ಮಹಿಳಾ ಸಬಲೀಕರಣದಿಂದ ಸದೃಢ ಸಮಾಜ
ಬಿಜಾಪುರ: ಮಹಿಳಾ ಸಬಲೀಕರಣ ಹಾಗೂ ಮಹಿಳಾ ವಿಮೋಚನೆಯಿಂದ ಮಾತ್ರ ಸದೃಢ ಸಮಾಜ ನಿರ್ಮಾಣ ಸಾಧ್ಯ ಎಂದು ಬೆಂಗಳೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ. ಮೀನಾ ದೇಶಪಾಂಡೆ ಹೇಳಿದರು.
ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ವಿಭಾಗ ಹಾಗೂ ಅಂಬೇಡ್ಕರ ಅಧ್ಯಯನ ಕೇಂದ್ರ ಇವುಗಳ ಸಂಯುಕ್ತ ಆಶ್ರಯದಲ್ಲಿ ಗಾಂಧಿ ನೆಹರು, ಅಂಬೇಡ್ಕರ ದೃಷ್ಟಿಯಲ್ಲಿ ಮಹಿಳಾ ವಿಮೋಚನೆ ಕುರಿತು ಇತ್ತೀಚೆಗೆ ಏರ್ಪಡಿಸಿದ್ದ ಒಂದು ದಿನ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ಪಾಂಡಿಚೇರಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ವಿ.ಟಿ. ಪಾಟೀಲ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿ, ಮಹಿಳಾ ವಿಮೋಚನೆಯಿಲ್ಲದೆ ಭಾರತದ ಆರ್ಥಿಕ ಮತ್ತು ಸಾಮಾಜಿಕ, ರಾಜಕೀಯ ಬೆಳವಣಿಗೆ ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕುಲಪತಿ ಪ್ರೊ. ಮೀನಾ ಚಂದಾವರಕರ ಮಾತನಾಡಿ, ಸಮಾನತೆ ತತ್ವಗಳು ಸಮಾನವಾಗಿ ಹರಿದು ಹೋದಾಗ ಮತ್ತು ಸಮಾನತೆಯನ್ನು ಸಮಾನವಾಗಿ ಕಂಡಾಗ ಸಮಾಜ ಸರ್ವತೋಮುಖ ಅಭಿವೃದ್ಧಿಯಾಗಲು ಸಾಧ್ಯ. ದೇಶದ ಅಭಿವೃದ್ಧಿ, ಬೆಳವಣಿಗೆಯಲ್ಲಿ ಸ್ತ್ರೀ ಮತ್ತು ಪುರುಷರ ಪಾತ್ರ ಸಮಾನವಾದದ್ದು ಎಂದು ಹೇಳಿದರು. ದೆಹಲಿ ವಿಶ್ವವಿದ್ಯಾಲಯದ ರಾಜಶಾಸ್ತ್ರ ಪ್ರಾಧ್ಯಾಪಕ ಡಾ. ಆರ್.ಡಿ. ಪಪ್ಪರ, ಕುಲಸಚಿವ ಪ್ರೊ. ಜಿ.ಆರ್.ನಾಯಕ ವೇದಿಕೆಯಲ್ಲಿದ್ದರು. ರಾಜಶಾಸ್ತ್ರ ವಿಭಾಗದ ಸಂಯೋಜಕ ಹಾಗೂ ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥ ಡಾ. ಎಂ.ಬಿ ದಿಲ್‌ಶ್ಯಾದ ಸ್ವಾಗತಿಸಿ, ನಿರೂಪಿಸಿದರು. ಅತಿಥಿ ಉಪನ್ಯಾಸಕ ರಂಜಿತ ಎನ್.ಪಿ. ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

