ಸೇತುವೆ ದುರಸ್ತಿ, ಬಸ್ ಓಡಾಟ ಸ್ಥಗಿತ: ಆತಂಕದಲ್ಲಿ ಜನತೆ
ಕನ್ನಡಪ್ರಭ ವಾರ್ತೆ, ಯಲಬುರ್ಗಾ, ಮೇ 12
ತಾಲೂಕಿನ ಕಲ್ಲೂರು ಗ್ರಾಮಕ್ಕೆ ಹೋಗುವ ಮುಖ್ಯರಸ್ತೆಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆ ಕಾಮಗಾರಿ ಮುಗಿದು ವರ್ಷ ಕಳೆದಿಲ್ಲ ಈಗಾಗಲೇ ಬಹುಭಾಗ ಕುಸಿದು ದೊಡ್ಡ ಕಂದಕ ನಿರ್ಮಾಣವಾಗಿದೆ.
ಏಳೆಂಟು ದಿನಗಳ ಹಿಂದೆ ಸುರಿದ ಮಳೆಯ ನೀರಿಗೆ ಮತ್ತಷ್ಟು ಸೇತುವೆ ಕೊಚ್ಚಿಹೋಗಿದ್ದು, ಗ್ರಾಮಕ್ಕೆ ಬಸ್ ಓಡಾಟ ಸಹ ಸ್ಥಗಿತಗೊಂಡಿದ್ದರಿಂದ ಗ್ರಾಮಸ್ಥರು ಪರದಾಡುವಂತಾಗಿದೆ. ವಾಹನಗಳ ಸಂಚಾರ ದಿನೇ ದಿನೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಮಧ್ಯೆದಲ್ಲಿರುವ ಹಳೆಯ ಸೇತುವೆಗಳ ಕುಸಿತದ ಪ್ರಮಾಣ ಹೆಚ್ಚಾಗಿದೆ. ಈ ಸೇತುವೆ ಈ ಹಿಂದೆ ದೊಡ್ಡ ಪ್ರಮಾಣದಲ್ಲಿ ಕುಸಿದಿತ್ತು. ಆಗ ಸ್ಥಳೀಯ ಗ್ರಾಮದ ಐತಿಹಾಸಿಕ ಶ್ರೀ ಕಲ್ಲಿನಾಥೇಶ್ವರ ಕಾರ್ತಿಕೋತ್ಸವ ಸಮೀಪಿಸುತ್ತಿದ್ದಂತೆ ಲೋಕೋಪಯೋಗಿ ಇಲಾಖೆ ಈ ಸೇತುವೆ ಕಾಮಗಾರಿಯನ್ನು ತರಾತುರಿಯಲ್ಲಿ ಲಕ್ಷಾಂತರ ರುಪಾಯಿ ವೆಚ್ಚದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿತ್ತು. ನವೆಂಬರ್ನಲ್ಲಿ ನಿರ್ಮಿಸಿದ ಸೇತುವೆ ಇದೀಗ ಮತ್ತೆ ಕುಸಿದಿರುವುದು ಕಳಪೆ ಕಾಮಗಾರಿಯೇ ಇದಕ್ಕೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಕ್ಷೇತ್ರದ ಜಿಪಂ ಸದಸ್ಯ ಈರಪ್ಪ ಕುಡಗುಂಟಿ ಅವರಾಗಲಿ ಅಥವಾ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಾಗಲಿ ಶೀಘ್ರದಲ್ಲೇ ಇದರ ದುರಸ್ತಿ ಕಾರ್ಯ ಕೈಗೊಳ್ಳುವ ಮೂಲಕ ಪ್ರಯಾಣಿಕರ ಹಾಗೂ ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸಿಕೊಡುವಲ್ಲಿ ಮುಂದಾಗಬೇಕು ಎಂಬುದು ಕಲ್ಲೂರು ಹಾಗೂ ಬಳಗೇರಿ ಗ್ರಾಮಸ್ಥರ ಒತ್ತಾಸೆ.
ಗುತ್ತಿಗೆದಾರ ಬೇಕಾಬಿಟ್ಟಿ ಕಾಮಗಾರಿ ಮಾಡಿ ಸಾಕಷ್ಟು ಹಣ ನುಂಗಿದ್ದಾರೆ. ಕಳಪೆ ಕಾಮಗಾರಿ ಬಗ್ಗೆ ತನಿಖೆ ಮಾಡಬೇಕು. ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮದ ಮುಖಂಡರಾದ ವೀರಯ್ಯ ಸಂಗನಾಳಮಠ, ರಾಮಣ್ಣ ಬಂಗಾಳಿಗಿಡ, ಯಲ್ಲಪ್ಪ ಅಗಸಿಮನಿ, ಹನುಮಪ್ಪ ತಳವಾರ, ಬಸವರಾಜ ಮ್ಯಾಗೇರಿ, ಶರಣಯ್ಯ ಹಿರೇಮಠ, ಬಸಪ್ಪ ಹರಿಜನ, ಕಲ್ಲಪ್ಪ ಕರಮುಡಿ ಮತ್ತಿತರರು ಆಗ್ರಹಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

