ಬೀದರ್: ರಾಜ್ಯ ಸರ್ಕಾರಿ ನೌಕರರ ಸಂಘವು ನೌಕರರ ಶ್ರೇಯೋಭಿವೃದ್ಧಿಯೊಂದಿಗೆ ಕ್ರೀಡೆ ಹಾಗೂ ಸಾಂಸ್ಕೃತಿಕ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿದ್ದು, ನೌಕರರಲ್ಲಿ ಅಡಗಿದ ಕಲೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಅ.4ರಿಂದ 6ರ ವರೆಗೆ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವ ಹಮ್ಮಿಕೊಳ್ಳಲಾಗಿದೆ.
ಬೆಂಗಳೂರು ನಗರದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಆ.4ರಿಂದ 6ರ ವರೆಗೆ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವ ಆಯೋಜಿಸಲಾಗಿದೆ.
ಸಾಂಸ್ಕೃತಿಕ ಉತ್ಸವದಲ್ಲಿ ಸಾಮಾಜಿಕ ನಾಟಕ, ಪೌರಾಣಿಕ ನಾಟಕ, ಜನಪದ ಗೀತೆ, ಭಾವಗೀತೆ, ನೃತ್ಯ ಪ್ರದರ್ಶನ, ಭರತನಾಟ್ಯ, ಕವಿಗೋಷ್ಠಿ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದೆ.
ಸ್ಪರ್ಧೆಗಳಲ್ಲಿ ಭಾಗವಹಿಸಲಿಚ್ಛಿಸುವ ಸರ್ಕಾರಿ ನೌಕರರು ಕಲಾ ತಂಡಗಳು ಸಂಪೂರ್ಣ ವಿವರಗದೊಂದಿಗೆ ಜು.27ರೊಳಗೆ ಸಂಪರ್ಕಿಸಬೇಕು. ಹೆಚ್ಚಿನ ವಿವರಗಳಿಗಾಗಿ ರಮೇಶ ಕೆ. ಮಠಪತಿ ಮೊ- 9449647281, ಯೋಗೇಂದ್ರ ಯದಲಾಪುರೆ ಮೊ- 9481219499ಕ್ಕೆ ಸಂಪರ್ಕಿಸಬೇಕೆಂದು ಸಂಘದ ಜಿಲ್ಲಾಧ್ಯಕ್ಷ ರಾಜೇಂದ್ರಕುಮಾರ ಗಂದಗೆ ತಿಳಿಸಿದ್ದಾರೆ.