ಔರಾದ್: ಬೆಂಗಳೂರಿನಲ್ಲಿ ಅತ್ಯಾಚಾರ ಪ್ರಕರಣದ ವಿರುದ್ಧ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ್ದನ್ನು ಖಂಡಿಸಿ ಪಟ್ಟಣದಲ್ಲಿ ಎಬಿವಿಪಿ ಮಿಂಚಿನ ಪ್ರತಿಭಟನೆ ನಡೆಸಿತು.
ಪಟ್ಟಣದಲ್ಲಿ ಸೋಮವಾರ ಉಪ ಕಾರಾಗೃಹ ಬಳಿ ಕಾರ್ಯಕರ್ತರು ಕೆಲಕಾಲ ಬೀದರ್- ನಾಂದೇಡ್ ರಾಜ್ಯ ಹೆದ್ದಾರಿ ತಡೆದು ಪ್ರತಿಭಟಿಸಿ ಗೃಹ ಸಚಿವರಿಗೆ ಬರೆದ ಮನವಿಯನ್ನು ತಹಸೀಲ್ದಾರ್ರಿಗೆ ಸಲ್ಲಿಸಿದರು. ನಂತರ ಮಾತನಾಡಿದ ಪರಿಷತ್ ಪ್ರಮುಖ ಅಶೋಕ ಶೆಂಬೆಳ್ಳೆ, ಪೊಲೀಸರು ವಿದ್ಯಾರ್ಥಿಗಳಿಗೆ ಸಹಕರಿಸುವ ಬದಲು ವಿದ್ಯಾರ್ಥಿಗಳ ಮೇಲೆ ಲಾಠಿ ಬೀಸಿದ್ದು ಖಂಡನೀಯ ಎಂದರು.