5ರಂದು ರಾಜ್ಯಾದ್ಯಂತ ಡಿಎಸ್‌ಎಸ್ ಪ್ರತಿಭಟನೆ

Updated on

ಬಿಜಾಪುರ: ಎಡಿಜಿಪಿ ಡಾ. ರವೀಂದ್ರನಾಥ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಹಾಗೂ ರಾಜ್ಯದಲ್ಲಿ ದಲಿತ ಉನ್ನತಾಧಿಕಾರಿಗಳಿಗೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಜೂ.5ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದೆ ಎಂದು ಕರ್ನಾಟಕ ಸಮಿತಿ ರಾಜ್ಯ ಸಂಚಾಲಕ ಡಿ.ಜಿ. ಸಾಗರ ಹೇಳಿದರು.  ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಎಡಿಜಿಪಿ ಡಾ. ರವೀಂದ್ರನಾಥ ಅವರು ಮೊಬೈಲ್‌ನಲ್ಲಿ ಯುವತಿಯೊಬ್ಬಳ ಫೋಟೋ ಸೆರೆ ಹಿಡಿದಿದ್ದಾರೆ ಎಂದು ಆರೋಪಿಸಿ ಅವರನ್ನು ಪೊಲೀಸರು ಹೀನಾಯವಾಗಿ ನಡೆಸಿಕೊಂಡಿದ್ದಾರೆ. ಇದು ಬೆಂಗಳೂರು ನಗರ ಪೊಲೀಸ್ ಆಯುಕ್ತ ರಾಘವೇಂದ್ರ ಔರಾದಕರ ಅವರ ಷಡ್ಯಂತ್ರ. ಡಿಸಿಪಿ ರವಿಕಾಂತಗೌಡ ಅವರೂ ಈ ಷಡ್ಯಂತ್ರದಲ್ಲಿ ಭಾಗಿಯಾಗಿದ್ದಾರೆ. ರವಿಕಾಂತಗೌಡ ಅವರು ನಗರ ಪೊಲೀಸ್ ಆಯುಕ್ತ ಔರಾದಕರ ಅವರಿಗೆ ಸಾಥ್ ನೀಡಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com