಮೂರ್ತಿ, ಸಾಹಿತಿ ಹುರುಕಡ್ಲಿ ಶಿವಕುಮಾರ, ಸಿಐಟಿಯು ಕಾರ್ಯದರ್ಶಿ ಎಸ್. ಜಗನ್ನಾಥ, ಜನವಾದಿ ಮಹಿಳಾ ಸಂಘದ ದಾವಣಗೆರೆ ಜಿಲ್ಲಾಧ್ಯಕ್ಷೆ ಪದ್ಮಾವತಿ, ತಾಲೂಕು ಮುಖಂಡ ಎ.ಹನುಮಕ್ಕ, ಜಿ.ಸರೋಜ, ಅಂಜಿನಮ್ಮ, ಜಿ.ಆರ್.ಮಲ್ಲಮ್ಮ ಸೇರಿದಂತೆ ಹಲವರು ಸಮಾವೇಶದಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

