ಜನರ ಸಮಸ್ಯೆಗೆ ಸ್ಪಂದನೆ: ಡಾ. ಬೆಲ್ದಾಳೆ
ಬೀದರ್: ಕ್ಷೇತ್ರದ ಜನತೆಯ ಸಮಸ್ಯೆಗಳಿಗೆ ಹತ್ತಿರದಿಂದ ಸ್ಪಂದಿಸಲು ಜನರು ಮುಂಬರುವ ಚುನಾವಣೆಯಲ್ಲಿ ಆಶೀರ್ವಾದ ಮಾಡಬೇಕೆಂದು ಕೆಜೆಪಿ ಮುಖಂಡ ಹಾಗೂ ಜಿಪಂ ಸದಸ್ಯ ಡಾ. ಶೈಲೇಂದ್ರ ಬೆಲ್ದಾಳೆ ಮನವಿ ಮಾಡಿದರು.
ಇತ್ತೀಚೆಗೆ ತಾಲೂಕಿನ ಚಿಟ್ಟಾ ಗ್ರಾಮದಲ್ಲಿ ಕ್ಷೇತ್ರದ ಅಭಿವೃದ್ಧಿ ಹಾಗೂ ಜನ ಜಾಗೃತಿ ಸಮಾವೇಶ ಮತ್ತು ಕೆಜೆಪಿ ಸದಸ್ಯತ್ವ ಅಭಿಯಾನ ಉದ್ಘಾಟಿಸಿ ಮಾತನಾಡಿ, ಜಿಪಂ ಸದಸ್ಯನಾಗಿ ಚಿಟ್ಟಾ ಕ್ಷೇತ್ರದ ಜನತೆಯ ಕಷ್ಟ ಸುಖಗಳಲ್ಲಿ ಭಾಗವಹಿಸಿದ್ದೇನೆ ಮುಂದೆಯೂ ಭಾಗವಹಿಸುತ್ತೇನೆ. ಜಿಪಂ ಅನುದಾನದ ಅಡಿಯಲ್ಲಿ ಚಿಟ್ಟಾ ಗ್ರಾಮದಲ್ಲಿ ಸಮುದಾಯ ಭವನ, ಕುಡಿವ ನೀರಿಗಾಗಿ 2-3 ಕೊಳವೆ ಬಾವಿ ಕೊರೆಸಿದ್ದೇನೆ ಗ್ರಾಮಸ್ಥರ ಪ್ರತಿಯೊಂದು ಸಮಸ್ಯೆಗೆ ಸ್ಪಂದಿಸಿದ್ದೇನೆ ಎಂದರು.
ಅಭಿವೃದ್ಧಿ: ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ಸೈಕಲ್, ಭಾಗ್ಯಲಕ್ಷ್ಮಿ ಯೋಜನೆಯಡಿ ಹೆಣ್ಣು ಮಕ್ಕಳಿಗೆ 1 ಲಕ್ಷ ಬಾಂಡ್ ವಿತರಣೆ, ಸಂಧ್ಯಾ ಸುರಕ್ಷಾ, ವಿಧವಾ ವೇತನ ಹಾಗೂ ಅಂಗವಿಕಲಚೇತನರ ವೇತನ ಹೆಚ್ಚಳ ಮಾಡಿದ್ದಾರೆ. ಜಾತಿ, ಮತ ಹಾಗೂ ಬೇಧ ಮಾಡದೇ ಸರ್ವರಿಗೂ ಸಮಪಾಲು, ಸಮಬಾಳು ಎನ್ನುವ ನಿಟ್ಟಿನಲ್ಲಿ ಯಡಿಯೂರಪ್ಪ ಅಭಿವೃದ್ಧಿ ಕಾರ್ಯಗಳು ಮಾಡಿದ್ದಾರೆ ಎಂದರು.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿಗಳು ವಿಜಯದ ಪತಾಕೆ ಹಾರಿಸಲಿದ್ದಾರೆ. ಮುಂದಿನ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಭಿವೃದ್ಧಿ ಪರ ಕಾಳಜಿಯುಳ್ಳ ಯಡಿಯೂರಪ್ಪ ಕೈ ಬಲಪಡಿಸಬೇಕೆಂದು ಕೋರಿದರು.
ಕೆಜೆಪಿ ರಾಜ್ಯ ಪ್ರಮುಖ ಎನ್. ನಂಜುಂಡೇಶ, ರಾಜರೆಡ್ಡಿ, ಅಬ್ದುಲ್ ಕಡ್ಡೆವಾಲಾ, ರೇವಣಪ್ಪ ಪಾಟೀಲ್, ನಾಗಪ್ಪ ಚೌಧರಿ, ರಾಜು ಮಾಮಡಗಿ, ಸಚಿನ, ಶಿವಕುಮಾರ ಪಾಟೀಲ್, ಧನರಾಜ ಕಡ್ಯಾಳ, ದಶರಥ, ಇಂದುಮತಿ, ವೀರೂಪಾಕ್ಷ ಗಾದಗಿ, ಜಾಫಟ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

