ಪುರಸಭೆ ಚುಕ್ಕಾಣಿ ಈ ಬಾರಿ ಕೆಜೆಪಿಗೆ: ಶಾಬಾದೆ
ಹುಮನಾಬಾದ್: ಮುಂಬರುವ ಪುರಸಭೆ ಚುನಾವಣೆಯಲ್ಲಿ ಕೆಜೆಪಿ ಅಭ್ಯರ್ಥಿಗಳು ಗೆಲ್ಲುವ ಮೂಲಕ ಪುರಸಭೆಯ ಚುಕ್ಕಾಣಿ ಹಿಡಿಯಲಿದ್ದಾರೆ ಎಂದು ಪಕ್ಷದ ಜಿಲ್ಲಾ ಉಪಾಧ್ಯಕ್ಷ ರಾಜರೆಡ್ಡಿ ಶಾಬಾದೆ ತಿಳಿಸಿದರು.
ತಾಲೂಕಿನ ಚಿಟಗುಪ್ಪ ಪಟ್ಟಣದಲ್ಲಿ ಕೆಜೆಪಿ ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿ, ಪುರಸಭೆ ವ್ಯಾಪ್ತಿಯಲ್ಲಿ ಕೆಜೆಪಿ ಪ್ರಬಲವಾಗಿದ್ದು, ಕಾರ್ಯಕತಂರು ಇನ್ನುಷ್ಟು ಬಲಿಷ್ಠಗೊಂಡು ಚುನಾವಣೆ ಎದುರಿಸಬೇಕೆಂದು ತಿಳಿಸಿದರು.
ಪಕ್ಷದ ಮುಖಂಡ ಮಲ್ಲಿಕಾರ್ಜುನ ಪಾಟೀಲ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರು ಕೈಗೊಂಡ ಜನಪರ ಕಾರ್ಯಗಳ ಬಗ್ಗೆ ಜನರಿಗೆ ತಿಳಿಸುವ ಮೂಲಕ ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು. ಪುರಸಭೆಯ ಎಲ್ಲ ಕ್ಷೇತ್ರಗಳಲ್ಲಿ ಕೆಜೆಪಿ ಆಭ್ಯರ್ಥಿಗಳು ಸ್ಪರ್ಧಿಸಲಿದ್ದು, ಪ್ರಬಲ ಆಭ್ಯರ್ಥಿಯನ್ನು ಕಣಕ್ಕಿಳಿಸುತ್ತಿದ್ದೇವೆ. ಹೀಗಾಗಿ ಪುರಸಭೆಯು ಕೆಜೆಪಿ ತಕ್ಕೆಗೆ ಬರಲಿದೆ ಎಂದರು.
ಈಗಾಗಲೇ ಕೆಜೆಪಿ ಬಗ್ಗೆ ಸಾರ್ವಜನಿಕರು ವ್ಯಾಪಕ ಒಲವು ತೋರುತ್ತಿದ್ದು, ಆಯಾ ವಾರ್ಡಿನ ಕಾರ್ಯಕರ್ತರು ಪಕ್ಷ ಕಣಕ್ಕಿಳಿಸುವ ಅಭ್ಯರ್ಥಿಗಳನ್ನು ಗೆಲ್ಲಿಸಲು ಪಣತೊಡಬೇಕೆಂದರು.
ಹುಮನಾಬಾದ್ ವಿಧಾನಸಭಾ ಅಭ್ಯರ್ಥಿ ಅಶ್ರಫ್ ಅಲಿ ಪಟೇಲ್ ಮಾತನಾಡಿ, ಕ್ಷೇತ್ರದಲ್ಲೆಡೆ ಕೆಜೆಪಿಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ಈಗಾಗಲೇ ಜಿಪಂ ಕ್ಷೇತ್ರಗಳಲ್ಲಿ ಹಾಗೂ ಹೋಬಳಿ ಕೇಂದ್ರಗಳಲ್ಲಿ ಕಾರ್ಯಕರ್ತರ ಸಮಾವೇಶ ನಡೆಯುತ್ತಿದ್ದು, ಎಲ್ಲೆಡೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ ಎಂದರು.
ಪಟ್ಟಣ ಘಟಕದ ಅಧ್ಯಕ್ಷ ರಾಜು ಮಹಾಜನ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶರೀಫಮೀಯಾ, ಪ್ರಮುಖರಾದ ಖಾದರ ಮಿಯಾ, ಹಬ್ಬಿಬ್ ಶಾನುಲ್ಲಾ ಹಕ್ಕ್, ಪೀಟರ್, ಡ್ಯಾನಿಯಲ್, ವೀರೂಪಾಕ್ಷ, ಇಸ್ಮಾಯಿಲ್ ರಾಠೋಡ, ಮಜ್ರ ಅತ್ತಾರ್ ಮತ್ತಿತರರ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

