ಇಂದು ವಿದ್ಯಾರ್ಥಿ ಸಂಘ ಉದ್ಘಾಟನೆ
ಚಾಮರಾಜನಗರ: ಜೆಎಸ್ಎಸ್ ಶಿಕ್ಷಣ ಮಹಾವಿದ್ಯಾಲಯದ 2012-13ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಫೆ.2ರಂದು ಬೆಳಗ್ಗೆ 11ಕ್ಕೆ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಜಿಪಂ ಅಧ್ಯಕ್ಷೆ ನಾಗಶ್ರೀ ಪ್ರತಾಪ್ ನೆರವೇರಿಸುವರು. ಡಿಡಿಪಿಐ ಚಂದ್ರೇಗೌಡ ಭಾಗವಹಿಸುವರು. ಅಧ್ಯಕ್ಷತೆಯನ್ನು ಜೆಎಸ್ಎಸ್ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲರಾದ ಎಂ.ಡಿ. ಪುಷ್ಪವತಿ ವಹಿಸುವರು.
ನಾಳೆ ಶಾಲಾ ವಾರ್ಷಿಕೋತ್ಸವ
ಚಾಮರಾಜನಗರ: ನಗರದ ಸೋಮವಾರಪೇಟೆಯಲ್ಲಿರುವ ಎಂಸಿಎಸ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ ಸಮಾರಂಭವನ್ನು ಫೆ.2ರಂದು ಸಂಜೆ 4 ಗಂಟೆಗೆ ಶಾಲಾ ಆವರಣದಲ್ಲಿ ಏರ್ಪಡಿಸಲಾಗಿದೆ. ಡಿಡಿಪಿಐ ಎನ್.ಚಂದ್ರೇಗೌಡ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಸಂಗಮ ಟ್ರಸ್ಟ್ನ ಅಧ್ಯಕ್ಷೆ ಎಂ. ಬಿ.ಮಹದೇವಮ್ಮ ವಹಿಸುವರು. ಅತಿಥಿಗಳಾಗಿ ಸಂಸದ ಆರ್. ಧ್ರುವನಾರಾಯಣ, ವಿಪ ಸದಸ್ಯ ಪ್ರೊ. ಕೆ.ಆರ್.ಮಲ್ಲಿಕಾರ್ಜುನಪ್ಪ, ಶಾಸಕ ಸಿ.ಪುಟ್ಟರಂಗಶೆಟ್ಟಿ, ಜಿಪಂ ಅಧ್ಯಕ್ಷೆ ನಾಗಶ್ರೀ ಪ್ರತಾಪ್, ನಗರಸಭಾ ಉಪಾಧ್ಯಕ್ಷೆ ಸೆಲ್ವಿಬಾಬು, ಸದಸ್ಯೆ ನೀಲಮ್ಮ ಭಾಗವಹಿಸುವರು.
ನಾಳೆ ಆದಿಶ್ರೀಗೆ ಶ್ರದ್ಧಾಂಜಲಿ
ಗುಂಡ್ಲುಪೇಟೆ: ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಫೆ.3ರಂದು ಬೆಳಗ್ಗೆ 11 ಗಂಟೆಗೆ ಆದಿ ಚುಂಚನಗಿರಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಪಟ್ಟಣದ ಮದ್ದಾನೇಶ್ವರ ವಿದ್ಯಾಸಂಸ್ಥೆ ಆವರಣದಲ್ಲಿ ಏರ್ಪಡಿಸಲಾಗಿದೆ. ಪಡಗೂರು ಅಡವಿ ಮಠಾಧೀಶರಾದ ಶಿವಲಿಂಗೇಂದ್ರ ಸ್ವಾಮೀಜಿ, ಮಾದಾಪಟ್ಟಣದ ವಿರಕ್ತ ಮಠಾಧೀಶ ಸದಾಶಿವ ಸ್ವಾಮಿ, ಸೋಮಹಳ್ಳಿ ಶಿಲಾ ಮಠಾಧೀಶರಾದ ಸಿದ್ದಮಲ್ಲ ಸ್ವಾಮಿ, ಚಿಕ್ಕತುಪ್ಪೂರು ಶಿವಪೂಜಾ ಮಠಾಧೀಶ ಚನ್ನವೀರ ಸ್ವಾಮಿ, ಹಂಗಳ ಹಳ್ಳದ ಮಠಾಧೀಶ ಜಡೇಸ್ವಾಮಿ ಸಾನಿಧ್ಯ ವಹಿಸಲಿದ್ದಾರೆ. ಶಾಸಕ ಎಚ್.ಎಸ್.ಮಹದೇವಪ್ರಸಾದ್ ಸಮಾರಂಭದ ಅಧ್ಯಕ್ಷತೆ ವಹಿಸುವರು. ಜಾನಪದ ತಜ್ಞ, ವಿಶ್ರಾಂತ ಪ್ರಾಧ್ಯಾಪಕ ಡಾ. ಪಿ.ಕೆ.ರಾಜಶೇಖರ್ ಗುರುವಂದನ ಭಾಷಣ ಮಾಡಲಿದ್ದಾರೆ ಎಂದು ತಾಲೂಕು ಒಕ್ಕಲಿಗರ ಸಂಘದ ಕಾರ್ಯದರ್ಶಿ ಕಳ್ಳೀಪುರ ರವಿ ತಿಳಿಸಿದ್ದಾರೆ.
ಯುವಜನ ಮೇಳ
ಚಾಮರಾಜನಗರ: ಜಿಪಂ ಹಾಗೂ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ವತಿಯಿಂದ ಫೆ.4ರಂದು ಗುಂಡ್ಲುಪೇಟೆ ಪಟ್ಟಣದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಜಿಲ್ಲಾ ಮಟ್ಟದ ಯುವಜನ ಮೇಳ ನಡೆಯಲಿದೆ. ಸಂಜೆ 4 ಗಂಟೆಗೆ ವಸತಿ ಸಚಿವ ಸೋಮಣ್ಣ ಉದ್ಘಾಟಿಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

