ಪ್ರತಿಭಟನಾ ರ್ಯಾಲಿ

Updated on

ಔರಾದ್: ಅಸಮರ್ಪಕ ವಿದ್ಯುತ್ ಸರಬರಾಜು ಖಂಡಿಸಿ ಹಾಗೂ ಅನಿಯಮಿತ ಲೋಡ್ ಶೆಡ್ಡಿಂಗ್ ವಿರೋಧಿಸಿ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಧಿಕ್ಕರಿಸಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಪಟ್ಟಣದಲ್ಲಿ ರ್ಯಾಲಿ ನಡೆಸಿ ಸರ್ಕಾರದ ಗಮನ ಸೆಳೆದರು.
ಸೋಮವಾರ ಬಿಜೆಪಿ ತಾಲೂಕು ಅಧ್ಯಕ್ಷ ಪ್ರಕಾಶ ಅಲ್ಮಾಜೆ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಪಟ್ಟಣದ ಕನ್ನಡಾಂಬೆ ವೃತ್ತದಿಂದ ಜೆಸ್ಕಾಂ ಕಚೇರಿವರೆಗೆ ರ್ಯಾಲಿ ನಡೆಸಿ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ್‌ರಿಗೆ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಪ್ರಮುಖರು, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರಾಜ್ಯದ ರೈತರ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ಕಿಡಿ ಕಾರಿದರು. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದಲೂ ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ತಲೆದೋರುತ್ತಿದೆ. ಸರ್ಕಾರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು. ರೈತ ಮೋರ್ಚಾ ಜಿಲ್ಲಾ ಪ್ರಮುಖ ಬಂಡೆಪ್ಪ ಕಂಟೆ ಮಾತನಾಡಿದರು. ಬಿಜೆಪಿ ತಾಲೂಕಾಧ್ಯಕ್ಷ ಪ್ರಕಾಶ ಅಲ್ಮಾಜೆ, ಕೀರಣ ಪಾಟೀಲ, ಕುಮಾರ ದೇಶಮುಖ, ಕಾಮಶೆಟ್ಟಿ ಭಾಲ್ಕೆ, ಚನ್ನಬಸಪ್ಪ ಬಿರಾದಾರ, ದಿನೇಶ ರಾಠೋಡ, ಶಿವರಾಜ ಅಲ್ಮಾಜೆ, ಅಶೋಕ ಅಲ್ಮಾಜೆ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು.

ಬಿಜೆಪಿ ಪ್ರತಿಭಟನೆ
ಬಸವಕಲ್ಯಾಣ: ತಾಲೂಕಿನಲ್ಲಿ ಅಸಮರ್ಪಕ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ ಎಂದು ಆರೋಪಿಸಿ ತಾಲೂಕು ಬಿಜೆಪಿ ಘಟಕದಿಂದ ಸೋಮವಾರ ನಗರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಪಕ್ಷದ ಕಚೇರಿಯಿಂದ ಮುಖ್ಯರಸ್ತೆಯ ಮೂಲಕ ಕೆಇಬಿ ಕಚೇರಿವರೆಗೆ ಬೃಹತ್ ಪ್ರತಿಭಟನೆ ನಡೆಸಿ ಕೆಇಬಿ ಕಚೇರಿಗೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಕಾರ್ಯಕರ್ತರು ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಶಿವರಾಜ ಗಂದಗೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರಿಗೆ ಸಮರ್ಪಕವಾಗಿ ವಿದ್ಯುತ್ ವಿತರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಆಡಳಿತ ಸಂಪೂರ್ಣ ಕುಸಿದಿದ್ದು, ಜಿಲ್ಲೆಯ ರೈತರು ವಿದ್ಯುತ್ ಸಮಸ್ಯೆಯಿಂದ ಬೆಳೆಗಳು ಒಣಗುತ್ತಿವೆ. ಕೂಡಲೇ ಸರ್ಕಾರ ರೈತರ ಅನುಕೂಲಕ್ಕಾಗಿ ಸಮರ್ಪಕವಾಗಿ ವಿದ್ಯುತ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿದರು.
ತಾಲೂಕು ಉಸ್ತುವಾರಿ ನಾರಾಯಣ ರಾಂಪೂರೆ, ತಾಲೂಕು ಅಧ್ಯಕ್ಷ ಸೂರ್ಯಕಾಂತ ಚಿಲ್ಲಾಬಟ್ಟೆ, ಮಹಾದೇವ ಹಲಸೆ, ರೈತ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ತಾತೆರಾವ ಲಂಬೆ, ಜಿಲ್ಲಾ ಉಪಾಧ್ಯಕ್ಷ ಜೈಹಿಂದ್ ಸಿಂದೆ, ಜಿಲ್ಲಾ ಎಸ್‌ಸಿ ಮೋರ್ಚಾ ಉಪಾಧ್ಯಕ್ಷ ಸಂಜು ಜಾಧವ, ನಗರ ಅಧ್ಯಕ್ಷ ಅರವಿಂದ ಮುತ್ತೆ, ತಾಲೂಕು ಪ್ರಧಾನ ಕಾರ್ಯದರ್ಶಿ ಶಂಕರ ನಾಗದೆ ಮಾತನಾಡಿದರು. ಜಿಲ್ಲಾ ಕಾರ್ಯದರ್ಶಿ ಶೋಭಾ ತೆಲಂಗ, ಜೀವನ ಪ್ರಕಾಶ ಬಡದಾಳೆ, ಬಾಲಿಕಾ ಪಾಟೀಲ್, ದಿಗಂಬರ ಜಲ್ದೆ, ಉಲ್ಕಾವತಿ ಬಿರಾದಾರ, ಹಣಮಂತ ದರ್ಜೆ, ನಗರಸಭೆ ಸದಸ್ಯ ಸಂಜು ಮೆಟಗೆ, ರವಿ ಕೊಳಕೂರ, ಗಯಾಬಾಯಿ ಪಾಲ್ಗೊಂಡಿದ್ದರು.

