ಬಳ್ಳಾರಿ

ತೆಲುಗು ನಾಟಕ ಪ್ರದರ್ಶನ

Published On :

ಬಳ್ಳಾರಿ: ಸ್ಥಳೀಯ ರಾಘವ ಮೆಮೋರಿಯಲ್ ಅಸೋಸಿಯೇಷನ್ ಮೇ 22ರಂದು ಗುರುವಾರ ಸಂಜೆ 6.30ಕ್ಕೆ ದಿ. ಕಾಕರ್ಲತೋಟ ಕನುಗೋಲು ತಿಮ್ಮಪ್ಪನವರ 14ನೇ ವರ್ಧಂತಿ ಕಾರ್ಯಕ್ರಮವನ್ನು ನಗರದ ರಾಘವ ಕಲಾಮಂದಿರದಲ್ಲಿ ಏರ್ಪಡಿಸಿದೆ.
ಮುಖ್ಯ ಅತಿಥಿಯಾಗಿ ಬಳ್ಳಾರಿಯ ಸಹಾಯಕ ಆಯುಕ್ತ ಅನಿರುದ್ಧ್ ಶ್ರವಣ್ ಪಾಲ್ಗೊಳ್ಳಲಿದ್ದಾರೆ. ಹೈದರಾಬಾದ್ ಕಳಾ ವರ್ಷಿಣಿ ಅವರಿಂದ ಜೆಟ್ಟಿ ಹರಿಬಾಬು ನಿರ್ದೇಶನದ ಮನಿಷಿ ಮಂಚೋಡೇ ಎಂಬ ತೆಲುಗು ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಅಸೋಸಿಯೇಷನ್ ಪ್ರಕಟಣೆಯಲ್ಲಿ ತಿಳಿಸಿದೆ.
ಇಂದಿನಿಂದ ಪರೀಕ್ಷೆ:        ನಿಷೇಧಾಜ್ಞೆ ಜಾರಿ
ಬಳ್ಳಾರಿ:  ಜಿಲ್ಲೆಯಲ್ಲಿ ಮೇ 21ರಿಂದ 28ರ ವರೆಗೆ ನಡೆಯಲಿರುವ ಅಖಿಲ ಭಾರತ ವೃತ್ತಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಆದೇಶ ಹೊರಡಿಸಿದ್ದಾರೆ.
 ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 35ರನ್ವಯ ಪರೀಕ್ಷೆಗಳನ್ನು ಸುವ್ಯವಸ್ಥಿತ ನಡೆಸುವ ದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ. ನಗರದ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರದ ಸುತ್ತಮುತ್ತಲಿನ ಪ್ರದೇಶದಲ್ಲಿರುವ ಎಲ್ಲ ಝೆರಾಕ್ಸ್ ಅಂಗಡಿ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚಲು ಆದೇಶಿಸಲಾಗಿದೆ.
 ನಿಷೇಧಿತ ಪ್ರದೇಶದಲ್ಲಿ ಯಾವುದೇ ವ್ಯಕ್ತಿ ಶಸ್ತ್ರ, ಬಡಿಗೆ, ಬರ್ಚಿ, ಗದೆ, ಬಂದೂಕು, ಚೂರಿ ಕೋಲು, ಲಾಠಿ ಅಥವಾ ಶರೀರಕ್ಕೆ ಗಾಯ ಮಾಡುವಂಥ ಯಾವುದೇ ವಸ್ತು, ದಾಹಕ (ನಾಶಕಾರಿ) ಅಥವಾ ಸ್ಫೋಟಕ ವಸ್ತು ಒಯ್ಯುವುದನ್ನು ನಿರ್ಬಂಧಿಸಲಾಗಿದೆ. ಬಹಿರಂಗವಾಗಿ ಘೋಷಣೆ ಮಾಡುವುದು, ಹಾಡು ಹಾಡುವುದು, ವಾದ್ಯ ಬಾರಿಸುವುದು, ಸನ್ನೆ ಮಾಡುವುದು, ವ್ಯಾಖ್ಯಾನ ಕೊಡುವುದು, ಗುಂಪಾಗಿ ತಿರುಗಾಡುವುದು, ಕಲ್ಲು ಎಸೆಯುವುದು ಮತ್ತಿತರ ಚಟುವಟಿಕೆಪ್ರತಿಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.