ಬೀದರ್

ಆತ್ಮಹತ್ಯೆಗೀಡಾಗಿದ್ದ ಪಿಡಿಒ ತಂದೆ ನೇಣಿಗೆ ಶರಣು

Published On :

ಬೀದರ್: ಮೇಲಾಧಿಕಾರಿಗಳ ಕಿರುಕುಳದಿಂದ ಬೇಸತ್ತು ವರ್ಷದ ಹಿಂದೆ ಆತ್ಮಹತ್ಯೆ ಮಾಡಿಕೊಂಡ ಬ್ಯಾಲಹಳ್ಳಿ ಗ್ರಾಪಂ ಪಿಡಿಒ ವಿಜಯಕುಮಾರ ಸೂರ್ಯವಂಶಿ ಅವರ ತಂದೆ ಮಾಣಿಕರಾವ್, ಸರ್ಕಾರ ನ್ಯಾಯ ಒದಗಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಭಾನುವಾರ ಮಧ್ಯರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡಿರುವ ಮಾಣಿಕರಾವ್(55) ಅವರು ಮನ್ನಳ್ಳಿ ಸರ್ಕಾರಿ ಕಾಲೇಜಿನಲ್ಲಿ ಆಂಗ್ಲ ಉಪನ್ಯಾಸಕಾರಿ ಕಾರ್ಯ ನಿರ್ವಹಿಸುತ್ತಿದ್ದರು. ಪಿಡಿಒ ವಿಜಯಕುಮಾರ್ ಅವರ ಆತ್ಮಹತ್ಯೆ ರಾಜ್ಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು.
ನ್ಯಾಯ ದೊರೆತಿಲ್ಲ: ಮಗನ ಸಾವಿಗೆ ಕಾರಣರಾದವರು ರಾಜಾರೋಷವಾಗಿ ಬೀದಿಯಲ್ಲಿ ಅಲೆದಾಡುತ್ತಿದ್ದಾರೆ. ತಮಗೆ ಯಾವುದೇ ರೀತಿಯಲ್ಲಿ ಸರ್ಕಾರ ಸ್ಪಂದಿಸಿಲ್ಲ ಎಂದು ಮರಣಕ್ಕೂ ಮುನ್ನ ಪಿಎಸ್‌ಐ ಅವರ ಹೆಸರಿಗೆ ಇಂಗ್ಲಿಷ್ ಹಾಗೂ ಹಿಂದಿ ಭಾಷೆಯಲ್ಲಿ ನಾಲ್ಕು ಪುಟಗಳ ಡೆತ್‌ನೋಟ್ ಅನ್ನು ಮಾಣಿಕರಾವ್ ಬರೆದಿಟ್ಟಿದ್ದಾರೆ. ಅಧಿಕಾರಿಗಳ ಹಾಗೂ ರಾಜಕಾರಣಿಗಳ ಭ್ರಷ್ಟಾಚಾರದ ಕಿರುಕುಳಕ್ಕೆ ಬೇಸತ್ತ ಜಿಲ್ಲೆಯ ಬ್ಯಾಲಹಳ್ಳಿ ಮತ್ತು ಜ್ಯಾಂತಿ ಪಂಚಾಯ್ತಿಗಳ ಪಿಡಿಒ ಆಗಿದ್ದ ನಮ್ಮ ಮಗ ವಿಜಯಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದ. ಆತ್ಮಹತ್ಯೆಗೆ ಕಾರಣರಾದವರನ್ನು ಬಂಧಿಸಿ ಕ್ರಮ ಕೈಗೊಳ್ಳುವುದಾಗಿ ಅಂದಿನ ಗ್ರಾಮೀಣಾಭಿವೃದ್ಧಿ ಸಚಿವ ಹಾಗೂ ಈಗಿನ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಭರವಸೆ ನೀಡಿದ್ದರು. ಅಲ್ಲದೆ ಇನ್ನೊಬ್ಬ ಮಗ ಯಾದಗಿರಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಆತನನ್ನು ಬೀದರ್ ಜಿಲ್ಲೆಗೆ ವರ್ಗಾಯಿಸಿಕೊಡುವಂತೆ ಅಂಗಲಾಚಲಾಗಿತ್ತು. ನಮ್ಮ ಮನವಿಗೆ ತಲೆಯಾಡಿಸಿದ್ದ ಅಂದಿನ ಸಚಿವ ಇಂದಿನ ಮುಖ್ಯಮಂತ್ರಿ ತದನಂತರ ಚಕಾರ ಎತ್ತಿಲ್ಲದಿರುವುದು ಬೇಸರ ತಂದಿದೆ ಎಂದು ಡೆತ್‌ನೋಟ್‌ನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.