ಬೋತಗಿ- ಅಲ್ಲೂರ ರಸ್ತೆಗೆ 1 ಕೋಟಿ
ಹುಮನಾಬಾದ್: ಬೋತಗಿ ಗ್ರಾಮದಿಂದ ಅಲ್ಲೂರ ವರೆಗಿನ ರಸ್ತೆ ಕಾಮಗಾರಿಗೆ 1 ಕೋಟಿ ಅನುದಾನ ಮಂಜೂರಾಗಿದ್ದು, ಕಾಮಗಾರಿ ಪ್ರಗತಿಯಲ್ಲಿದೆ ಎಂದು ಶಾಸಕ ರಾಜಶೇಖರ ಪಾಟೀಲ್ ತಿಳಿಸಿದರು.
ತಾಲೂಕಿನ ಬೊತಗಿ ಗ್ರಾಮದಲ್ಲಿ ಸುವರ್ಣ ಗ್ರಾಮೋದಯ 5ನೇ ಹಂತದ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಬೊತಗಿ ಗ್ರಾಮಕ್ಕೆ ರಸ್ತೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ರಸ್ತೆ ಕಾಮಗಾರಿ ಪ್ರಾರಂಭಿಸಲಾಗಿದೆ ಇದರಿಂದ ಸುತ್ತಮುತ್ತಲಿನ ಗ್ರಾಮಗಳಿಗೂ ಅನುಕೂಲ ಎಂದರು.
ಗ್ರಾಮದಲ್ಲಿ ಕುಡಿವ ನೀರಿನ ಸಮಸ್ಯೆ ಎದುರಾಗಿದ್ದು, ಸಮಸ್ಯೆ ಇತ್ಯರ್ಥಕ್ಕೆ ಕೊಳವೆ ಬಾವಿ ತೊಡಿಸಿ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.
ಗ್ರಾಮದಲ್ಲಿನ ಬಹುತೇಕ ಬೇಡಿಕೆಗಳು ಇಡೇರಿಸಲಾಗಿದೆ. ಗ್ರಾಮದಲ್ಲಿನ ಸಮೂದಾಯಗಳ ಹಾಗೂ ಬಡಾವಣೆಗಳಲ್ಲಿನ ಸಮಸ್ಯೆಗಳು ಇತ್ಯರ್ಥ ಪಡಿಸಲಾಗಿದೆ ಎಂದರು.
ಜಿಪಂ ಸದಸ್ಯ ಮಹಾಂತಯ್ಯ ತೀರ್ಥ ಮಾತನಾಡಿ, ಗ್ರಾಮಕ್ಕೆ ಬೇಕಾಗುವ ಕುಡಿವ ನೀರು, ವಿದ್ಯುತ್, ರಸ್ತೆ ಮತ್ತಿತರ ಕಾರ್ಯಗಳು ಕೈಗೊಳ್ಳಲಾಗಿದೆ ಎಂದರು.
ತಾಪಂ ಸದಸ್ಯ ಬಾಬು ಟೈಗರ್ ಮಾತನಾಡಿ, ಗ್ರಾಮದಲ್ಲಿನ ಅಂಗನವಾಡಿ ಕಟ್ಟಡವು ಕುಸಿದಿದ್ದು, ತಾಲೂಕು ಪಂಚಾಯತ್ನಿಂದ ಅದೇ ಸ್ಥಳದಲ್ಲಿ ಮತ್ತೆ ನಿರ್ಮಿಸಲಾಗುವುದು ಎಂದರು.
ಗ್ರಾಮದ ಸುತ್ತಮುತ್ತ ಇರುವ ನೀರು ಹಾದು ಹೋಗುವ ಸಂದರ್ಭದಲ್ಲಿ ಜಮೀನುಗಳಲ್ಲಿ ಹೆಚ್ಚಿನ ಮಳೆ ಬಂದಾಗ ನೀರು ನಿಂತು ತೊಂದರೆಯಾಗುತ್ತಿದೆ. ಇದರಿಂದ ರೈತರಿಗೆ ಅನಾನುಕೂಲವಾಗುತ್ತಿದ್ದು, ಶಾಸಕರು ಸರ್ಕಾರ ಮಟ್ಟದಲ್ಲಿ ಚರ್ಚೆ ನಡೆಸಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದರು.
ಭೂಸೇನಾ ನಿಮಗದ ಅಧಿಕಾರಿ ಬಿ.ಎಸ್. ಪಾಟೀಲ್ ಮಾತನಾಡಿ, ಸುವರ್ಣ ಗ್ರಾಮೋದಯ ಯೋಜನೆಯಲ್ಲಿ ಗ್ರಾಮಕ್ಕೆ ಸಿಸಿ ರಸ್ತೆ ನಿರ್ಮಾಣಕ್ಕೆ 20 ಲಕ್ಷ, ಸಿಸಿ ಚರಂಡಿ 2.50 ಲಕ್ಷ, ತಾಜ್ಯ ವಸ್ತು ವಿಲೇವಾರಿ 30 ಸಾವಿರ, ಸೋಲಾರ ಬೀದಿ ದೀಪ ಅಳವಡಿಕೆ 47 ಸಾವಿರ, ಐಇಸಿ 35 ಸಾವಿರ ಒಟ್ಟು 23.62 ಲಕ್ಷ ಮಂಜೂರಾಗಿದೆ ಎಂದು ತಿಳಿಸಿದರು.
ಗ್ರಾಪಂ ಅಧ್ಯಕ್ಷ ರೇಣುಕಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಉಪಾಧ್ಯಕ್ಷ ರಂಗಮ್ಮ, ತಾಪಂ ಮಾಜಿ ಅಧ್ಯಕ್ಷ ಶಿವರಾಜ ಗಂಗಶಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷ ನಾರಯಣರೆಡ್ಡಿ, ಮುಖಂಡರಾದ ಹುಲೆಪ್ಪಾ, ದತ್ತುಕುಮಾರ ಚಿದ್ರಿ, ರಾಜು ಇಟಗಿ, ಕಲ್ಯಾಣರಾವ್, ಶರಣು ದನ್ನೂರ, ಹಬೀದ್ ಪಟೇಲ್, ಹಣಮಂತರೆಡ್ಡಿ, ಭಿಮಣ್ಣಾ ಶಾಖಾ, ಸುಭಾಷ ಮೇತ್ರೆ, ಶಾಮರಾವ್, ನಾಗರಾಜ, ಗುಣವಂತರಾವ್, ಶಿವರಾಜ, ಮಲ್ಲಿಕಾರ್ಜುನ ಸ್ವಾಮಿ, ಶಂಕರಾವ್ ಚಿಕ್ಕ ಪಾಟೀಲ್ ಸೇರಿದಂತೆ ಗ್ರಾಪಂ ಸದಸ್ಯರು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ರಘುನಾಥ ಸ್ವಾಗತಿಸಿ ಹಣಮಂತರೆಡ್ಡಿ ನಿರೂಪಿಸಿ ವಂದಿಸಿದರು.
ಈ ಸಂದರ್ಭದಲ್ಲಿ ತಾಲೂಕಿನ ಅಲ್ಲೂರ ಮತ್ತು ನಿಂಬೂರ ಗ್ರಾಮದಲ್ಲಿಯು ಸುವರ್ಣ ಗ್ರಾಮೋದಯ ಯೋಜನೆಗೆ ಚಾಲನೆ ನೀಡಿಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

