ಬಳ್ಳಾರಿ

ರಾಂಪುರ: ನೂತನ ಮೂರ್ತಿ ಪ್ರತಿಷ್ಠಾಪನೆ

Published On :

ಕೊಟ್ಟೂರು:  ಸಮೀಪದ ರಾಂಪುರ ಗ್ರಾಮದಲ್ಲಿ ನಿರ್ಮಿಸಲಾಗಿರುವ ಆಂಜನೇಯ ಸ್ವಾಮಿ ನೂತನ ದೇವಸ್ಥಾನದ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ ಮತ್ತು ಉಜ್ಜಯಿನಿ 1008 ಜಗದ್ಗುರು ಸಿದ್ಧಲಿಂಗರಾಜ ದೇಶೀಕೇಂದ್ರ ಶಿವಾಚಾರ್ಯ ಶ್ರೀಗಳ ಅಡ್ಡಪಲ್ಲಕ್ಕಿ ಮಹೋತ್ಸವ ಮೇ 8ರಂದುನಡೆಯಲಿದೆ.
ಕೊಟ್ಟೂರು ಕಟ್ಟೇಮನಿ ಹಿರೇಮಠಾಧ್ಯಕ್ಷ ಶ್ರೀಯೋಗಿರಾಜೇಂದ್ರ ಶಿವಾಚಾರ್ಯಶ್ರೀ ಚಾನುಕೋಟಿಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಶಿವಾಚಾರ್ಯ ಶ್ರೀಗಳ ನೇತೃತ್ವದಲ್ಲಿ ನಡೆಯುವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಲೋಕಸಭಾ ಸದಸ್ಯೆ ಜೆ. ಶಾಂತಾ, ಹಗರಿಬೊಮ್ಮನಹಳ್ಳಿ ಶಾಸಕ ಎಸ್. ಭೀಮಾ ನಾಯ್ಕ, ಮಾಜಿ ಶಾಸಕ ಕೆ. ನೇಮಿರಾಜ್ ನಾಯ್ಕ, ಜಿಪಂ ಸದಸ್ಯ ಪಿ. ಚನ್ನಬಸವನಗೌಡ, ತಾಪಂ ಸದಸ್ಯೆ ಕೊಳ್ಳಿ ಹೊನ್ನೂರಮ್ಮ, ಗ್ರಾಪಂ ಅಧ್ಯಕ್ಷೆ ಸುಲೋಚನಾ, ಎಂ.ಎಂ.ಜೆ. ಸ್ವರೂಪಾನಂದ, ರೂಪಾ ಉದಯಸಿಂಗ್ ಲಾಡ್ ಎಂ.ಎಂ.ಜೆ. ಹರ್ಷವರ್ಧನ್, ಭಾಗೀರಥಿ ಮರುಳಸಿದ್ಧನಗೌಡ, ಸಾವಜ್ಜಿ ರಾಜೇಂದ್ರ ಪ್ರಸಾದ್, ನಾಗರಕಟ್ಟೆ ಕೊಟ್ರೇಶಪ್ಪ, ಪಿ.ಎಚ್.ದೊಡ್ಡರಾಮಣ್ಣ ಪಾಲ್ಗೊಳ್ಳಲಿದ್ದಾರೆ. ನಿವೃತ್ತ ಶಿಕ್ಷಕ ಎನ್. ಅಡಿವೆಪ್ಪ ಅಧ್ಯಕ್ಷತೆ ವಹಿಸುತ್ತಾರೆ ಎಂದು ಉತ್ಸವ ಸಮಿತಿ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.