ನಾಲತವಾಡ: ಯಾದಗಿರಿ ಜಿಲ್ಲೆಯ ನಾರಾಯಣಪುರದ ಬಸವಸಾಗರ ಜಲಾಶಯದಿಂದ ಮಂಗಳವಾರ ಮಧ್ಯಾಹ್ನ 25 ಗೇಟ್‌ಗಳ ಮೂಲಕ 1.06 ಲಕ್ಷ ಕ್ಯುಸೆಕ್ ನೀರು ಹೊರಬಿಡಲಾಗಿದೆ. ಆಲಮಟ್ಟಿ ಜಲಾಶಯದ ಮೂಲಕ ನಾರಾಯಣಪುರ ಬಸವಸಾಗರ ಜಲಾಶಯಕ್ಕೆ 1.10 ಲಕ್ಷ ಕ್ಯುಸೆಕ್ ನೀರು ಹರಿದು ಬರುತ್ತಿದೆ. 492.250 ಮೀಟರ್ ನೀರಿನ ಸಾಮರ್ಥ್ಯ ಹೊಂದಿದ ಬಸವಸಾಗರ ಜಲಾಶಯದಲ್ಲಿ ಸದ್ಯ 490.980 ಮೀಟರ್ ನೀರು ಸಂಗ್ರಹವಿದೆ ಎಂದು ಇಲಾಖೆಯ ಮೂಲಗಳು ತಿಳಿಸಿವೆ.
Advertisement