ಬೀದರ್

ಮಕ್ಕಳಿಗೆ ವಿಟಮಿನ್ ಎ ಮಾತ್ರೆ ನೀಡಬೇಡಿ

Published On :

ಹುಮನಾಬಾದ್: ಶಿಕ್ಷಣ ಇಲಾಖೆಯಿಂದ ಶಾಲೆಗಳಿಗೆ ಸರಬರಾಜು ಆಗಿರುವ ವಿಟಮಿನ್ ಎ ಮಾತ್ರೆಯನ್ನು ಮಕ್ಕಳಿಗೆ ನೀಡಬಾರದೆಂದು ಶಿಕ್ಷಣ ಇಲಾಖೆ ತಿಳಿಸಿದೆ. ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿಯರು ವಿಟಮಿನ್ ಎ ಮಾತ್ರೆಗಳನ್ನು ತೆಗೆದುಕೊಂಡ ನಂತರ ಅಸ್ತವ್ಯಸ್ತಗೊಂಡು ತೊಂದರೆಗೀಡಾದ ಹಿನ್ನೆಲೆಯಲ್ಲಿ ಮಾತ್ರೆಗಳನ್ನು ಸಂಬಂಧಪಟ್ಟ ಇಲಾಖೆಯಿಂದ ತಪಾಸಣೆಗೆ ಒಳಪಡಿಸಲಾಗಿದೆ. ಹೀಗಾಗಿ ವರದಿ ಬರುವವರೆಗೆ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ವಿಟಮಿನ್ ಎ ಮಾತ್ರೆ ವಿತರಿಸಲಾಗಿದ್ದು, ವಿದ್ಯಾರ್ಥಿಗಳಿಗೆ ನೀಡಬಾರದೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೂಚಿಸಿದ್ದಾರೆ.
ಶಾಲೆ ವಾರ್ಷಿಕೋತ್ಸವ
ಹುಮನಾಬಾದ್: ಪಟ್ಟಣದ ವಿಶ್ವಭಾರತಿ ಶಾಲೆಯ ಶಾಲಾ ವಾರ್ಷಿಕೋತ್ಸವ ಫೆ.15ರಂದು ಸಂಜೆ 5.30ಕ್ಕೆ ನಡೆಯಲಿದೆ. ಪಂಡಿತ ದೀನದಯಾಳ ಬ್ಯಾಂಕಿನ ಅಧ್ಯಕ್ಷ ಶಿವಾನಂದ ಮಂಠಾಳಕರ್ ಕಾರ್ಯಕ್ರಮ ಉದ್ಘಾಟಿಸುವರು. ಸಂಸ್ಥೆಯ ಅಧ್ಯಕ್ಷ ಕಲಪ್ಪಾ ಭೋರೆಶ ಅಧ್ಯಕ್ಷತೆ ವಹಿಸುವರು. ವಿವೇಕಾನಂದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಾಣಿಕಪ್ಪಾ ಗಾದಾ, ಶರಣಪ್ಪ ಪಾಟೀಲ್, ಎಸ್.ಎ ಬಾಸೀದ್, ಬಿಇಒ ಬಾಬುಮಿಯ್ಯಾ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಮಾಣಿಕಪ್ಪ ಬಕ್ಕನ, ರಾಮಚಂದ್ರರಾವ್ ಕುಶೆ, ರವಿಂದ್ರಕುಮಾರ ಭಂಡಾರಿ, ರಾಜಕುಮಾರ ಭೂರೇಶ, ಗಿರಿಧರರೆಡ್ಡಿ ಉಪಸ್ಥಿತರಿರುವರು.
ತಾಲೂಕು ಕೇಂದ್ರಕ್ಕಾಗಿ ನಾಳೆ ಪ್ರತಿಭಟನೆ
ಹುಮನಾಬಾದ್: ಮನ್ನಾಏಖೇಳ್ಳಿ ಗ್ರಾಮವನ್ನು ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಬೇಕೆಂದು ಆಗ್ರಹಿಸಿ ತಾಲೂಕು ಹೋರಾಟ ಸಮಿತಿ ಫೆ.16ರಂದು ಪ್ರತಿಭಟನೆ ಹಮ್ಮಿಕೊಂಡಿದೆ. ಅಂದು ಬೆ.10ಕ್ಕೆ ಗ್ರಾಪಂ ಆವರಣದಲ್ಲಿ ಸೇರಿ ಬೃಹತ್ ಪ್ರತಿಭಟನೆಯ ಮೂಲಕ ಅಂಬೇಡ್ಕರ್ ವೃತ್ತದ ಬಳಿ ರಾಷ್ಟ್ರಿಯ ಹೆದ್ದಾರಿ ತಡೆ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೋರಾಟ ಸಮಿತಿ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.