ಸ್ವಾವಲಂಬಿ ಜೀವನ ನಡೆಸಿ: ಸಲಹೆ
ಕನ್ನಡಪ್ರಭ ವಾರ್ತೆ, ಬಳ್ಳಾರಿ, ಮೇ 7
ತರಬೇತಿಯನ್ನು ಸದುಪಯೋಗ ಪಡಿಸಿಕೊಂಡು ಸ್ವಯಂ ಉದ್ಯೋಗ ಹೊಂದಿ ಸ್ವಾವಲಂಬಿ ಜೀವನ ನಡೆಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟೆಪ್ಪ ತಿಳಿಸಿದರು.
ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು 30 ದಿನಗಳ ಕಾಲ ಆಯೋಜಿಸಿದ್ದ ಉಚಿತ ಕಂಪ್ಯೂಟರ್ ಡಾಟಾ ಎಂಟ್ರಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಅತಿಥಿಯಾಗಿ ಅವರು ಬುಧವಾರ ಮಾತನಾಡಿದರು.
ಸ್ವ-ಉದ್ಯೋಗ ಕೈಗೊಂಡು ಅಭಿವೃದ್ಧಿ ಹೊಂದಲು ಅನೇಕ ಸ್ವ ಉದ್ಯೋಗ ತರಬೇತಿ ಯೋಜನೆಗಳನ್ನು ಸರ್ಕಾರ ಹಮ್ಮಿಕೊಳ್ಳುತ್ತಿದೆ. ಅಂತಹ ಯೋಜನೆಗಳ ಬಗ್ಗೆ ಮಾಹಿತಿ ಪಡೆದು ಅವುಗಳನ್ನು ಸದ್ವಿನಿಯೋಗ ಪಡಿಸಿಕೊಳ್ಳಬೇಕು ಜತೆಗೆ ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ಹಲವಾರು ಸ್ವ ಉದ್ಯೋಗ ತರಬೇತಿ ಶಿಬಿರಗಳ ಮೂಲಕ ಎಲ್ಲರು ಉದ್ಯೋಗ ಹಾಗೂ ಕೌಶಲ್ಯಾಭಿವೃದ್ಧಿ ಹೊಂದಲು ಶ್ರಮಿಸುತ್ತಿದೆ. ಶಿಬಿರಾರ್ಥಿಗಳು ತರಬೇತಿಯಲ್ಲಿ ಕಲಿತಂತಹ ಕೌಶಲ್ಯಗಳನ್ನು ಉತ್ತಮವವಾಗಿ ಬಳಸಿಕೊಂಡು ಸ್ವಯಂ ಉದ್ಯೋಗ ಹೊಂದಬೇಕು ಎಂದು ತಿಳಿಸಿದರು.
ಶಿಬಿರಾರ್ಥಿಗಳು ತಮ್ಮಲ್ಲಿನ ಯುವಶಕ್ತಿ ಮತ್ತು ಸಾಮರ್ಥ್ಯವನ್ನು ಶ್ರದ್ಧೆ ಹಾಗೂ ಅರ್ಪಣಾ ಮನೋಭಾವದಿಂದ ತಮ್ಮ ದುಡಿಮೆಯಲ್ಲಿ ತೊಡಗಿಸಿಕೊಳ್ಳಬೇಕು. ಇತ್ತೀಚಿನ ದಿನಗಳಲ್ಲಿ ಶಿಕ್ಷಣ ವಿದ್ಯಾರ್ಹತೆಯ ಜತೆಗೆ ಕಂಪ್ಯೂಟರ್ ಸಾಕ್ಷರತೆ ಮತ್ತು ಕೌಶಲ್ಯತೆಯ ಮಹತ್ವ ಹೆಚ್ಚು, ಆದ್ದರಿಂದ ಒಂದಕ್ಕಿಂತ ಹೆಚ್ಚಿನ ಕೆಲಸಗಳಲ್ಲಿ ಕೌಶಲ್ಯತೆಯನ್ನು ಅಭಿವೃದ್ಧಿಪಡಿಸಿಕೊಳ್ಳುವುದು ಅವಶ್ಯ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿವೃತ್ತ ನಿರ್ದೇಶಕ ರಾಮಾಂಜನೇಯುಲು, ತರಬೇತಿದಾರರಾದ ಕು. ನಾಗರತ್ನ ಮಾತನಾಡಿದರು.
ಶಿಬಿರಾರ್ಥಿಗಳಾದ ನಫೀಜಾ ಬೇಗಂ, ಶ್ರುತಿ, ಶಿವರಾಜ್ ತರಬೇತಿಯ ಅನಿಸಿಕೆಯನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಸಿಂಡ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ನಿರ್ದೇಶಕ ಎಫ್.ಬಿ. ಬಾಳಿಕಾಯಿ ಹಾಗೂ ಇತರರು ಇದ್ದರು. ್ದನ್ ನಿರೂಪಿಸಿದರು. ರುದ್ರೇಶ ಸ್ವಾಗತಿಸಿದರು. ವಿಶ್ವನಾಥ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

