ಬಳ್ಳಾರಿ

ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿಸಿ

Published On :

ಹೊಸಪೇಟೆ: ಮಕ್ಕಳ ಬಾಲ್ಯ ಕಸಿದುಕೊಳ್ಳದೇ ಅವರನ್ನು ಉತ್ತಮ ಪ್ರಜೆಗಳನ್ನಾಗಿಸುವ ಹೊಣೆಗಾರಿಕೆ ಪ್ರತಿಯೊಬ್ಬರ ಮೇಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಮೇಲ್ವಿಚಾರಕಿ ಸುನೀತಾ ಅನ್ವೇಕರ್ ಹೇಳಿದರು.
ನಗರದಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಚೈಲ್ಡ್ ಲೈನ್ ಇಂಡಿಯಾ ಫೌಂಡೇಷನ್, ಚೈಲ್ಡ್ಲೈನ್ ಸಬ್ ಸೆಂಟರ್ ಡಾನ್ ಬಾಸ್ಕೋ ಸಂಸ್ಥೆ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಕ್ಕಳ ಸಹಾಯವಾಣಿ ದಿನಾಚರಣೆ ರ್ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಪ್ರತಿಯೊಬ್ಬ ಮಕ್ಕಳನ್ನು ಸಾಕ್ಷರನ್ನಾಗಿ ಮಾಡಿ, ಉತ್ತಮ ಮಾರ್ಗದರ್ಶನ ನೀಡಬೇಕು. 18 ವರ್ಷದೊಳಗಿನ ಮಕ್ಕಳು ಎಲ್ಲಿಯಾದರೂ ಕೆಲಸ ಮಾಡುತ್ತಿದ್ದರೆ ಅಥವಾ ಭೀಕ್ಷುಕರಾಗಿದ್ದರೆ, ಬಾಲ್ಯ ವಿವಾಹ ಕಂಡು ಬಂದರೆ 1098 ಉಚಿತ ಕರೆ ಮಾಡಿ, ಮಕ್ಕಳ ಹಕ್ಕುಗಳನ್ನು ರಕ್ಷಿಸಬೇಕು ಎಂದು ಅವರು ಹೇಳಿದರು.
ಡಾನ್ಬೋಸ್ಕ್ ಸಂಸ್ಥೆ ನಿರ್ದೇಶಕ ಫಾದರ್ ಲಾರೆನ್ಸ್ ಮಾತನಾಡಿ, ಮಕ್ಕಳ ಹಕ್ಕುಗಳ ಸಂರಕ್ಷಣೆಗೆ ಚೈಲ್ಡ್ಲೈನ್ ಕೇಂದ್ರ ಸ್ಥಾಪಿಸಿದ್ದು, ಇಲ್ಲಿ ಮಕ್ಕಳಿಗೆ ಆಶ್ರಯ ನೀಡಿ ಅವರ ಜತೆ ಆಪ್ತ ಸಮಾಲೋಚನೆ ನಡೆಸಿ, ಅವರ ವಿದ್ಯಾಭ್ಯಾಸಕ್ಕೆ ನೆರವು ನೀಡಲಾಗುವುದು ಎಂದರು.
ಕಾರ್ಮಿಕರ ಅಧಿಕಾರಿ ಶೇಖರ ಗೌಡ ಮಾತನಾಡಿ, ಬಾಲಕಾರ್ಮಿಕರ ಪದ್ಧತಿ ಕಾನೂನು ಬಾಹೀರವಾಗಿದ್ದು, ಬಾಲ ಕಾರ್ಮಿಕರನ್ನು ದುಡಿಸಿಕೊಳ್ಳುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮಕ್ಕಳ ಹಕ್ಕುಗಳ ರಕ್ಷಣೆಗೆ ಎಲ್ಲರೂ ಜಾಗೃತರಾಗಬೇಕಾದ ಅಗತ್ಯವಿದೆ ಎಂದರು.
ಮಕ್ಕಳ ಹಕ್ಕುಗಳ ಸಂಯೋಜಕ ಚಿದಾನಂದ, ಫಾದರ್ ಸಿಜು, ಜಿಲ್ಲಾ ಮಕ್ಕಳ ರಕ್ಷಣಾ ಅಧಿಕಾರಿ ಚನ್ನಬಸಪ್ಪ ಪಾಟೀಲ್ ಇತರರು ಸಭೆಯಲ್ಲಿ ಭಾಗವಹಿಸಿದ್ದರು. ನಂತರ ನಗರಸಭೆ ಕಲಾಮಂದಿರದಿಂದ ಟೌನ್ ರೀಡಿಂಗ್ ರೂಮ್ ವರೆಗೆ ಮೆರವಣಿಗೆ ನಡೆಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.