ಪಶುವೈದ್ಯಕೀಯ ಮಹಾವಿದ್ಯಾಲಯ ಬೀದರನ ರಾಷ್ಟ್ರೀಯ ಸೇವಾ ಯೋಜನೆಯ ಪ್ರಸಕ್ತ ಸಾಲಿನ ವಾರ್ಷಿಕ ವಿಶೇಷ ಶಿಬಿರ ಫೆ. 3 ರಿಂದ 9ರವರೆಗೆ ಬೀದರ್ ತಾಲೂಕಿನ ಶ್ರೀಕಟನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗುತ್ತಿದೆ ಎಂದು ಕಾಲೇಜಿನ ಡಿನ್ ತಿಳಿಸಿದ್ದಾರೆ.
ಈ ಶಿಬಿರದಲ್ಲಿ ಪ್ರಥಮ ವರ್ಷದ ಬಿಎಸ್ಸಿ ವಿದ್ಯಾರ್ಥಿಗಳು ವಿವಿಧ ಜನೋಪಯೋಗಿ ಚಟುವಟಿಕೆಗಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದು, ಪ್ರತಿದಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾರ್ಥಿಗಳು ಒಂದು ವಾರದವರೆಗೆ ಗ್ರಾಮದಲ್ಲಿ ಶ್ರಮದಾನ, ಶಾಲಾ ಆವರಣದಲ್ಲಿ ಗಿಡ ನೆಡುವುದು, ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ಕುರಿತು ಉಪನ್ಯಾಸ, ಗ್ರಾಮೀಣ ಅಭಿವೃದ್ಧಿಯಲ್ಲಿ ವ್ಶೆಜ್ಞಾನಿಕ ಪಶುಸಂಗೊಪನೆಯ ಕುರಿತು ಮಾಹಿತಿ ಹಾಗೂ ಯುವಜನರಲ್ಲಿ ರಾಷ್ಟ್ರೀಯ ಭಾವೈಕ್ಯತೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದಾರೆ ಎಂದ ತಿಳಿಸಿದರು.