ಟಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ

Updated on: 

ಬೀದರ್: ರಾಜ್ಯದಲ್ಲಿ ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿತು.
ನಗರದ ಡಾ. ಅಂಬೇಡ್ಕರ್ ವೃತ್ತದಲ್ಲಿ ವೇದಿಕೆ ಜಿಲ್ಲಾಧ್ಯಕ್ಷ ಸಾವನ ವಾಗ್ಲೆ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಮೆರವಣಿಗೆ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.
ದಿನ ನಿತ್ಯ ಮಹಿಳೆಯರ ಮೇಲೆ ದೌರ್ಜನ್ಯ ಮತ್ತು ಗ್ಯಾಂಗ್ ರೇಪ್ ಭೂ ಮಾಫಿಯ ಆಗುತ್ತಿದ್ದರೂ ಗೃಹ ಇಲಾಖೆ ಮತ್ತು ಗೃಹ ಸಚಿವರು ಏನೂನಡೆಯುತ್ತಿಲ್ಲ ಎನ್ನುವ ಹಾಗೆ ಸುಮ್ಮನೆ ಕುಳಿತಿದೆ ಎಂದು ದೂರಿದರು. ರಾಜ್ಯದಲ್ಲಾಗುವ ದೌರ್ಜನ್ಯ ಪ್ರಕರಣಗಳು ರಾಜ್ಯ ಸರ್ಕಾರ ತಡೆ ಹಿಡಿಯಬೇಕು ಇದರ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಜಿಲ್ಲೆಯಿಂದ ವಿಧಾನ ಸೌಧಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಲಾಗುವುದು ಎಂದು ವೇದಿಕೆ ರಾಜ್ಯ ಸರ್ಕಾರಕ್ಕೆ ಎಚ್ಚರಿಸಿದೆ.
ಪ್ರತಿಭಟನೆಯಲ್ಲಿ ವಿಜಯ ಬಾಪೂರೆ, ಸುಭಾಷ ಮಿರ್ಜಾಪೂರ (ಕೆ), ಚಂದು ನೆಮತಾಬಾದ, ಮಾಣಿಕ ಕಣಜಿಕರ, ಪ್ರಶಾಂತ ಭಾವಿಕಟ್ಟಿ, ನವೀನ ಅಲ್ಲಪೂರ, ವೀರು ಮಂಡಲ, ವಿಜಯಕುಮಾರ ಭಾವಿಕಟ್ಟಿ, ಅಮರ ಪೂಜಾರಿ, ವಿಶಾಲ, ರಮೇಶ, ಜಗ್ಗು ಲಾಡಗೇರಿ ಮತ್ತಿತರರು ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com