ಸೋಮೇಶ್ವರ ಜಾತ್ರೆ ಇಂದು
ಕಂಪ್ಲಿ: ಇಲ್ಲಿನ ಐತಿಹಾಸಿಕ ಶ್ರೀ ಸೋಮೇಶ್ವರ ಸ್ವಾಮಿ ರಥೋತ್ಸವ ಮೇ 6ರ ಸಂಜೆ 5ರಿಂದ 6 ಗಂಟೆವರೆಗೆ ಶ್ರದ್ಧಾ ಭಕ್ತಿಯಿಂದ ನೆರವೇರಲಿದೆ ಎಂದು ಕಂಪ್ಲಿ ಶ್ರೀಸೋಮೇಶ್ವರ ಸ್ವಾಮಿ ದೇವಸ್ಥಾನ ಧರ್ಮಕರ್ತರು, ಅಧ್ಯಕ್ಷರು, ಕಾರ್ಯದರ್ಶಿಗಳು, ಸಮಸ್ತ ಸದ್ಭಕ್ತ ಮಂಡಳಿಯವರು ತಿಳಿಸಿದ್ದಾರೆ. ಮೇ 7ರ ಬೆಳಿಗ್ಗೆ 10-30 ಗಂಟೆಗೆ ಶ್ರೀಸೋಮೇಶ್ವರ ಸ್ವಾಮಿಯ ಹಂದರದ ವಿಶೇಷ ಪೂಜೆ ಜರುಗುತ್ತದೆ. ಮೇ 8ರ ಸಂಜೆ 5 ಗಂಟೆಯಿಂದ 6 ಗಂಟೆವರೆಗೆ ಶ್ರೀಸೋಮೇಶ್ವರ ಸ್ವಾಮಿಯ ಕಂಕಣ ವಿಸರ್ಜನೆ ಮಾಡಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರ್ಗಮನ ಕಿಟಕಿ ಅಳವಡಿಸಿ
ಹೊಸಪೇಟೆ: ಒಪ್ಪಂದ ವಾಹನಗಳು, ಪ್ರವಾಸಿ ವಾಹನಗಳು, ಸೇವಾ ವಾಹನಗಳು, ಶಾಲಾ ವಾಹನಗಳು ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಾಹನಗಳು ಹಾಗೂ ಖಾಸಗಿ ವಾಹನಗಳು ಕಡ್ಡಾಯವಾಗಿ ತುರ್ತು ನಿರ್ಗಮನ ಕಿಟಕಿ ಅಳವಡಿಸಿಕೊಳ್ಳಬೇಕು. ಇಲ್ಲವಾದರೆ ವಾಹನ ಅರ್ಹತಾ ಪತ್ರ ರದ್ದುಪಡಿಸಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧಿಕಾರಿ ತಿಳಿಸಿದ್ದಾರೆ. ತುರ್ತು ನಿರ್ಗಮನ ಕಿಟಕಿ ಅಳವಡಿಸಿಕೊಳ್ಳದಿರುವುದು ಕಂಡು ಬಂದರೆ ಅಂತಹ ವಾಹನವನ್ನು ಸೀಜ್ ಮಾಡಿ ಅರ್ಹತಾ ಪತ್ರ ರದ್ದುಪಡಿಸುವುದಾಗಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ರಾಕೇಶ್ಗೆ ಡಾಕ್ಟರೇಟ್
ಬಳ್ಳಾರಿ: ಸ್ಥಳೀಯ ವಿಎಸ್ಕೆ ವಿವಿ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಪಟ್ಟಣ ರಾಕೇಶ್ ಅವರಿಗೆ ಗುಲ್ಬರ್ಗಾ ವಿವಿ ಪಿಎಚ್ಡಿ ಪದವಿ ನೀಡಿದೆ. ತಾಯಿ ಮತ್ತು ಮಗುವಿನ ಆರೋಗ್ಯ- ಉತ್ತರ ಕರ್ನಾಟಕದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಸಮಾಜ ಕಾರ್ಯದ ದೃಷ್ಟಿಕೋನ ಎಂಬ ವಿಷಯ ಕುರಿತು ಮಂಡಿಸಿದ ಪ್ರಬಂಧಕ್ಕೆ ಪಿಎಚ್ಡಿ ಪದವಿ ಲಭಿಸಿದೆ ಎಂದು ಪ್ರಕಟಣೆ ತಿಳಿಸಿದೆ.
ಹೆಚ್ಚುವರಿ ಶಿಕ್ಷಕರ ತಾತ್ಕಾಲಿಕ ಪಟ್ಟಿ ಪ್ರಕಟ
ಬಳ್ಳಾರಿ: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ಹೆಚ್ಚುವರಿ ಶಿಕ್ಷಕರ ಸ್ಥಳಾಂತರ ಪ್ರಕ್ರಿಯೆ ಪೂರ್ಣಗೊಳಿಸಬೇಕಾಗಿರುವದರಿಂದ ಹೆಚ್ಚುವರಿ ಶಿಕ್ಷಕರ ತಾತ್ಕಾಲಿಕ ಪಟ್ಟಿಯನ್ನು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ವೀರಣ್ಣ ಜತ್ತಿ ತಿಳಿಸಿದ್ದಾರೆ. ಈ ತಾತ್ಕಾಲಿಕ ಪಟ್ಟಿ ಕುರಿತು ಮೇ 6ರ ಒಳಗೆ ಆಕ್ಷೇಪಣೆ ಸಲ್ಲಿಸಬಹುದಾಗಿದ್ದು, ಮೇ 7ರಂದು ಅಂತಿಮ ಹೆಚ್ಚುವರಿ ಪಟ್ಟಿ ಪ್ರಕಟಿಸಲಾಗುವುದು. ಹೆಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್ ಅನ್ನು ಮೇ 13ರಂದು ಬೆಳಿಗ್ಗೆ 11 ಗಂಟೆಗೆ ಉಪನಿರ್ದೇಶಕರ ಕಚೇರಿಯಲ್ಲಿ ನಡೆಸಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

