ಉದ್ಯೋಗ ಖಾತ್ರಿಗಾಗಿ ಪ್ರತಿಭಟನೆ
ಬಳ್ಳಾರಿ: ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೆಲಸ ನೀಡಲು ಆಗ್ರಹಿಸಿ, ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘ (ಎಐಎಡಬ್ಲ್ಯೂಯು) ದ ಅಮರಾಪುರ ಗ್ರಾಮ ಘಟಕದಿಂದ ಮೇ 22ರಂದು ಬಳ್ಳಾರಿಯಲ್ಲಿ ಪ್ರತಿಭಟನೆಯ ಹಮ್ಮಿಕೊಳ್ಳಲಾಗಿದೆ.
ತಾಲೂಕಿನ ಅಮರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಂದು ಸಾವಿರಕ್ಕು ಹೆಚ್ಚು ಕೂಲಿಕಾರರಿದ್ದು, ಅವರಿಗೆ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೂಲಿ ಕೆಲಸ ನೀಡದೇ ವಂಚಿಸಲಾಗುತ್ತಿದೆ. ಕೂಲಿ ಕೆಲಸವಿಲ್ಲದೇ ಜೀವನ ನಡೆಸುವುದು ಕಷ್ಟಕರವಾಗಿದೆ ಎಂದು ಸಂಘ ತಿಳಿಸಿದೆ. ಕೂಲಿ ಕೆಲಸ ಕೇಳಲು ತೆರಳಿದರೆ ಅಧಿಕಾರಿಗಳಿಂದ ನಿರ್ಲಕ್ಷ್ಯದ ಉತ್ತರ ಕೇಳಬೇಕಾಗಿದೆ. ದೇಶದಲ್ಲಿನ ಎಲ್ಲ ಗ್ರಾಮಗಳಲ್ಲಿನ ಕೂಲಿಕಾರರಿಗೆ ವರ್ಷದಲ್ಲಿ ನೂರು ದಿನಗಳ ಗ್ಯಾರೆಂಟಿ ಕೆಲಸ ನೀಡಬೇಕೆಂಬು ಮಹತ್ವದ ಕಾಯಿದೆಯನ್ನು ಜಾರಿಗೊಳಿಸುವಲ್ಲಿ ಪಂಚಾಯಿತಿಗಳು ಅಲಕ್ಷ್ಯತನ ತೋರುತ್ತಿರುವುದು ಖಂಡನೀಯ ಎಂದು ಸಂಘವು ತಿಳಿಸಿದೆ.
ಈ ನಿಟ್ಟಿನಲ್ಲಿ ಕೂಲಿಕಾರರಿಗೆ ತಕ್ಷಣವೇ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಉದ್ಯೋಗ (ಕೆಲಸ) ನೀಡಬೇಕು. ಉದ್ಯೋಗಕ್ಕಾಗಿ ಈಗಾಗಲೇ ಅರ್ಜಿ ನಮೂನೆ-6 ಅನ್ನು ಗ್ರಾಪಂ ಗೆ ಸಲ್ಲಿಸಿ, 21 ದಿನಗಳು ಕಳೆದರೂ ಇನ್ನು ಉದ್ಯೋಗ ನೀಡಿಲ್ಲವಾದ್ದರಿಂದ ಅರ್ಜಿ ಸಲ್ಲಿಸಿದ ಎಲ್ಲರಿಗೂ ನಿರುದ್ಯೋಗ ಭತ್ಯೆ ನೀಡಬೇಕು ಎಂದು ಒತ್ತಾಯಿಸಿ, ಮೇ 22ರಂದು ಬಳ್ಳಾರಿ ತಾಪಂ ಮುಂಭಾಗ ಕೂಲಿಕಾರರ ಬೃಹತ್ ಧರಣಿ ನಡೆಯಲಿದೆ ಎಂದು ಪ್ರಾಂತ ಕೃಷಿ ಕೂಲಿಕಾರರ ಸಂಘದ ಅಮರಾಪುರ ಘಟಕದ ಮುಖಂಡರಾದ ಉರುಕುಂದಪ್ಪ, ಸುಂಕಪ್ಪ, ಎನ್. ಕುಮಾರ, ಮೋಹನ್, ಸಣ್ಣರುದ್ರಪ್ಪ, ಬಸವರಾಜ್, ರಾಮಾಂಜಿನಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

