ಅಧಿಕಾರಿಗಳ ಬೇಜವಾಬ್ದಾರಿತನದಿಂದ ಬೆಳೆ ಹಾನಿಯಾಗಿದ್ದರ ಬಗ್ಗೆ ತಪ್ಪು ವರದಿ ಸಲ್ಲಿಸಿದ್ದಾರೆ. ತಪ್ಪು ವರದಿಯ ಅನ್ವಯ ಬೇರೆಯವರಿಗೆ ಪರಿಹಾರ ನೀಡಲಾಗಿದೆ ಎಂದು ದೂರಿರುವ ರೈತರು, ನಮ್ಮ ಮೇಲೆ ಅನ್ಯಾಯವಾಗಿದೆ. ನಮಗೆ ವಿಷ ನೀಡಿ ಇಲ್ಲವೇ ಬೆಳೆ ಹಾನಿ ಪರಿಹಾರ ನೀಡಿ ಎಂದು ಆಗ್ರಹಿಸಿದರು.
ಅಧಿಕಾರಿಗಳ ಬೇಜವಾಬ್ದಾರಿ
ಇನ್ನು ಅಕಾಲಿಕ ಆಲಿಕಲ್ಲು ಮಳೆಯಿಂದ ಸಂಭವಿಸಿದ ಬೆಳೆನಾಶಕ್ಕೆ ಸಂಬಂಧಿಸಿದಂತೆ ಪರಿಹಾರ ನೀಡಿಕೆಯಲ್ಲಿ ಅಧಿಕಾರಿಗಳು ಗೋಲ್ಮಾಲ್ ಎಸಗಿದ್ದಾರೆ ಎಂದು ಆರೋಪಿಸಿರುವ ರೈತರು ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಅನರ್ಹ ಫಲಾನುಭವಿಗಳಿಗೆ ಪರಿಹಾರ ಸಿಗುವಂತಾಗಿದೆ ಎಂದರು.