ಜೆಸ್ಕಾಂಗೆ ಮುತ್ತಿಗೆ
ಹುಮನಾಬಾದ್: ಅಸಮರ್ಪಕ ವಿದ್ಯುತ್ ಸರಬರಾಜು, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಧಿಕ್ಕರಿಸಿ ಬಿಜೆಪಿ ರೈತ ಮೋರ್ಚಾ ತಾಲೂಕು ಘಟಕದಿಂದ ಸೋಮವಾರ ಪಟ್ಟಣದ ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಯಿತು.
ಮಾಜಿ ಶಾಸಕ ಸುಭಾಷ ಕಲ್ಲೂರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶವಾನಂದ ಮಂಠಾಳಕರ್, ತಾಲೂಕು ಅಧ್ಯಕ್ಷ ಸೂರ್ಯಕಾಂತ ಮಠಪತಿ, ಓಂಕಾರ ತುಂಬಾ ಮತ್ತಿತರರ ನೇತೃತ್ವದಲ್ಲಿ ಶಿವಚಂದ್ರಜೀ ವೃತ್ತದಿಂದ ಅಂಬೇಡ್ಕರ್, ಶಿವಾಜಿ ವೃತ್ತದ ಮೂಲಕ ಜೆಸ್ಕಾಂ ಕಚೇರಿವರೆಗೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ, ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಜೆಸ್ಕಾಂ ಎಇಇ ಸಚಿನ್ ಹುಂಡೇಕರ್‌ರಿಗೆ ಸಲ್ಲಿಸಲಾಯಿತು.
ಮಾಜಿ ಶಾಸಕ ಸುಭಾಷ ಕಲ್ಲೂರು ಮಾತನಾಡಿ, ಜಿಲ್ಲೆಯಲ್ಲಿ ಸಂಪೂರ್ಣ ಬರಗಾಲ ಬಿದ್ದಿದ್ದು ವಿದ್ಯುತ್, ಕುಡಿಯುವ ನೀರು, ಜಾನುವಾರುಗೆ ಮೇವಿನ ಕೊರತೆ ತಲೆದೋರಿ ರೈತರು ಕಂಗಾಲಾಗಿದ್ದಾರೆ. ಬರಪೀಡಿತ ಜಿಲ್ಲೆಯೆಂದು ಘೋಷಣೆ ಮಾಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದರು. ರೈತ ಮೋರ್ಚಾ ತಾಲೂಕು ಅಧ್ಯಕ್ಷ ಓಂಕಾರ ಹುಡೇದ್, ತಾಲೂಕು ಅಧ್ಯಕ್ಷ ಸೂರ್ಯಕಾಂತ ಮಠಪತಿ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಂ. ಗಜೇಂದ್ರ, ಪ್ರಮುಖರಾದ ವಿಶ್ವನಾಥ ಪಾಟೀಲ್ ಮಾಡಗೂಳ್, ಅಣ್ಣಾರಾವ ಪುರುಷೋತ್ತಮ್, ರಾಜರೆಡ್ಡಿ ಪವಾಡೆ, ಬಾಬುರಾವ ಪಾಟೀಲ್, ಗಿರೀಶ ಪಾಟೀಲ್, ಮಹ್ಮದ ಜೈರೋದ್ದಿನ್, ಬಸವರಾಜ ವೀರಶೆಟ್ಟಿ, ವಿಠಲ ಮಕ್ಕೆ, ಚಂದ್ರಕಾಂತ ಸದಲಾಪುರ, ಸತೀಶ್ ರಜೇರಿ, ವಿಜಯಕುಮಾರ ದುರ್ಗದ, ಮಲೇಶಿ ಶಂಕರಶೆಟ್ಟಿ, ಬಾಬು ಜಾನವೀರ ಪಾಲ್ಗೊಂಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com