ರೈತರ ನಿರ್ಲಕ್ಷ್ಯ ಕಾಂಗ್ರೆಸ್ಗೆ ಮುಳುವಾಯ್ತು
ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರವು ನಿರೀಕ್ಷಿತ ಅಭಿವೃದ್ಧಿ ಸಾಧಿಸದಿರುವುದು ಹಾಗೂ ರೈತರ ಬಗೆಗಿನ ನಿರ್ಲಕ್ಷ್ಯ ಧೋರಣೆಯಿಂದಾಗಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಕಾರಣವಾಗಿದೆ ಎಂದು ಬಿ. ಶ್ರೀರಾಮುಲು ಹೇಳಿದರು.
ಮತಎಣಿಕೆ ಕೇಂದ್ರದಲ್ಲಿ ಗೆಲವು ಸಾಧಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಜನರ ನಿರೀಕ್ಷೆ ಹುಸಿಗೊಳಿಸಿದೆ. ಇದರಿಂದಾಗಿ ರಾಜ್ಯದ ಜನ ಗುಜರಾತಿನಂತೆ ಕರ್ನಾಟಕವೂ ಅಭಿವದ್ಧಿಯಾಗಬೇಕು ಎಂಬ ಕಾಳಜಿಯಿಂದ ಬಿಜೆಪಿಗೆ ಮತಹಾಕಿದ್ದಾರೆ. ಮೋದಿ ಜತೆ ಕೆಲಸ ಮಾಡುವುದು ನನ್ನ ಸೌಭಾಗ್ಯವಾಗಿದೆ ಎಂದರು.
ಇದು ನನ್ನ ಗೆಲವುಲ್ಲ, ಸಮಸ್ತ ಮತದಾರರ ಗೆಲವು. ಜಿಲ್ಲೆಯ ಜನ ಗೆಲವು. ಇಂದು ನರೇಂದ್ರ ಮೋದಿ ಗೆಲುವಾಗಿದೆ. ನರೇಂದ್ರ ಮೋದಿ ಒಬ್ಬ ದೂರದೃಷ್ಟಿ ಇರುವ ದೇಶಭಕ್ತ. ಅವರ ನಾಯಕತ್ವದಲ್ಲಿ ದೇಶ ಸುವರ್ಣ ಅಧ್ಯಾಯ ಬರೆಯಲಿದೆ ಎಂದರು.
ಭ್ರಷ್ಟಾಚಾರ ರಹಿತ ಪಾರದರ್ಶಕ ಆಡಳಿತ ನೀಡಲು ಬಿಜೆಪಿ ಬದ್ಧವಾಗಿದೆ, ಬಿಜೆಪಿ ಪ್ರಚಂಡ ಗೆಲವು ಯುಪಿಎ ಸರ್ಕಾರದ 10 ವರ್ಷಗಳ ಬ್ರಹ್ಮಾಂಡ ಭ್ರಷ್ಚಾಚಾರದ ವಿರುದ್ಧ ಮಾತ್ರವಲ್ಲ, ಕರ್ನಾಟಕ ಸರ್ಕಾರದ 1 ವರ್ಷದ ಆಡಳಿತ ವಿರುದ್ಧ ಜನತೆ ನೀಡಿದ ತೀರ್ಪಾಗಿದೆ. ಮುಂಬರುವ ವಿಧಾನ ಪರಿಷತ್ ಚುನಾವಣೆಗಳಲ್ಲಿ ಬಿಜೆಪಿ ಗೆಲವು ಸಾಧಿಸಲಿದೆ, 2018ರಲ್ಲಿ ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

