ಹೈ-ಕಕ್ಕೆ ನೇರ ಸಂಪರ್ಕ ಸೇತುವೆ
ಕನ್ನಡಪ್ರಭ ವಾರ್ತೆ, ಹಗರಿಬೊಮ್ಮನಹಳ್ಳಿ, ಮೇ 27
ಹಗರಿಬೊಮ್ಮನಹಳ್ಳಿ ತಾಲೂಕಿನ ಹಗರಿಕ್ಯಾದಿಗಿಹಳ್ಳಿ-ಚಿಲುಗೋಡು ಗ್ರಾಮಗಳ ಮಧ್ಯೆ ತುಂಗಭದ್ರಾ ನದಿಗೆ ಅಡ್ಡವಾಗಿ ಸೇತುವೆ ನಿರ್ಮಾಣದಿಂದ ಹೈದರಾಬಾದ್ ಕರ್ನಾಟಕ, ಮುಂಬೈ-ಕರ್ನಾಟಕದ ಪ್ರದೇಶದೊಂದಿಗೆ ನೇರ ಸಂಪರ್ಕ ಹೊಂದಲಿದೆ ಎಂದು ಶಾಸಕ ಎಸ್. ಭೀಮಾನಾಯ್ಕ ಹೇಳಿದ್ದಾರೆ.
ಸೋಮವಾರ ಮಧ್ಯಾಹ್ನ ತಾಲೂಕಿನ ಹಗರಿಕ್ಯಾದಿಗಿಹಳ್ಳಿ ಬಳಿಯ ತುಂಗಭದ್ರಾ ನದಿ ದಂಡೆಯಲ್ಲಿ ರು. 11.80 ಕೋಟಿ ಅಂದಾಜು ವೆಚ್ಚದ ಸೇತುವೆ ನಿರ್ಮಾಣ ಕಾರ್ಯಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಸೇತುವೆ ಕಾಮಗಾರಿ ಪೂರ್ಣಗೊಂಡ ಮೇಲೆ ನದಿ ಪಾತ್ರದಲ್ಲಿರುವ ಇಪ್ಪತ್ತಾರು ಗ್ರಾಮಗಳಿಗೆ ಹೊಸಪೇಟೆ, ಬಳ್ಳಾರಿ, ಗಂಗಾವತಿ, ಸಿಂಧನೂರು, ಬಿಜಾಪುರ, ಬಾಗಲಕೋಟೆ ಸೇರಿದಂತೆ ಹೈದರಾಬಾದ್ ಕರ್ನಾಟಕ ಪ್ರಾಂತ್ಯದ ಪ್ರಮುಖ ನಗರಗಳಿಗೆ ನೇರ ರಸ್ತೆ ಸಂಪರ್ಕದ ಸೌಲಭ್ಯ ಸಿಗಲಿದೆ ಎಂದರು.
144 ಮೀಟರ್ ಉದ್ದ, 12 ಮೀಟರ್ ಅಗಲ ಹಾಗೂ 9.2 ಮೀಟರ್ ಎತ್ತರವುಳ್ಳ ಈ ಸೇತುವೆ ನಿರ್ಮಾಣ ಕಾಮಗಾರಿಯ ಗುತ್ತಿಗೆಯನ್ನು ಚೆನ್ನೈ ಮೂಲದ ಕಂಪನಿ ಪಡೆದುಕೊಂಡಿದ್ದು, ಕಾಮಗಾರಿ ಪೂರ್ಣಗೊಳಿಸಲು 18 ತಿಂಗಳ ಕಾಲಮಿತಿ ನಿಗದಿಪಡಿಸಲಾಗಿದೆ. ಸರ್ಕಾರ ನಿಗದಿಪಡಿಸಿದ ಕಾಲಮಿತಿ ಒಳಗೆ ವಿಳಂಬವಾಗದಂತೆ ಸೇತುವೆ ಕಾಮಗಾರಿ ಪೂರ್ಣಗೊಳಿಸುವಂತೆ ಸ್ಥಳದಲ್ಲಿದ್ದ ಗುತ್ತಿಗೆದಾರರಿಗೆ ಹಾಗೂ ಲೋಕೋಪಯೋಗಿ ಇಲಾಖೆಯ ಅಭಿಯಂತರಿಗೆ ಶಾಸಕರು ಸೂಚಿಸಿದರು.
ತಾಲೂಕಿನ ಪುಣ್ಯಕ್ಷೇತ್ರ ನಂದಿಪುರದ ಮಹೇಶ್ವರಸ್ವಾಮಿ, ಜಿಪಂ ಉಪಾಧ್ಯಕ್ಷೆ ಮಮತಾ ಸುರೇಶ, ಜಿಪಂ ಸದಸ್ಯ ರೋಗಾಣಿ ಹುಲುಗಪ್ಪ, ತಾಪಂ ಸದಸ್ಯರಾದ ಉಪ್ಪಾರ ಬಾಲಪ್ಪ, ಎಂ.ಎಂ. ಶಿವಕುಮಾರ, ಕ್ಯಾದಿಗಿಹಳ್ಳಿ ಲಕ್ಷ್ಮವ್ವ, ಎಪಿಎಂಸಿ ಸದಸ್ಯರಾದ ಹೂಗಾರ ಮಲ್ಲಣ್ಣ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಉಡೇದ್ ಗುರುಬಸವರಾಜ, ಮುಖಂಡರಾದ ಅಕ್ಕಿಕೊಟ್ರಪ್ಪ, ನರಸಿಂಹರಾಜು, ಕೃಷ್ಣಂರಾಜು, ಇಟಿಗಿ ಕಲ್ಲೇಶಪ್ಪ, ಹುಳ್ಳಿರವಿ, ಬಂಗಾರಿ ಗಾಳಿರಾಜ, ಹಂಚಿನಮನಿ ಹನುಮಂತಪ್ಪ, ವರದಾಪುರ ಕುಮಾರ, ಎಂಜೇಪ್ಪ, ಬಿ. ದೇವೇಂದ್ರ, ಕಲೋ ಇಇಇ ಎಚ್. ಯಮನೂರಪ್ಪ, ಎಇಇ ಗುರುಬಸಪ್ಪ, ಎಇ ಪ್ರಭಾಕರಶೆಟ್ಟಿ ಹಲವರು ಕಾರ್ಯಕ್ರಮದಲ್ಲಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

