ಬಳ್ಳಾರಿ

ಬಸ್ ಪ್ರಯಾಣ ದರ ಏರಿಕೆಗೆ ಖಂಡನೆ

Published On :

ಬಳ್ಳಾರಿ: ಬಸ್ ಪ್ರಯಾಣ ದರ ಹಾಗೂ ಹೆಚ್ಚುತ್ತಿರುವ ಭಯೋತ್ಪಾದಕ ಕೃತ್ಯಗಳನ್ನು ಖಂಡಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಬಿಜೆಪಿ ಜಿಲ್ಲಾ ಘಟಕವು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿತು.
ಸ್ಥಳೀಯ ಕನಕದುರ್ಗಮ್ಮ ದೇವಸ್ಥಾನದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಅಂಡರ್ ಬ್ರಿಡ್ಜ್, ಗಡಗಿಚೆನ್ನಪ್ಪ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿತು. ರಸ್ತೆಯುದ್ದಕ್ಕೂ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜನವಿರೋಧಿ ನೀತಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಹರಿಗೌಡ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿ, ಈಗಾಗಲೇ ಕೇಂದ್ರ ಸರ್ಕಾರ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿದ್ದು, ಇದೀಗ ರಾಜ್ಯ ಸರ್ಕಾರ ಬಸ್ ಪ್ರಯಾಣ ದರ ಏರಿಕೆ ಮಾಡಿರುವುದು ರಾಜ್ಯದ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದರು.
ಲೋಕಸಭೆ ಚುನಾವಣೆ ಮುಗಿಯುವುದನ್ನೇ ಕಾದು ಕುಳಿತಿದ್ದ ರಾಜ್ಯದ ಕಾಂಗ್ರೆಸ್ ಸರ್ಕಾರ, ಫಲಿತಾಂಶ ಹೊರ ಬೀಳುವ ಮುನ್ನವೇ ಬಿಎಂಟಿಸಿ ಬಸ್ ಪ್ರಯಾಣ ದರವನ್ನು ಶೇ. 16ರಷ್ಟು ಹಾಗೂ ಸಾರಿಗೆ ಕೆಎಸ್ಸಾರ್ಟಿಸಿ ಬಸ್ ಪ್ರಯಾಣ ದರ ಶೇ. 10.5ರಷ್ಟು ಏರಿಕೆ ಮಾಡಿ ಆದೇಶ ಹೊರಡಿಸಿದ್ದು, ರಾಜ್ಯದ ಬಡ, ಮಧ್ಯಮ ವರ್ಗದ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದೆ ಎಂದು ಆರೋಪಿಸಿದರು.
ದೇಶದಲ್ಲಿ ಭಯೋತ್ಪಾದಕ ಕೃತ್ಯಗಳು ದಿನೇ ದಿನೆ ಹೆಚ್ಚುತ್ತಿವೆ. ಈ ಬಗ್ಗೆ ಸೂಕ್ತ ಮಾಹಿತಿ ಕೇಂದ್ರ ಸರ್ಕಾರದ ಬಳಿಯಿದ್ದರೂ, ಕ್ರಮಕೈಗೊಳ್ಳುವಲ್ಲಿ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ. ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸೂಕ್ತ ಕ್ರಮಕೈಗೊಂಡು, ಜನರನ್ನು ರಕ್ಷಿಸಬೇಕೆಂದು ಹೇಳಿದರು.
ಮುಖಂಡ ಕೆ.ಎ.ರಾಮಲಿಂಗಪ್ಪ, ನಗರಾಧ್ಯಕ್ಷ ಕೆ.ಎ. ವೇಮಣ್ಣ, ಗ್ರಾಮೀಣ ಜಿಲ್ಲಾಧ್ಯಕ್ಷ ಶಿವಾರೆಡ್ಡಿ, ಕಾರ್ಯದರ್ಶಿ ಕೆ.ಆರ್. ಮಲ್ಲೇಶ್ಕುಮಾರ್, ಯುವ ಮೋರ್ಚಾ ಕಾರ್ಯದರ್ಶಿ ಸುಧೀರ್ ಕುಮಾರ್, ನಗರ ಕಾರ್ಯದರ್ಶಿ ಎಸ್.ರಾಘವೇಂದ್ರ, ಸುರೇಶ್, ಎಚ್.ತಿಪ್ಪಣ್ಣ, ಎನ್.ರಾಮದಾಸ್, ಪ್ರಹ್ಲಾದ್ ದೇಸಾಯಿ, ಬಿ.ಜಗನ್ನಾಥ್, ಕುಂದಾಪುರ ನಾಗರಾಜ್, ಎಚ್.ನೀಲಕಂಠಪ್ಪ, ಎಸ್.ಶ್ರೀದೇವಿ, ನೀಲಾವತಿ, ಚಾಮುಂಡಿ, ಸುಗುಣ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.