ವಾರ್ಷಿಕ ಸ್ನೇಹ ಸಮ್ಮೇಳನ
ನಾಲತವಾಡ: ಇಲ್ಲಿನ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಮಾ. 9ರಂದು 4 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ತಾಲೂಕು ಸಮಾಜ ಕಲ್ಯಾಣ ಅಧಿಕಾರಿ ಡಿ.ಎ. ಕಪಟಕರ ಉದ್ಘಾಟಿಸಲಿದ್ದಾರೆ. ಪ್ರಾಚಾರ್ಯ ಎಸ್.ಎಂ. ಸಂಕೇಶ್ವರಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಎಸ್.ಬಿ. ಚಲವಾದಿ ಆಗಮಿಸಲಿದ್ದಾರೆ. ಅತಿಥಿಗಳಾಗಿ ವೀರೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಎನ್. ಕಂಗಳ, ಸರ್ಕಾರಿ ಉರ್ದು ಪ್ರೌಢ ಶಾಲೆ ಪ್ರಾಚಾರ್ಯ ಎನ್.ಐ. ಕಗ್ಗೋಡ ಹಾಗೂ ನಾಲತವಾಡ ವ್ಯಾಪ್ತಿಯ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಎಂ.ಡಿ. ಅಮರಾವದಗಿ ಆಗಮಿಸಲಿದ್ದಾರೆ ಎಂದು ನಿಲಯ ಪಾಲಕರಾದ ಬಿ.ಎಸ್. ಪಟ್ಟೇದ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

